AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್ ನಾಗ್​ಗೆ ಪದ್ಮಭೂಷಣ, ನೀವೇ ನನಗೆ ಸ್ಪೂರ್ತಿ ಎಂದ ರಿಷಬ್ ಶೆಟ್ಟಿ

Anant Nag: ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಆಗಿದೆ. ಅವರು ಚಿತ್ರರಂಗ ಮತ್ತು ರಂಗಭೂಮಿಗೆ ಸಲ್ಲಿಸಿರುವ ಸುದೀರ್ಘ ಮತ್ತು ಮೌಲ್ಯಯುತ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಅವರಿಗೆ ನೀಡಲಾಗಿದೆ. ಅನಂತ್ ನಾಗ್ ಅವರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಭಿನಂದನೆ ತಿಳಿಸಿದ್ದಾರೆ.

ಅನಂತ್ ನಾಗ್​ಗೆ ಪದ್ಮಭೂಷಣ, ನೀವೇ ನನಗೆ ಸ್ಪೂರ್ತಿ ಎಂದ ರಿಷಬ್ ಶೆಟ್ಟಿ
Anant Nag
ಮಂಜುನಾಥ ಸಿ.
|

Updated on: Jan 26, 2025 | 8:08 AM

Share

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್​ನಾಗ್​ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅನಂತ್​ ನಾಗ್ ಅವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ಪ್ರಶಸ್ತಿ ಘೋಷಿಸಿದೆ. ಆ ಮೂಲಕ ಕನ್ನಡ ಸಿನಿಮಾ ಪ್ರೇಮಿಗಳ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ಇದೀಗ ಕನ್ನಡ ಸಿನಿಮಾ ರಂಗದ ಪ್ರಮುಖ ನಟರು ಸೇರಿದಂತೆ ಹಲವಾರು ಮಂದಿ ಸೆಲೆಬ್ರಿಟಿಗಳು ಅನಂತ್ ನಾಗ್ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಅನಂತ್ ನಾಗ್ ಅವರಿಗೆ ಯಾರ ಹೇಗೆ ಅಭಿನಂದಿಸಿದ್ದಾರೆ, ಇಲ್ಲಿದೆ ಮಾಹಿತಿ.

ಅನಂತ್ ನಾಗ್ ಅವರೊಟ್ಟಿಗಿನ ಚಿತ್ರ ಹಂಚಿಕೊಂಡು ಟ್ವೀಟ್ ಮಾಡಿರುವ ರಿಷಬ್ ಶೆಟ್ಟಿ, ‘ನನ್ನ ಸ್ಪೂರ್ತಿಯಾಗಿರುವ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ದೊರೆತಿದ್ದಕ್ಕೆ ಅಭಿನಂದನೆಗಳು. ಚಿತ್ರರಂಗಕ್ಕೆ ಹಾಗೂ ನಾಟಕ ರಂಗಕ್ಕೆ ನಿಮ್ಮ ಸೇವೆ ತಲೆಮಾರುಗಳಿಗೆ ಸ್ಪೂರ್ತಿ ತುಂಬಿದೆ. ಸರಳತೆಯಲ್ಲಿ ಸಾಧಕತೆ ಅಡಗಿದೆ ಎಂದು ತೋರಿಸಿದ್ದಕ್ಕೆ ಧನ್ಯವಾದಗಳು. ಕನ್ನಡ ಚಿತ್ರರಂಗದ ರತ್ನ, ನಮ್ಮೆಲ್ಲರ ಪ್ರಿಯ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದ ಸುದ್ದಿ ಕೇಳಿ ಅಪಾರ ಸಂತೋಷವಾಯಿತು. ನಿಮ್ಮ ಕಲಾ ಸಾಧನೆ ಕನ್ನಡ ನಾಡಿನ ಕೀರ್ತಿಯನ್ನು ಹೆಚ್ಚಿಸಿದೆ. ನಿಮ್ಮ ಈ ಸಾಧನೆಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು’ ಎಂದಿದ್ದಾರೆ.

ಇದನ್ನೂ ಓದಿ:ನಟ ಅನಂತ್ ನಾಗ್ ಮುಡಿಗೆ ಪದ್ಮಭೂಷಣ ಪ್ರಶಸ್ತಿ

ಅನಂತ್ ನಾಗ್ ಅವರಿಗೆ ಒಂದೇ ರೀತಿಯ ಗಂಭೀರ ಪಾತ್ರಗಳನ್ನೇ ನಿರ್ದೇಶಕರುಗಳು ನೀಡುತ್ತಿದ್ದ ಸಮಯದಲ್ಲಿ ರಿಷಬ್ ಶೆಟ್ಟಿ ಅನಂತ್ ನಾಗ್ ಅವರನ್ನು ಭಿನ್ನವಾಗಿ ತೆರೆಯ ಮೇಲೆ ತೋರಿಸುವ ಪ್ರಯತ್ನ ಮಾಡಿದ್ದರು. ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪಾಠ ಶಾಲೆ ಕಾಸರಗೋಡು’ ಸಿನಿಮಾದಲ್ಲಿ ಅನಂತ್ ನಾಗ್ ಅವರಿಗೆ ಭಿನ್ನವಾದ ಪಾತ್ರವನ್ನು ನೀಡಿದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಅನಂತ್ ನಾಗ್ ಅವರನ್ನು ಭಿನ್ನ ರೀತಿಯಲ್ಲಿ ರಿಷಬ್ ಆ ಸಿನಿಮಾದಲ್ಲಿ ತೋರಿಸಿದ್ದರು.

ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ಸಿಗಬೇಕು ಎಂಬುದು ಬಹು ವರ್ಷದ ಬೇಡಿಕೆ ಆಗಿತ್ತು. ಕಳೆದ ವರ್ಷ ನಟ ಮೆಗಾಸ್ಟಾರ್ ಚಿರಂಜೀವಿಗೆ ಪದ್ಮ ವಿಭೂಷಣ ಘೋಷಣೆಯಾದಾಗಲೂ ಅನಂತ್ ನಾಗ್ ಅವರನ್ನು ನಿರ್ಲಕ್ಷ್ಯ ಮಾಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಲಾಗಿತ್ತು. ಆದರೆ ಈಗ ಕೊನೆಗೂ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ