ಬ್ರಹ್ಮಕಲಶ: 1 ಮಿಲಿಯನ್ ಇನ್‌ಸ್ಟಾಗ್ರಾಮ್ ರೀಲ್ಸ್ ಮೈಲಿಗಲ್ಲು ತಲುಪಿದ ಮೊದಲ ಕನ್ನಡ ಹಾಡು

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಹಾಡುಗಳು ಮಾಡಿದ ದಾಖಲೆ ಸಣ್ಣದಲ್ಲ. ಅಜನೀಶ್ ಲೋಕನಾಥ್ ಸಂಗೀತದಲ್ಲಿ ಮೂಡಿಬಂದ ಹಾಡುಗಳು ಈಗಲೂ ಸದ್ದು ಮಾಡುತ್ತಿವೆ. ಇನ್​ಸ್ಟಾಗ್ರಾಮ್ ರೀಲ್ಸ್​ನಲ್ಲಿ ಈಗಲೂ ‘ಬ್ರಹ್ಮಕಲಶ’ ಹಾಡು ಟ್ರೆಂಡಿಂಗ್​ನಲ್ಲಿದೆ. 10 ಲಕ್ಷಕ್ಕೂ ಅಧಿಕ ರೀಲ್ಸ್ ಮೂಲಕ ಈ ಹಾಡು ದಾಖಲೆ ಬರೆದಿದೆ.

ಬ್ರಹ್ಮಕಲಶ: 1 ಮಿಲಿಯನ್ ಇನ್‌ಸ್ಟಾಗ್ರಾಮ್ ರೀಲ್ಸ್ ಮೈಲಿಗಲ್ಲು ತಲುಪಿದ ಮೊದಲ ಕನ್ನಡ ಹಾಡು
Rishab Shetty

Updated on: Jul 19, 2026 | 12:21 PM

ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಈವರೆಗಿನ ವೃತ್ತಿಜೀವನದಲ್ಲೇ ಅತಿ ದೊಡ್ಡ ಸಕ್ಸಸ್ ಎನಿಸಿಕೊಂಡ ‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾದ ಬಗ್ಗೆ ಹೊಸದಾಗಿ ಹೇಳಬೇಕಾಗಿದ್ದಿಲ್ಲ. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸಿ, ಬಾಕ್ಸ್ ಆಫೀಸ್ ಉಡೀಸ್ ಮಾಡಿದ ಬೆನ್ನಲ್ಲೇ ಈಗ ಮತ್ತೊಂದು ಅಪರೂಪದ ಸಾಧನೆಯನ್ನು ಈ ಸಿನಿಮಾ ಮಾಡಿದೆ. ಚಿತ್ರ ಬಿಡುಗಡೆಯಾಗಿ ಒಂದು ವರ್ಷ ಕಳೆಯುತ್ತಿದ್ದರೂ ಇದರ ಕ್ರೇಜ್ ಮಾತ್ರ ಕಮ್ಮಿಯಾಗಿಲ್ಲ ಎಂಬುದಕ್ಕೆ ಈ ಹೊಸ ದಾಖಲೆಯೇ ಸಾಕ್ಷಿ. ಖ್ಯಾತ ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್ ಸಂಯೋಜನೆಯ, ಚಿತ್ರದ ಅತ್ಯಂತ ಜನಪ್ರಿಯ ಭಕ್ತಿಗೀತೆ ‘ಬ್ರಹ್ಮಕಲಶ’ (Brahmakalasha) ಈಗ ಇನ್‌ಸ್ಟಾಗ್ರಾಮ್‌ನಲ್ಲಿ 1 ಮಿಲಿಯನ್ (10 ಲಕ್ಷಕ್ಕೂ ಹೆಚ್ಚು) ರೀಲ್ಸ್ ದಾಟಿದ ಮೊದಲ ಕನ್ನಡ ಚಲನಚಿತ್ರ ಗೀತೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ‘ಬ್ರಹ್ಮಕಲಶ’ ಹವಾ:

ಚಿತ್ರದ ಬಿಡುಗಡೆಯ ದಿನದಿಂದಲೇ ‘ಬ್ರಹ್ಮಕಲಶ’ ಹಾಡು ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿತ್ತು. ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ, ನಟಿ ರುಕ್ಮಿಣಿ ವಸಂತ್ ಅವರ ನಟನೆ, ಅಜನೀಶ್ ಸಂಗೀತ, ಅಭಿ ವಿ. ಗಾಯನದಿಂದ ಈ ಹಾಡು ಪ್ರತಿಯೊಬ್ಬರನ್ನು ರೋಮಾಂಚನಗೊಳಿಸಿತ್ತು. ಕೇವಲ ಸಾಮಾನ್ಯ ಜನರು ಮಾತ್ರವಲ್ಲದೇ ಹಲವು ಸೆಲೆಬ್ರಿಟಿಗಳು ಈ ಹಾಡಿಗೆ ರೀಲ್ಸ್ ಮಾಡಿದ್ದಾರೆ.

‘ಬ್ರಹ್ಮಕಲಶ’ ಟ್ರ್ಯಾಕ್ ಬಳಸಿ ಈಗಲೂ ಹಲವಾರು ಮಂದಿ ರೀಲ್ಸ್ ಮಾಡುತ್ತಿದ್ದಾರೆ. ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಈ ಹಾಡಿನದ್ದೇ ಕಾರುಬಾರು ಜೋರಾಗಿದ್ದು, ಸದ್ಯದಲ್ಲೇ ಈ ದಾಖಲೆಯನ್ನು ಮುರಿಯುವುದು ಬೇರೆ ಯಾವುದೇ ಚಿತ್ರಕ್ಕೂ ಸುಲಭವಲ್ಲ ಎನ್ನಲಾಗುತ್ತಿದೆ. ಚಿತ್ರದಲ್ಲಿ ಕರಾವಳಿಯ ಸಂಸ್ಕೃತಿ ಮತ್ತು ದೈವಾರಾಧನೆಯ ಹಿನ್ನೆಲೆಯನ್ನು ಆಳವಾಗಿ ತೋರಿಸಲಾಗಿದೆ.

ಇದನ್ನೂ ಓದಿ: ಬಿಗ್ ಅಪ್​ಡೇಟ್​; ಕಾಂತಾರ: ಚಾಪ್ಟರ್ 2 ಸ್ಕ್ರಿಪ್ಟ್ ಆರಂಭಿಸಿದ ರಿಷಬ್ ಶೆಟ್ಟಿ

ಚಿತ್ರದ ಭರ್ಜರಿ ಯಶಸ್ಸು ಮತ್ತು ಮ್ಯೂಸಿಕ್ ಹಿಟ್

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಈ ಡಿವೋಶನಲ್ ಚಿತ್ರವು ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯ ಹೆಮ್ಮೆಯ ಪ್ರಾಜೆಕ್ಟ್ ಆಗಿದೆ. ಕಥೆ, ಮೇಕಿಂಗ್, ವಿಶುವಲ್ಸ್ ಮಾತ್ರವಲ್ಲದೆ ಸಿನಿಮಾದ ಪ್ರತಿಯೊಂದು ಹಾಡುಗಳು ಮತ್ತು ಹಿನ್ನೆಲೆ ಸಂಗೀತವು ಚಿತ್ರದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿವೆ. ಕಾಂತಾರ ಮೊದಲ ಭಾಗದ ‘ಸಿಂಗಾರ ಸಿರಿಯೇ’ ಹಾಡು ಹೇಗೆ ಮನೆಮಾತಾಗಿತ್ತೋ, ಅದೇ ರೀತಿ ‘ಕಾಂತಾರ: ಚಾಪ್ಟರ್ 1’ ಚಿತ್ರದ ಹಾಡುಗಳು ಕೂಡ ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us