ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಇಬ್ಬರು ಕನ್ನಡಿಗರು

forbes india Showstoppers 2026: ಪ್ರತಿಷ್ಠಿತ ಫೋರ್ಬ್ಸ್ ತನ್ನ ಈ ವರ್ಷದ 100 ಪ್ರಭಾವಿ ಸೆಲೆಬ್ರಿಟಿಗಳ ಪಟ್ಟಿಯನ್ನು ಬಿಡುಗಡೆ ಆಗಿದೆ. ಅಲ್ಲು ಅರ್ಜುನ್, ಫೋರ್ಬ್ಸ್ ಕವರ್ ಪೇಜಿನಲ್ಲಿ ಮಿಂಚಿದ್ದರೆ, ಈ ಬಾರಿ ಇಬ್ಬರು ಕನ್ನಡಿಗರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ನಟ ರಿಷಬ್ ಶೆಟ್ಟಿ ಅವರು ಈ ಬಾರಿ ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ವಿಶೇಷ.

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಇಬ್ಬರು ಕನ್ನಡಿಗರು
Rishab Shetty

Updated on: Aug 28, 2026 | 2:54 PM

ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ (Forbers) ದೇಶದ 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯನ್ನು ಬಿಡುಡಗೆ ಮಾಡಿದೆ. ಈ ಪಟ್ಟಿಯಲ್ಲಿ ಸಾಮಾನ್ಯವಾಗಿ ಬಾಲಿವುಡ್​​ ಮಂದಿಯೇ ಕಾಣುತ್ತಿದ್ದರು. ಆದರೆ ಇದೀಗ ದಕ್ಷಿಣದ ಮಂದಿ ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ವಿಶೇಷವಾಗಿ ಕನ್ನಡಿಗ ರಿಷಬ್ ಶೆಟ್ಟಿ ಅವರು ಈ ಬಾರಿ ಫೋರ್ಬ್ಸ್ ಇಂಡಿಯಾ ಭಾರತದ ಪ್ರಭಾವಿ 100 ಸೆಲೆಬ್ರಿಟಿಗಳಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದಾರೆ. ಆ ಮೂಲಕ ಕನ್ನಡ ಚಿತ್ರರಂಗದ ಹಿರಿಮೆಯನ್ನು ಜಾಗತಿಕ ಮಟ್ಟದಲ್ಲಿ ಮೆರೆಸಿದ್ದಾರೆ.

ಅಲ್ಲು ಅರ್ಜುನ್, ಆಮಿರ್ ಖಾನ್, ರಜನೀಕಾಂತ್, ಅಮಿತಾಬ್ ಬಚ್ಚನ್ ಇನ್ನೂ ಹಲವು ಸೂಪರ್ ಸ್ಟಾರ್ ನಟರುಗಳು ಈ ಬಾರಿಯ ಫೋರ್ಬ್ಸ್ ಇಂಡಿಯಾ ಶೋಸ್ಪಾರ್ಸ್​ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಕನ್ನಡದ ರಿಷಬ್ ಶೆಟ್ಟಿ ಸಹ ಇವರಲ್ಲಿ ಒಬ್ಬರಾಗಿದ್ದಾರೆ. ಮಾತ್ರವಲ್ಲದೆ, ಈ ವರ್ಷ ಈ ಪಟ್ಟಿಯಲ್ಲಿ ಇಬ್ಬರು ಕನ್ನಡಿಗರು ಸ್ಥಾನ ಪಡೆದಿದ್ದು, ಅವರಲ್ಲಿ ರಿಷಬ್ ಶೆಟ್ಟಿ ಸಹ ಒಬ್ಬರು. ಸಿನಿಮಾ ವಿಭಾಗದಲ್ಲಿ ರಿಷಬ್ ಶೆಟ್ಟಿ ಸ್ಥಾನ ಪಡೆದರೆ, ಬರಹಗಾರರ ವಿಭಾಗದಲ್ಲಿ ಕನ್ನಡದ ಖ್ಯಾತ ಬರಹಗಾರ್ತಿ ಭಾನು ಮುಷ್ತಾಕ್ ಸ್ಥಾನ ಪಡೆದಿದ್ದಾರೆ.

ಈ ಬಾರಿ ದಕ್ಷಿಣದ ಹಲವಾರು ಸೆಲೆಬ್ರಿಟಿಗಳು ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಮೋಹನ್​​ಲಾಲ್, ಮಮ್ಮುಟಿ, ದುಲ್ಕರ್ ಸಲ್ಮಾನ್, ಕಲ್ಯಾಣಿ ಪ್ರಿಯದರ್ಶನ್, ಆರ್ ಮಾಧವನ್, ರಜನೀಕಾಂತ್, ಅನಿರುದ್ಧ್ ರವಿಚಂದ್ರನ್, ಎಆರ್ ರೆಹಮಾನ್, ರಾಮ್ ಚರಣ್, ಸೂರ್ಯ ಇನ್ನೂ ಹಲವರು ಈ ಪಟ್ಟಿಯಲ್ಲಿದ್ದಾರೆ. ಬಾಲಿವುಡ್ ನಟರಾದ ಆಮಿರ್ ಖಾನ್, ಶಾರುಖ್ ಖಾನ್, ರಣ್ವೀರ್ ಸಿಂಗ್, ‘ಧುರಂಧರ್’ ನಿರ್ದೇಶಕ ಆದಿತ್ಯ ಧರ್ ಮತ್ತು ಅವರ ಪತ್ನಿ ಯಾಮಿ ಗೌತಮ್ ಇನ್ನೂ ಹಲವರು ಪಟ್ಟಿಯಲ್ಲಿದ್ದಾರೆ.

ಇದನ್ನೂ ಓದಿ:ಎರಡನೇ ದಿನವೂ ಅಬ್ಬರಿಸಿದ ‘ಟಾಕ್ಸಿಕ್’; ಭರ್ಜರಿ ಗಳಿಕೆ ಮಾಡಿದ ಯಶ್ ಸಿನಿಮಾ

ರಿಷಬ್ ಶೆಟ್ಟಿ ಅವರು ನಟಿಸಿ, ನಿರ್ದೇಶನ ಮಾಡಿದ್ದ ‘ಕಾಂತಾರ’ ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾಗಳು ದೊಡ್ಡ ಹಿಟ್ ಆಗಿವೆ. ಈ ಎರಡೂ ಸಿನಿಮಾಗಳು ಕನ್ನಡ ಚಿತ್ರರಂಗದ ಗರಿಮೆಯನ್ನು ವಿಶ್ವಮಟ್ಟದಲ್ಲಿ ಸಾರಿರುವ ಜೊತೆಗೆ ರಿಷಬ್ ಶೆಟ್ಟಿ ಅವರನ್ನು ಪ್ಯಾನ್ ಇಂಡಿಯಾ ಸ್ಟಾರ್ ಅನ್ನಾಗಿ ಮಾಡಿದೆ.

ರಿಷಬ್ ಶೆಟ್ಟಿ ಪ್ರಸ್ತುತ ತೆಲುಗು ಪ್ಯಾನ್ ಇಂಡಿಯಾ ಸಿನಿಮಾ ‘ಜೈ ಹನುಮಾನ್’ನಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಅನ್ನು ಪ್ರಶಾಂತ್ ವರ್ಮಾ ನಿರ್ದೇಶನ ಮಾಡುತ್ತಿದ್ದು, ತೆಲುಗಿನ ಜನಪ್ರಿಯ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡುತ್ತಿದೆ. ಈ ಸಿನಿಮಾನಲ್ಲಿ ವಾಮಿಕಾ ಗಬ್ಬಿ ನಾಯಕಿಯಾಗಿ ನಟಿಸುತ್ತಿದ್ದಾರೆ. ‘ಕಾಂತಾರ ಚಾಪ್ಟರ್ 2’ ಸಿನಿಮಾ ಅನ್ನು ಸಹ ರಿಷಬ್ ಶೆಟ್ಟಿ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us