‘Kantara 2’: ‘ಕಾಂತಾರ 2’ ಚಿತ್ರಕ್ಕೆ ನವೆಂಬರ್​ನಲ್ಲಿ ಶೂಟಿಂಗ್ ಶುರು? ರಿಲೀಸ್ ಯಾವಾಗ?

ಸದ್ಯ ರಿಷಬ್ ಅವರು ಸ್ಕ್ರಿಪ್ಟ್ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಆಗಸ್ಟ್ ತಿಂಗಳಲ್ಲೇ ಸಿನಿಮಾದ ಶೂಟಿಂಗ್ ಆರಂಭ ಆಗಬೇಕಿತ್ತು. ಆದರೆ, ಆ ರೀತಿ ಆಗಿಲ್ಲ. ಈಗ ನವೆಂಬರ್​ನಲ್ಲಿ ಸಿನಿಮಾದ ಚಿತ್ರೀಕರಣ ಪ್ರಾರಂಭಿಸಲು ತಂಡ ನಿರ್ಧರಿಸಿದೆ.

‘Kantara 2’: ‘ಕಾಂತಾರ 2’ ಚಿತ್ರಕ್ಕೆ ನವೆಂಬರ್​ನಲ್ಲಿ ಶೂಟಿಂಗ್ ಶುರು? ರಿಲೀಸ್ ಯಾವಾಗ?
ರಿಷಬ್
Follow us
ರಾಜೇಶ್ ದುಗ್ಗುಮನೆ
|

Updated on:Sep 29, 2023 | 11:08 AM

ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾ (Kanatara Movie) ರಿಲೀಸ್ ಆಗಿ ವರ್ಷ ಕಳೆದಿದೆ. ಸದ್ಯ ರಿಷಬ್ ಅವರು ‘ಕಾಂತಾರ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಪ್ರೀಕ್ವೆಲ್ ಸಿದ್ಧವಾಗಲಿದೆ ಎಂದು ರಿಷಬ್ (Rishab Shetty) ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈಗ ‘ಕಾಂತಾರ 2’ ಚಿತ್ರದ ಶೂಟಿಂಗ್ ಬಗ್ಗೆ ಹೊಸ ಅಪ್​ಡೇಟ್ ಸಿಕ್ಕಿದೆ. ಮೂಲಗಳ ಪ್ರಕಾರ ನವೆಂಬರ್​ನಲ್ಲಿ ಶೂಟಿಂಗ್ ಶುರುವಾಗಲಿದೆ ಎಂದು ವರದಿ ಆಗಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

‘ಕಾಂತಾರ’ ಸಿನಿಮಾದಲ್ಲಿ ಹಲವು ವಿಚಾರಗಳನ್ನು ಹೇಳಲಾಗಿದೆ. ದೈವದ ವಿಚಾರ ಹೈಲೈಟ್ ಆಗಿದೆ. ಈ ಚಿತ್ರವನ್ನು ಫ್ಯಾನ್ಸ್ ಸಖತ್ ಇಷ್ಟಪಟ್ಟರು. ರಿಷಬ್ ಶೆಟ್ಟಿ ಅವರು ನಟನಾಗಿ, ನಿರ್ದೇಶಕನಾಗಿ ಸಿನಿಮಾದಲ್ಲಿ ಗಮನ ಸೆಳೆದರು. ಚಿತ್ರಕ್ಕೆ ಸೀಕ್ವೆಲ್ ಬರಲಿದೆ ಎಂದು ಎಲ್ಲರೂ ಭಾವಿಸಿದ್ದರು. ‘ನೀವು ಈಗ ನೋಡಿದ್ದು ಎರಡನೇ ಭಾಗ. ಮುಂದೆ ಬರೋದು ಭಾಗ ಒಂದು’ ಎಂದು ರಿಷಬ್ ಘೋಷಣೆ ಮಾಡುವ ಮೂಲಕ ಎಲ್ಲರಿಗೂ ಸರ್​ಪ್ರೈಸ್ ನೀಡಿದ್ದರು.

ಸದ್ಯ ರಿಷಬ್ ಅವರು ಸ್ಕ್ರಿಪ್ಟ್ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಆಗಸ್ಟ್ ತಿಂಗಳಲ್ಲೇ ಸಿನಿಮಾದ ಶೂಟಿಂಗ್ ಆರಂಭ ಆಗಬೇಕಿತ್ತು. ಆದರೆ, ಆ ರೀತಿ ಆಗಿಲ್ಲ. ಈಗ ನವೆಂಬರ್​ನಲ್ಲಿ ಸಿನಿಮಾದ ಚಿತ್ರೀಕರಣ ಪ್ರಾರಂಭಿಸಲು ತಂಡ ನಿರ್ಧರಿಸಿದೆ. 2024ರ ಏಪ್ರಿಲ್-ಮೇ ತಿಂಗಳಲ್ಲಿ ಚಿತ್ರವನ್ನು ರಿಲೀಸ್ ಮಾಡಲು ತಂಡ ನಿರ್ಧರಿಸಿದೆ ಎನ್ನಲಾಗುತ್ತಿದೆ.

‘ಕಾಂತಾರ 2’ ಚಿತ್ರ ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗಲಿದೆ ಎಂದು ವರದಿ ಆಗಿತ್ತು. ಆದರೆ, ಈ ರೀತಿಯ ಆಲೋಚನೆ ರಿಷಬ್​ಗೆ ಇಲ್ಲವಂತೆ. ಸಣ್ಣ ಬಜೆಟ್​ನಲ್ಲಿ ಸಿನಿಮಾ ಮಾಡಿ ಹೆಚ್ಚಿನ ಲಾಭವನ್ನು ಕಂಡುಕೊಳ್ಳಲು ಅವರು ಪ್ಲ್ಯಾನ್ ಮಾಡಿದ್ದಾರೆ.

ಇದನ್ನೂ ಓದಿ: 10 ಸೈಮಾ ಪ್ರಶಸ್ತಿ ಪಡೆದ‘ಕಾಂತಾರ’; ‘ದೈವ ನರ್ತಕರು, ಅಪ್ಪು ಸರ್ ಹಾಗೂ ಕನ್ನಡಿಗರಿಗೆ ಸಮರ್ಪಣೆ’ ಎಂದ ರಿಷಬ್​ ಶೆಟ್ಟಿ

ಸೆಪ್ಟೆಂಬರ್ 30ಕ್ಕೆ ‘ಕಾಂತಾರ’ ರಿಲೀಸ್ ಆಗಿ ಒಂದು ವರ್ಷ ಕಳೆಯಲಿದೆ. ಈ ವೇಳೆ ಹೊಂಬಾಳೆ ಕಡೆಯಿಂದ ಹೊಸ ಘೋಷಣೆ ಆಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:47 am, Fri, 29 September 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್