AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಆ ವಿಶೇಷ ದಿನಕ್ಕೆ ಐದು ವರ್ಷ; ಪೋಸ್ಟ್ ಹಾಕಿ ನೆನಪಿಸಿಕೊಂಡ ರಿಷಬ್ ಶೆಟ್ಟಿ

ಮಕ್ಕಳಿದಲ್ಲದ ಕನ್ನಡ ಮಾಧ್ಯಮ  ಶಾಲೆಗಳನ್ನು ಮುಚ್ಚುವ ಆದೇಶ ಬಂದಿತ್ತು. ಇದರಿಂದ ಅನೇಕ ಮಕ್ಕಳಿಗೆ ಸಮಸ್ಯೆ ಆಯಿತು. ಇನ್ನು ಗಡಿ ಭಾಗದಲ್ಲಿ ಮಾತೃಭಾಷೆಯಲ್ಲಿ ಶಿಕ್ಷಣ ಸಿಗುತ್ತಿಲ್ಲ ಎನ್ನುವ ಆರೋಪ ಕೇಳಿ ಬಂತು. ಈ ಸಮಸ್ಯೆಗಳನ್ನು ಇಟ್ಟುಕೊಂಡು ರಿಷಬ್ ಶೆಟ್ಟಿ ಅವರು ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರವನ್ನು ತೆರೆಗೆ ತಂದರು.

Rishab Shetty: ಆ ವಿಶೇಷ ದಿನಕ್ಕೆ ಐದು ವರ್ಷ; ಪೋಸ್ಟ್ ಹಾಕಿ ನೆನಪಿಸಿಕೊಂಡ ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Aug 23, 2023 | 2:41 PM

Share

ರಿಷಬ್ ಶೆಟ್ಟಿ (Rishab Shetty) ಅವರು ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದಾರೆ. ‘ಕಾಂತಾರ’ ಚಿತ್ರದಿಂದ ಅವರ ಖ್ಯಾತಿ ವಿಶ್ವಮಟ್ಟಕ್ಕೆ ಹಬ್ಬಿದೆ. ಅವರ ಮುಂದಿನ ಚಿತ್ರಗಳ ಬಗ್ಗೆ ನಿರೀಕ್ಷೆ ಹೆಚ್ಚಿದೆ. ರಿಷಬ್ ಶೆಟ್ಟಿ ಅವರು ನಡೆದುಬಂದ ಹಾದಿಯನ್ನು ಮರೆತಿಲ್ಲ. ಇಂದು (ಆಗಸ್ಟ್ 23) ಅವರಿಗೆ ವಿಶೇಷ ದಿನ. ರಿಷಬ್  ವೃತ್ತಿ ಜೀವನಕ್ಕೆ ಮೈಲೇಜ್ ನೀಡಿದ ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರ ತೆರೆಗೆ ಬಂದು ಐದು ವರ್ಷಗಳು ಕಳೆದಿವೆ. ಆ ಬಗ್ಗೆ ರಿಷಬ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ರಿಷಬ್ ಶೆಟ್ಟಿ ಅವರು ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಅವರು ‘ರಿಕ್ಕಿ’ ಚಿತ್ರದ ಮೂಲಕ ನಿರ್ದೇಶಕರಾದರು. ಈ ಚಿತ್ರ 2016ರಲ್ಲಿ ರಿಲೀಸ್ ಆಯಿತು. ಬಳಿಕ ತೆರೆಗೆ ಬಂದ ‘ಕಿರಿಕ್ ಪಾರ್ಟಿ’ ರಿಷಬ್ ಶೆಟ್ಟಿ ವೃತ್ತಿ ಜೀವನದ ದಿಕ್ಕನ್ನೇ ಬದಲಿಸಿತು. ಯಾವುದೋ ಒಂದು ರೀತಿಯ ಮಾದರಿಗೆ ಕಟ್ಟುಬಿದ್ದವರಲ್ಲ ರಿಷಬ್. ಹೀಗಾಗಿ, ‘ಕಿರಿಕ್ ಪಾರ್ಟಿ’ ಬಳಿಕ ಅವರು ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರವನ್ನು ನಿರ್ದೇಶನ ಮಾಡಿದರು. 2018ರಲ್ಲಿ ಈ ಚಿತ್ರ ರಿಲೀಸ್ ಆಗಿ ಸೂಪರ್ ಹಿಟ್ ಎನಿಸಿಕೊಂಡಿತು. ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ಕೂಡ ಈ ಚಿತ್ರಕ್ಕೆ ಸಿಕ್ಕಿದೆ.

ಮಕ್ಕಳಿದಲ್ಲದ ಕನ್ನಡ ಮಾಧ್ಯಮ  ಶಾಲೆಗಳನ್ನು ಮುಚ್ಚುವ ಆದೇಶ ಬಂದಿತ್ತು. ಇದರಿಂದ ಅನೇಕ ಮಕ್ಕಳಿಗೆ ಸಮಸ್ಯೆ ಆಯಿತು. ಇನ್ನು ಗಡಿ ಭಾಗದಲ್ಲಿ ಮಾತೃಭಾಷೆಯಲ್ಲಿ ಶಿಕ್ಷಣ ಸಿಗುತ್ತಿಲ್ಲ ಎನ್ನುವ ಆರೋಪ ಕೇಳಿ ಬಂತು. ಈ ಸಮಸ್ಯೆಗಳನ್ನು ಇಟ್ಟುಕೊಂಡು ರಿಷಬ್ ಶೆಟ್ಟಿ ಅವರು ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರವನ್ನು ತೆರೆಗೆ ತಂದರು.

ಇದನ್ನೂ ಓದಿ: ಯಶ್, ರಿಷಬ್ ಶೆಟ್ಟಿ ಇಬ್ಬರೂ ಒಂದೇ ರೀತಿ: ಹೀಗ್ಯಾಕಂದರು ದುಲ್ಕರ್ ಸಲ್ಮಾನ್

ಬಹುತೇಕ ಮಕ್ಕಳೇ ನಟಿಸಿದ ಈ ಚಿತ್ರದಲ್ಲಿ, ಪ್ರಮೋದ್ ಶೆಟ್ಟಿ, ಅನಂತ್ ನಾಗ್ ಮೊದಲಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರಕ್ಕೆ ಐದು ವರ್ಷ ತುಂಬಿದ ಹಿನ್ನೆಲೆಯಲ್ಲಿ ರಿಷಬ್ ಅವರು ಮೇಕಿಂಗ್ ಹಾಗೂ ಸಿನಿಮಾದ ಕೆಲ ಪ್ರಮುಖ ದೃಶ್ಯಗಳನ್ನು ಜೋಡಿಸಿ ವಿಡಿಯೋ ಮಾಡಿದ್ದಾರೆ. ಅದನ್ನು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋಗೆ ‘ಕನಸು ಕಂಡ ಭಾಷೆಯಲ್ಲಿ ಮಗುವಿಗೆ ಶಿಕ್ಷಣ ಸಿಗಬೇಕೆಂಬ ಆಶಯ, ಕನಸು ಕಂಡ ಕಥೆಯನ್ನು ಜಗಕ್ಕೆ ಹೇಳಬೇಕೆಂಬ ಆಕಾಂಕ್ಷೆ, ಇದೆರಡೂ ಒಂದಾಗಿ ಕನಸೊಂದು ಸಿನಿಮಾವಾಗಿ ತೆರೆ ಮೇಲೆ ಮೂಡಿದ ಆ ದಿನಕ್ಕಿಂದು ಐದು ವರ್ಷ’ ಎಂದು ಅವರು ಕ್ಯಾಪ್ಷನ್ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!