ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ದೇಶ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ಅವರು ಕಾಲಿವುಡ್, ಬಾಲಿವುಡ್, ಟಾಲಿವುಡ್ನಲ್ಲಿ ನಟಿಸುತ್ತಿದ್ದಾರೆ. ಹಲವು ಸ್ಟಾರ್ಗಳ ಜತೆ ತೆರೆ ಹಂಚಿಕೊಂಡಿದ್ದಾರೆ. ರಶ್ಮಿಕಾ ಖ್ಯಾತಿ ಸದ್ಯಕ್ಕಂತೂ ಕಡಿಮೆ ಆಗುವಂಥದ್ದಲ್ಲ. ರಶ್ಮಿಕಾ ಮಂದಣ್ಣ ಅವರಿಗೆ ಇಷ್ಟೊಂದು ಖ್ಯಾತಿ ಸಿಗಲು ಕಾರಣ ಆಗಿದ್ದು ರಿಷಬ್ ಶೆಟ್ಟಿ ನಿರ್ದೇಶನದ ಕನ್ನಡದ ‘ಕಿರಿಕ್ ಪಾರ್ಟಿ’ ಚಿತ್ರ. ರಶ್ಮಿಕಾ ಇಷ್ಟು ಎತ್ತರಕ್ಕೆ ಬೆಳೆಯಲು ಈ ಚಿತ್ರ ಪ್ರಮುಖ ಪಾತ್ರವಹಿಸಿದೆ. ‘ಕಿರಿಕ್ ಪಾರ್ಟಿ’ ಬಳಿಕ ಹಲವು ಆಫರ್ಗಳು ಅವರನ್ನು ಹುಡುಕಿ ಬಂದವು. ಇದು ರಶ್ಮಿಕಾಗೂ ತಿಳಿದಿದೆ. ಆದರೆ, ರಶ್ಮಿಕಾ ಕೆಲವೊಮ್ಮೆ ಇದನ್ನು ಮರೆತು ಬಿಡುತ್ತಾರೆ! ಈಗಲೂ ಅದೇ ರೀತಿ ಮಾಡಿದ್ದಾರೆ. ಇದಕ್ಕೆ ರಿಷಬ್ ಶೆಟ್ಟಿ (Rishab Shetty) ತಿರುಗೇಟು ನೀಡಿದ್ದಾರೆ.
ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಯೂಟ್ಯೂಬ್ ಚಾನೆಲ್ ಒಂದಕ್ಕೆ ಸಂದರ್ಶನ ನೀಡುತ್ತಾ, ತಮ್ಮ ಜರ್ನಿ ಬಗ್ಗೆ ವಿವರಿಸಿದ್ದರು. ಮಾಡೆಲ್ ಆಗಿ ಬಣ್ಣದ ಬದುಕು ಆರಂಭಿಸಿದೆ, ಪೇಪರ್ನಲ್ಲಿ ಫೋಟೋ ಬಂತು ಎಂಬಿತ್ಯಾದಿ ವಿಚಾರಗಳನ್ನು ಅವರು ಹೇಳಿಕೊಂಡಿದ್ದಾರೆ. ಆ ಬಳಿಕ ಮೊದಲ ಸಿನಿಮಾ ಆಫರ್ ಬಂತು ಎನ್ನುವಾಗ ಅವರು ನಿರ್ಮಾಣ ಸಂಸ್ಥೆಯ ಹೆಸರನ್ನು ಎಲ್ಲಿಯೂ ಉಲ್ಲೇಖ ಮಾಡಿಲ್ಲ. ಬದಲಿಗೆ ಕೈಗಳಿಂದ ಕೋಟ್ ರೀತಿಯಲ್ಲಿ ಸನ್ನೆ ಮಾಡಿ ತೋರಿಸಿದ್ದಾರೆ. ಈ ವಿಡಿಯೋಗೆ ಅನೇಕರು ಅಸಮಾಧಾನ ಹೊರ ಹಾಕಿದ್ದಾರೆ. ರಶ್ಮಿಕಾ ಮಂದಣ್ಣ ಅವರು ಈ ರೀತಿ ನಡೆದುಕೊಂಡಿದ್ದು ಅನೇಕರಿಗೆ ಇಷ್ಟವಾಗಿಲ್ಲ.
ಈ ವಿಡಿಯೋನ ರಿಷಬ್ ಶೆಟ್ಟಿ ಕೂಡ ಗಮನಿಸಿದಂತಿದೆ. ಮತ್ತೊಂದು ಸಂದರ್ಶನದಲ್ಲಿ ರಿಷಬ್ ಇದಕ್ಕೆ ತಿರುಗೇಟು ನೀಡಿದ್ದಾರೆ. ‘ರಶ್ಮಿಕಾ, ಸಮಂತಾ, ಕೀರ್ತಿ ಸುರೇಶ್, ಸಾಯಿ ಪಲ್ಲವಿ ಇವರೆಲ್ಲರೂ ಒಳ್ಳೆಯ ಕಲಾವಿದರು. ಇವರಲ್ಲಿ ಯಾರ ಜತೆ ಕೆಲಸ ಮಾಡಲು ಇಷ್ಟಪಡುತ್ತೀರಿ’ ಎಂದು ಸಂದರ್ಶಕರು ರಿಷಬ್ಗೆ ಪ್ರಶ್ನೆ ಮಾಡಿದ್ದರು. ಇದಕ್ಕೆ ಅವರು ಉತ್ತರಿಸಿದ್ದಾರೆ.
The Journey of two “✌️✌️” pic.twitter.com/rbGrdli6K9
— MNV Gowda (@MNVGowda) November 21, 2022
ಇದನ್ನೂ ಓದಿ: ಒಟ್ಟೊಟ್ಟಿಗೆ ಇನ್ಸ್ಟಾಗ್ರಾಮ್ಗೆ ಮರಳಿದ ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ
‘ನಾನು ಕಥೆ ಹಾಗೂ ಸ್ಕ್ರಿಪ್ಟ್ ಮುಗಿದ ಬಳಿಕ ಯಾವ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದನ್ನು ಯೋಚಿಸುತ್ತೇನೆ. ಹೊಸಬರ ಜತೆ ಕೆಲಸ ಮಾಡಲು ನಾನು ಇಷ್ಟಪಡುತ್ತೇನೆ. ನೀವು ನೀಡಿದ ಲಿಸ್ಟ್ನಲ್ಲಿ ಈ ರೀತಿ ಸ್ಟೈಲ್ನ (ಕೋಟ್ ರೀತಿಯಲ್ಲಿ ಸನ್ನೆ ಮಾಡುವ) ನಟಿಯರು ನನಗೆ ಇಷ್ಟವಾಗುವುದಿಲ್ಲ. ಸಾಯಿ ಪಲ್ಲವಿ, ಸಮಂತಾ ನನಗೆ ಇಷ್ಟ’ ಎಂದಿದ್ದಾರೆ ರಿಷಬ್. ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ.
Published On - 7:49 am, Wed, 23 November 22