AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿಯ ಸಿನಿಮಾ, ‘ಕಾಂತಾರ’ ಅಲ್ಲ

Rishab Shetty: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ 'ಕಾಂತಾರ' ಸಿನಿಮಾ ದೇಶ-ವಿದೇಶಗಳಲ್ಲಿ ಪ್ರದರ್ಶನ ಕಂಡಿದೆ. ಇದೀಗ ಅವರ ಇನ್ನೊಂದು ಸಿನಿಮಾ ಸಹ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ.

ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿಯ ಸಿನಿಮಾ, 'ಕಾಂತಾರ' ಅಲ್ಲ
ರಿಷಬ್ ಶೆಟ್ಟಿ
ಮಂಜುನಾಥ ಸಿ.
|

Updated on: Oct 10, 2023 | 10:16 PM

Share

ರಿಷಬ್ ಶೆಟ್ಟಿ (Rishab Shetty) ನಟಿಸಿ ನಿರ್ದೇಶನ ಮಾಡಿರುವ ‘ಕಾಂತಾರ‘ (Kantara) ಸಿನಿಮಾ ರಿಷಬ್​ಗೆ ದೊಡ್ಡ ಜನಪ್ರಿಯತೆ ತಂದುಕೊಟ್ಟಿದೆ. ‘ಕಾಂತಾರ’ ಸಿನಿಮಾ ದೇಶ ವಿದೇಶಗಳ ಸಿನಿ ಪ್ರೇಮಿಗಳನ್ನು ತಲುಪಿದೆ, ತಮ್ಮ ಸಿನಿಮಾದ ಜೊತೆಗೆ ರಿಷಬ್ ಶೆಟ್ಟಿ ಸಹ ಪಯಣಿಸಿದ್ದಾರೆ, ಪ್ರತಿಷ್ಠಿತರೊಟ್ಟಿಗೆ ವೇದಿಕೆ ಹಂಚಿಕೊಂಡಿದ್ದಾರೆ. ದೇಶ-ವಿದೇಶದ ಸಿನಿಮಾ ತಂತ್ರಜ್ಞರು, ಸಿನಿಮಾ ಪ್ರೇಮಿಗಳಿಂದ ಗೌರವ ಆದರಗಳನ್ನು ಪಡೆದುಕೊಂಡಿದ್ದಾರೆ. ಆದರೆ ‘ಕಾಂತಾರ’ ಸಿನಿಮಾದ ಜೊತೆಗೆ ರಿಷಬ್ ಶೆಟ್ಟಿಯ ಮತ್ತೊಂದು ಸಿನಿಮಾ ಸಹ ಇದೇ ಸಮಯದಲ್ಲಿ ಬಹುವಾಗಿ ವಿಶ್ವದ ಹಲವು ಸಿನಿಮಾ ಪ್ರೇಮಿಗಳ ಗಮನ ಸೆಳೆಯುತ್ತಿದೆ ಅದುವೇ ‘ಶಿವಮ್ಮ’.

ರಿಷಬ್ ಶೆಟ್ಟಿ ನಿರ್ಮಾಣದ ‘ಶಿವಮ್ಮ’ ಸಿನಿಮಾ ಹಲವು ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಭಾಗವಹಿಸಿದೆ, ಕೆಲವು ಚಲನಚಿತ್ರೋತ್ಸಗಳಲ್ಲಿ ಪ್ರಶಸ್ತಿಯನ್ನೂ ಗೆದ್ದಿದೆ. ಇದೀಗ ಭಾರತದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಒಂದಾದ ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿದೆ.

‘ಶಿವಮ್ಮ’ ಸಿನಿಮಾವು ಸರ್ಕಾರಿ ಶಾಲೆಯಲ್ಲಿ ಬಿಸಿಊಟ ಅಡುಗೆ ಮಾಡುವ ಮಹಿಳೆಯೊಬ್ಬಾಕೆ ಹೆಲ್ತ್​ ಪ್ರಾಡೆಕ್ಟ್ ಸೇಲ್ ಮಾಡುವ ನೆಟ್​ವರ್ಕಿಂಗ್ ಸಂಸ್ಥೆಯ ಏಜೆಂಟ್ ಆಗುವ ಕತೆ. ಸಿನಿಮಾದಲ್ಲಿ ನಟಿಸಿರುವ ಬಹುತೇಕರು ನಟನೆಯ ಹಿನ್ನೆಲೆ ಇರುವವರಲ್ಲ, ಬದಲಿಗೆ ಒಂದು ಹಳ್ಳಿಯ ಜನರೇ ಸಿನಿಮಾದಲ್ಲಿ ವಿವಿಧ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾವನ್ನು ಕೊಪ್ಪಳ ಜಿಲ್ಲೆಯ ಬಳಿ ಇರುವ ಯರೆಹೆಂಚಿನಾಳ್ ಹೆಸರಿನ ಹಳ್ಳಿಯೊಂದರಲ್ಲಿ ಚಿತ್ರೀಕರಣ ಮಾಡಲಾಗಿದೆ.

ಇದನ್ನೂ ಓದಿ:ರಿಷಬ್ ಶೆಟ್ಟಿಗೆ ಖುಲಾಯಿಸಿದ ಅದೃಷ್ಟ, ಲಗಾನ್ ನಿರ್ದೇಶಕನ ಸಿನಿಮಾದಲ್ಲಿ ನಾಯಕ?

ಸಿನಿಮಾವನ್ನು ಜೈಶಂಕರ್ ಆರ್ಯರ್ ನಿರ್ದೇಶನ ಮಾಡಿದ್ದು, ಸಿನಿಮಾಕ್ಕೆ ಬಂಡವಾಳ ಹೂಡಿರುವುದು ನಟ, ನಿರ್ದೇಶಕ ರಿಷಬ್ ಶೆಟ್ಟಿ. ಸಿನಿಮಾವು ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅತ್ಯಂತ ಮೆಚ್ಚುಗೆ ಪಡೆದ ರಿಷಬ್ ಶೆಟ್ಟಿ ಸಂಸ್ಥೆಯ ಹೆಮ್ಮೆಯ ಚಲನಚಿತ್ರ, “ಶಿವಮ್ಮ,” ಬುಸಾನ್ ಚಲನಚಿತ್ರೋತ್ಸವ ಸೇರಿದಂತೆ ಜಗತ್ತಿನಾದ್ಯಂತ ಹಲವಾರು ಪ್ರತಿಷ್ಠಿತ ಚಲನಚಿತ್ರೋತ್ಸವಗಳ ಮೂಲಕ ಒಂದು ವರ್ಷದ ಪ್ರಯಾಣದ ನಂತರ ಅಂತಿಮವಾಗಿ ಭಾರತಕ್ಕೆ ಆಗಮಿಸಲಿದೆ. ಇರಾನ್‌ನಲ್ಲಿ ನಡೆದ ಫಜರ್ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಗೆದ್ದ ಮೊದಲ ಕನ್ನಡ ಚಿತ್ರ ಎಂಬ ಖ್ಯಾತಿಯನ್ನು ಈ ಸಿನಿಮಾ ಪಡೆದಿದೆ.

ಸಿನಿಮಾದ ಟ್ರೈಲರ್ ಅಕ್ಟೋಬರ್ 10ರಂದು ರಿಷಬ್ ಶೆಟ್ಟಿ ಫಿಲಮ್ಸ್ ಯೂಟ್ಯೂಬ್ ಚಾನೆಲ್​ನಲ್ಲಿ ಬಿಡುಗಡೆ ಆಗಿದೆ. ಸಿನಿಮಾವನ್ನು ನೈಜತೆಗೆ ಅತಿ ಹೆಚ್ಚು ಹತ್ತಿರವಾಗಿದೆ. ಈ ಹಿಂದೆ ರಿಷಬ್ ಶೆಟ್ಟಿ ‘ಪೆಡ್ರೊ’ ಹೆಸರಿನ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಆ ಸಿನಿಮಾ ಸಹ ಹಲವು ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡು ಪ್ರಶಸ್ತಿಯನ್ನು ಗಳಿಸಿಕೊಂಡಿತ್ತು. ಇದೀಗ ಅವರದ್ದೇ ನಿರ್ಮಾಣದ ‘ಶಿವಮ್ಮ’ ಸಹ ಹಲವು ಪ್ರತಿಷ್ಠಿತ ಚಲನಚಿತ್ರೋತ್ಸಗಳಲ್ಲಿ ಪ್ರದರ್ಶನ ಕಂಡು ಪ್ರಶಸ್ತಿ ಗೆಲ್ಲುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ