AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಸಣ್ಣ ಪಾತ್ರ, ಇಂದು ಸೂಪರ್​ ಸ್ಟಾರ್; ರಿಷಬ್ ಶೆಟ್ಟಿ ಬದುಕು ಬದಲಿಸಿದ ಸಿನಿಮಾ

Rishab Shetty Birthday: ಇಂದು 'ಡಿವೈನ್ ಸ್ಟಾರ್' ರಿಷಬ್ ಶೆಟ್ಟಿ ಅವರ ಜನ್ಮದಿನದ ಸಂಭ್ರಮ. ಈ ಸಂದರ್ಭದಲ್ಲಿ 13 ವರ್ಷಗಳ ಹಿಂದೆ ತೆರೆಕಂಡಿದ್ದ 'ಲೂಸಿಯಾ' ಚಿತ್ರದಲ್ಲಿ ಅವರು ನಿರ್ವಹಿಸಿದ್ದ ಸಣ್ಣ ಪೊಲೀಸ್ ಪಾತ್ರದ ಹಳೆಯ ವಿಡಿಯೋ ಭಾರಿ ವೈರಲ್ ಆಗಿದೆ. ಸಣ್ಣ ಪುಟ್ಟ ಪಾತ್ರಗಳಿಂದ ಚಿತ್ರರಂಗದ ಜರ್ನಿ ಆರಂಭಿಸಿ, ಇಂದು ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯ 'ಕಾಂತಾರ: ಚಾಪ್ಟರ್ 1' ಮೂಲಕ ವಿಶ್ವಮಟ್ಟದಲ್ಲಿ ಯಶಸ್ಸಿನ ಶಿಖರ ಏರಿ ನಿಂತಿರುವ ರಿಷಬ್ ಶೆಟ್ಟಿ ಅವರ ಈ ಕಠಿಣ ಪರಿಶ್ರಮ ಮತ್ತು ಸ್ಪೂರ್ತಿದಾಯಕ ಯಶಸ್ಸಿನ ಪಯಣ ಇಂದಿನ ತಲೆಮಾರಿಗೆ ಮಾದರಿಯಾಗಿದೆ.

ಅಂದು ಸಣ್ಣ ಪಾತ್ರ, ಇಂದು ಸೂಪರ್​ ಸ್ಟಾರ್; ರಿಷಬ್ ಶೆಟ್ಟಿ ಬದುಕು ಬದಲಿಸಿದ ಸಿನಿಮಾ
ರಿಷಬ್ ಶೆಟ್ಟಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 07, 2026 | 7:53 AM

Share

ಮುಖ್ಯಾಂಶಗಳು

  • 'ಲೂಸಿಯಾ' ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದ ರಿಷಬ್ ಶೆಟ್ಟಿ
  • ಬದುಕು ಬದಲಿಸಿದ ರಿಷಬ್ ವೃತ್ತಿಜೀವನ
  • ಸಣ್ಣ ಪುಟ್ಟ ಪಾತ್ರಗಳಿಂದ ಹಿಡಿದು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದ ರೋಚಕ ಹಾದಿ

ಇಂದು (ಜುಲೈ 7) ‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಅವರ ಜನ್ಮದಿನ. ಈ ವಿಶೇಷ ಸಂದರ್ಭದಲ್ಲಿ ಅವರ ಹಳೆಯ ಸಿನಿಮಾದ ಅಪರೂಪದ ಝಲಕ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸೌಂಡ್ ಮಾಡುತ್ತಿದೆ. ಭರ್ಜರಿ ಯಶಸ್ಸು ಕಂಡ ‘ಕಾಂತಾರ: ಚಾಪ್ಟರ್ 1’ ಚಿತ್ರದ ಮೂಲಕ ಇಡೀ ವಿಶ್ವದ ಗಮನ ಸೆಳೆದಿರುವ ರಿಷಬ್, ಚಿತ್ರರಂಗದಲ್ಲಿ ಇಂದು ಉನ್ನತ ಸ್ಥಾನದಲ್ಲಿದ್ದಾರೆ. ಆದರೆ, ಈ ಯಶಸ್ಸಿನ ಹಿಂದೆ ಅವರ ಕಠಿಣ ಪರಿಶ್ರಮವಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಅವರು ನಟಿಸಿದ್ದ 13 ವರ್ಷಗಳ ಹಳೆಯ ಚಿತ್ರದ ವಿಡಿಯೋವೊಂದು ಈಗ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದೆ.

‘ಲೂಸಿಯಾ’ ಚಿತ್ರದಲ್ಲಿ ಪೊಲೀಸ್ ಆಗಿದ್ದ ರಿಷಬ್

ಚಿತ್ರರಂಗದಲ್ಲಿ ನೆಲೆ ಕಂಡುಕೊಳ್ಳಲು ರಿಷಬ್ ಶೆಟ್ಟಿ ಆರಂಭದ ದಿನಗಳಲ್ಲಿ ಸಾಕಷ್ಟು ವಿಭಿನ್ನ ಕೆಲಸಗಳನ್ನು ಮಾಡಿದ್ದರು. ನಟನೆಯ ಆಸಕ್ತಿಯಿಂದ ಗಾಂಧಿನಗರಕ್ಕೆ ಬಂದ ಅವರು ಮೊದಲು ‘ತುಘಲಕ್’ ಸಿನಿಮಾದಲ್ಲಿ ಕೆಲಸ ಮಾಡಿದರು. ಆ ಬಳಿಕ, 2013ರಲ್ಲಿ ತೆರೆಕಂಡಿದ್ದ ಸೂಪರ್ ಹಿಟ್ ‘ಲೂಸಿಯಾ’ ಚಿತ್ರದಲ್ಲಿ ಒಂದು ಸಣ್ಣ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಪವನ್ ಕುಮಾರ್ ನಿರ್ದೇಶನದ, ನೀನಾಸಂ ಸತೀಶ್ ನಾಯಕನಾಗಿದ್ದ ಆ ಚಿತ್ರ ಆಗಿನ ಕಾಲಕ್ಕೆ ಹೊಸ ಅಲೆ ಸೃಷ್ಟಿಸಿತ್ತು. ಈಗ ವೈರಲ್ ಆಗಿರುವ ವಿಡಿಯೋದಲ್ಲಿ ರಿಷಬ್ ಅವರನ್ನು ಗುರುತಿಸಿರುವ ಅಭಿಮಾನಿಗಳು, ಅವರ ಹಳೆಯ ದಿನಗಳನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಅಂದು ಸಣ್ಣ ಪಾತ್ರ ಮಾಡಿದ್ದ ನಟ, ಇಂದು ಜಾಗತಿಕ ಮಟ್ಟದ ಸ್ಟಾರ್ ಆಗಿ ಬೆಳೆದಿರುವುದನ್ನು ನೋಡಿ ನೆಟ್ಟಿಗರು ಹೆಮ್ಮೆ ವ್ಯಕ್ತಪಡಿಸುತ್ತಿದ್ದಾರೆ.

ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ್ದ ‘ಕಾಂತಾರ: ಚಾಪ್ಟರ್ 1’

ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯು ಅತ್ಯಂತ ಅದ್ದೂರಿ ಬಜೆಟ್‌ನಲ್ಲಿ ನಿರ್ಮಿಸಿದ್ದ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಈಗಾಗಲೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ಮೊದಲ ಭಾಗಕ್ಕಿಂತಲೂ ಮಿಗಿಲಾದ ಮೇಕಿಂಗ್ ಹಾಗೂ ರೋಚಕ ಕಥಾಹಂದರ ಹೊಂದಿದ್ದ ಈ ಚಿತ್ರ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಸಂಪೂರ್ಣ ಯಶಸ್ವಿಯಾಗಿದೆ.

ಇದನ್ನೂ ಓದಿ: ‘ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ’; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್ ಶೆಟ್ಟಿ

ಈ ಪ್ರಿಕ್ವೆಲ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರ ನಟನೆ ಮತ್ತು ಭಿನ್ನ ಗೆಟಪ್ ಚಿತ್ರಪ್ರೇಮಿಗಳಿಗೆ ಮೈ ರೋಮಾಂಚನಗೊಳಿಸಿತ್ತು. ನಟಿ ರುಕ್ಮಿಣಿ ವಸಂತ್ ಈ ಚಿತ್ರದಲ್ಲಿ ನಾಯಕಿಯಾಗಿ ರಿಷಬ್‌ಗೆ ಸಾಥ್ ನೀಡಿದ್ದರು. ಅಂದು ಸಣ್ಣ ಪುಟ್ಟ ಪಾತ್ರಗಳ ಮೂಲಕ ಚಿತ್ರರಂಗದಲ್ಲಿ ಬದುಕು ಆರಂಭಿಸಿದ ಕರಾವಳಿಯ ಪ್ರತಿಭೆ, ಇಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಯಶಸ್ಸಿನ ಶಿಖರ ಏರಿ ನಿಂತಿರುವುದು ನಿಜಕ್ಕೂ ರೋಮಾಂಚನಕಾರಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಅಧಿಕ ಲಾಭ
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಅಧಿಕ ಲಾಭ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸುರಂಗದೊಳಗೆ ನುಗ್ಗಿದ ನೀರು; ರಸ್ತೆ ಬಂದ್
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸುರಂಗದೊಳಗೆ ನುಗ್ಗಿದ ನೀರು; ರಸ್ತೆ ಬಂದ್
ಇಂಡೋನೇಷ್ಯಾದಲ್ಲಿ ರಾಮಾಯಣದ ತೊಗಲು ಬೊಂಬೆಯಾಟ ನೋಡಿ ಅಚ್ಚರಿಗೊಂಡ ಮೋದಿ
ಇಂಡೋನೇಷ್ಯಾದಲ್ಲಿ ರಾಮಾಯಣದ ತೊಗಲು ಬೊಂಬೆಯಾಟ ನೋಡಿ ಅಚ್ಚರಿಗೊಂಡ ಮೋದಿ
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ
ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ: ಸಚಿವ ಖಾದರ್​​
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ: ಸಚಿವ ಖಾದರ್​​
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಹೇಗಿದೆ?
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಹೇಗಿದೆ?