AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂತಾರ ಪ್ರೀಕ್ವೆಲ್ ಕೆಲಸ ಎಲ್ಲಿಯವರೆಗೆ ಬಂತು? ರಿಷಬ್ ಶೆಟ್ಟಿ ಕೊಟ್ಟರು ಉತ್ತರ

‘ಕಾಂತಾರ 2’ ಸಾಕಷ್ಟು ಹೈಪ್ ಪಡೆದುಕೊಂಡಿರುವ ಸಿನಿಮಾ. ಈ ಚಿತ್ರದ ಸ್ಕ್ರಿಪ್ಟ್​ ಕೆಲಸಗಳು ಪೂರ್ಣಗೊಂಡಿವೆ. ಇಷ್ಟು ಹೈಪ್ ಇರುವುದರಿಂದ ಅದನ್ನು ದೊಡ್ಡ ಮಟ್ಟದಲ್ಲಿ ಲಾಂಚ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.

ಕಾಂತಾರ ಪ್ರೀಕ್ವೆಲ್ ಕೆಲಸ ಎಲ್ಲಿಯವರೆಗೆ ಬಂತು? ರಿಷಬ್ ಶೆಟ್ಟಿ ಕೊಟ್ಟರು ಉತ್ತರ
ರಿಷಬ್-ಕಾಂತಾರ 2
ರಾಜೇಶ್ ದುಗ್ಗುಮನೆ
|

Updated on:Aug 06, 2023 | 9:11 AM

Share

ನಟ ರಿಷಬ್ ಶೆಟ್ಟಿ (Rishab Shetty) ನಿರ್ದೇಶಿಸಿ, ನಟಿಸಿರುವ ‘ಕಾಂತಾರ 2’ ಸಿನಿಮಾ (Kantara 2 Movie) ಕಳೆದ ವರ್ಷ ರಿಲೀಸ್ ಆಗಿ ಭರ್ಜರಿ ಯಶಸ್ಸು ಕಂಡಿತು. ಈ ಚಿತ್ರದ ಮೂಲಕ ರಿಷಬ್ ಶೆಟ್ಟಿ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆದರು. ಸದ್ಯ ಅವರ ಗಮನ ‘ಕಾಂತಾರ 2’ ಮೇಲಿದೆ. ಈ ಚಿತ್ರದ ಶೂಟಿಂಗ್ ಆಗಸ್ಟ್​​ನಿಂದ ಆರಂಭ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ಸದ್ಯಕ್ಕೆ ಆ ಬಗ್ಗೆ ಯಾವುದೇ ಅಪ್​ಡೇಟ್ ಇಲ್ಲ. ಈಗ ರಿಷಬ್ ಶೆಟ್ಟಿ ಅವರು ಸಿನಿಮಾ ಕುರಿತು ಮಾತನಾಡಿದ್ದಾರೆ.

ರಾಜ್ ಬಿ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಟೋಬಿ’ ಸಿನಿಮಾ ಆಗಸ್ಟ್ 25ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದೊಂದು ರಿವೇಂಜ್ ಕಥೆ ಎನ್ನಲಾಗಿದೆ. ಇತ್ತೀಚೆಗೆ ಚಿತ್ರದ ಟ್ರೇಲರ್ ರಿಲೀಸ್ ಆಗಿ ಗಮನ ಸೆಳೆದಿದೆ. ರಿಷಬ್ ಹಾಗೂ ರಕ್ಷಿತ್ ಅವರು ಈ ಚಿತ್ರದ ಟ್ರೇಲರ್ ರಿಲೀಸ್ ಮಾಡಿದ್ದಾರೆ. ಬಳಿಕ ಅವರು ಟಿವಿ9 ಕನ್ನಡ ಜೊತೆಗೆ ಮಾತಿಗೆ ಸಿಕ್ಕರು.

ಬೇರೆಯವರ ಸಿನಿಮಾದ ಟ್ರೇಲರ್ ಲಾಂಚ್​ಗೆ ಬಂದಾಗ ತಮ್ಮ ಸಿನಿಮಾ ಬಗ್ಗೆ ಹೇಳೋಕೆ ಯಾರೂ ಇಷ್ಟಪಡುವುದಿಲ್ಲ. ರಿಷಬ್ ಶೆಟ್ಟಿ ಕೂಡ ಇದಕ್ಕೆ ಹೊರತಾಗಿಲ್ಲ. ‘ಕಾಂತಾರ 2 ಸಿನಿಮಾದ ಕೆಲಸಗಳು ಎಲ್ಲಿಯವರೆಗೆ ಬಂತು’ ಎಂದು ಕೇಳಲಾಯಿತು. ಇದಕ್ಕೆ ರಿಷಬ್ ತಮ್ಮದೇ ಶೈಲಿಯಲ್ಲಿ ಉತ್ತರಿಸಿದ್ದಾರೆ. ‘ಆಗಸ್ಟ್​ 25ಕ್ಕೆ ಟೋಬಿ ಬರ್ತಿದೆ. ಸೆಪ್ಟೆಂಬರ್ 1ರಂದು ಸಪ್ತ ಸಾಗರದಾಚೆ ಎಲ್ಲೋ ಚಿತ್ರ ರಿಲೀಸ್ ಆಗುತ್ತಿದೆ. ಅದನ್ನು ನೋಡಿ. ನಮ್ಮ ಸಿನಿಮಾ ಬರೋಕೆ ಇನ್ನು ಸಾಕಷ್ಟು ಸಮಯವಿದೆ’ ಎಂದರು.

‘ಕಾಂತಾರ 2’ ಸಾಕಷ್ಟು ಹೈಪ್ ಪಡೆದುಕೊಂಡಿರುವ ಸಿನಿಮಾ. ಈ ಚಿತ್ರದ ಸ್ಕ್ರಿಪ್ಟ್​ ಕೆಲಸಗಳು ಪೂರ್ಣಗೊಂಡಿವೆ. ಇಷ್ಟು ಹೈಪ್ ಇರುವಾಗ ಅದನ್ನು ದೊಡ್ಡ ಮಟ್ಟದಲ್ಲಿ ಲಾಂಚ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿರುತ್ತದೆ. ಹೀಗಾಗಿ ಸಾರ್ವಜನಿಕ ವೇದಿಕೆಗಳಲ್ಲಿ ಈ ಬಗ್ಗೆ ತಂಡ ಮಾಹಿತಿ ಬಿಟ್ಟುಕೊಡಲು ಇಷ್ಟಪಡುವುದಿಲ್ಲ.

ಇದನ್ನೂ ಓದಿ: ಮೆಲ್ಬರ್ನ್‌ನ ಭಾರತೀಯ ಚಲನಚಿತ್ರೋತ್ಸವ 2023: ನಾಮಿನೇಟ್ ಆದ ‘ಕಾಂತಾರ’, ‘ಹದಿನೇಳೆಂಟು’ ಸಿನಿಮಾ

‘ಕಾಂತಾರ 2’ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡುತ್ತಿದೆ. ಮೊದಲ ಭಾಗದಲ್ಲಿ ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್ ಮೊದಲಾದವರು ನಟಿಸಿದ್ದರು. ಪ್ರೀಕ್ವೆಲ್​ನಲ್ಲಿ ಯಾರೆಲ್ಲ ನಟಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:56 am, Sun, 6 August 23

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು