Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ಧೂಳೆಬ್ಬಿಸಿದ ‘ಕಾಂತಾರ’ ಟ್ರೇಲರ್​; ಹೇಗಿದೆ ರಿಷಬ್​ ಶೆಟ್ಟಿ-ಕಿಶೋರ್​ ಮುಖಾಮುಖಿ?

Kantara Movie Trailer: ‘ಕಾಂತಾರ’ ಟ್ರೇಲರ್​ ಗಮನ ಸೆಳೆಯುತ್ತಿದೆ. ರಿಷಬ್​ ಶೆಟ್ಟಿ ಈ ಸಿನಿಮಾಗೆ ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಪಾತ್ರವನ್ನೂ ನಿಭಾಯಿಸಿದ್ದಾರೆ.

Kantara: ಧೂಳೆಬ್ಬಿಸಿದ ‘ಕಾಂತಾರ’ ಟ್ರೇಲರ್​; ಹೇಗಿದೆ ರಿಷಬ್​ ಶೆಟ್ಟಿ-ಕಿಶೋರ್​ ಮುಖಾಮುಖಿ?
ರಿಷಬ್ ಶೆಟ್ಟಿ, ಕಿಶೋರ್
Follow us
TV9 Web
| Updated By: ಮದನ್​ ಕುಮಾರ್​

Updated on:Sep 05, 2022 | 5:28 PM

ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ (Hombale Films) ಬ್ಯಾನರ್​ ಮೂಲಕ ಅನೇಕ ಸಿನಿಮಾಗಳು ನಿರ್ಮಾಣ ಆಗುತ್ತಿವೆ. ‘ಕೆಜಿಎಫ್​: ಚಾಪ್ಟರ್​ 2’ ಯಶಸ್ಸಿನ ಬಳಿಕ ಈ ನಿರ್ಮಾಣ ಸಂಸ್ಥೆಯ ಖ್ಯಾತಿ ವಿಶ್ವಮಟ್ಟದಲ್ಲಿ ಹಬ್ಬಿದೆ. ನಿರ್ಮಾಪಕ ವಿಜಯ್​ ಕಿರಗಂದೂರು ಅವರು ಅನೇಕರಿಗೆ ಅವಕಾಶ ನೀಡುತ್ತಿದ್ದಾರೆ. ಎಲ್ಲ ರೀತಿಯ ಸಿನಿಮಾಗಳು ಕೂಡ ಈ ಸಂಸ್ಥೆ ಮೂಲಕ ತಯಾರಾಗುತ್ತಿವೆ. ಖ್ಯಾತ ನಟ-ನಿರ್ದೇಶಕ ರಿಷಬ್​ ಶೆಟ್ಟಿ (Rishab Shetty) ಅವರ ಬತ್ತಳಿಕೆಯಿಂದ ‘ಕಾಂತಾರ’ (Kantara Kannada Movie) ಚಿತ್ರ ಹೊರಬರುತ್ತಿದೆ. ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿರುವುದು ಕೂಡ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ. ಈಗ ಈ ಸಿನಿಮಾದ ಟ್ರೇಲರ್​ ರಿಲೀಸ್​ ಆಗಿದೆ. ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಬಾರಿ ವೀಕ್ಷಣೆ ಕಾಣುವ ಮೂಲಕ ಹೈಪ್​ ಸೃಷ್ಟಿಸಿದೆ.

‘ಕಾಂತಾರ’ ಸಿನಿಮಾದ ಮೇಕಿಂಗ್​ ಗಮನ ಸೆಳೆಯುವಂತಿದೆ. ತಾಂತ್ರಿಕವಾಗಿ ಈ ಚಿತ್ರ ತುಂಬ ಅದ್ದೂರಿಯಾಗಿ ನಿರ್ಮಾಣ ಆಗಿದೆ ಎಂಬುದಕ್ಕೆ ಟ್ರೇಲರ್​ ಸಾಕ್ಷಿ ಒದಗಿಸುತ್ತಿದೆ. ಅಜನೀಶ್​ ಬಿ. ಲೋಕನಾಥ್​ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಟ್ರೇಲರ್​ನಲ್ಲಿ ಹಿನ್ನೆಲೆ ಸಂಗೀತ ಸಖತ್​ ಹೈಲೈಟ್​ ಆಗಿದೆ. ಅರವಿಂದ್​ ಎಸ್​. ಕಶ್ಯಪ್​ ಛಾಯಾಗ್ರಹಣದ ಬಗ್ಗೆ ಜನರು ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ‘ಕಾಂತಾರ’ ಟ್ರೇಲರ್​ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ
Image
Prabhas: ‘ಸಲಾರ್​’ ನೋಡಲು ಇನ್ನೂ 1 ವರ್ಷ ಕಾಯಬೇಕು; ರಿಲೀಸ್​ ಡೇಟ್​ ತಿಳಿಸಿದ ‘ಹೊಂಬಾಳೆ ಫಿಲ್ಮ್ಸ್​’
Image
‘ಕಾರಣಾಂತರಗಳಿಂದ ನಿಮ್ಮಿಷ್ಟದ ರಸದೌತಣ ಸ್ವಲ್ಪ ವಿಳಂಬವಾಗುತ್ತಿದೆ’; ಹೊಂಬಾಳೆ ಫಿಲ್ಮ್ಸ್ ಹೊಸ ಘೋಷಣೆ
Image
ಹೊಂಬಾಳೆ ಜತೆ ಸಿನಿಮಾ ಮಾಡಲಿದ್ದಾರೆ ಮಾಜಿ ಮಿಸ್​ ವರ್ಲ್ಡ್​ ಮಾನುಷಿ ಚಿಲ್ಲರ್​? ಕುತೂಹಲ ಮೂಡಿಸಿದ ಭೇಟಿ
Image
‘ಹೊಂಬಾಳೆ ಫಿಲ್ಮ್ಸ್​’ ಹೊಸ ಚಿತ್ರ ಅನೌನ್ಸ್​; ಈ ಬಾರಿ ಚಾನ್ಸ್​ ಪಡೆದಿದ್ದು ಲೇಡಿ ಡೈರೆಕ್ಟರ್​ ಸುಧಾ ಕೊಂಗರ

ಈ ಸಿನಿಮಾಗೆ ರಿಷಬ್​ ಶೆಟ್ಟಿ ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಪಾತ್ರವನ್ನೂ ನಿಭಾಯಿಸಿದ್ದಾರೆ. ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಅಚ್ಯುತ್​ ಕುಮಾರ್​, ಪ್ರಮೋದ್​ ಶೆಟ್ಟಿ, ಕಿಶೋರ್​ ಮುಂತಾದವರು ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಇಡೀ ಟ್ರೇಲರ್​ನಲ್ಲಿ ಕಿಶೋರ್​ ಮತ್ತು ರಿಷಬ್​ ಶೆಟ್ಟಿ ನಡುವಿನ ಮುಖಾಮುಖಿ ದೃಶ್ಯಗಳು ಆಕರ್ಷಕವಾಗಿ ಮೂಡಿಬಂದಿವೆ. ಪೊಲೀಸ್​ ಅಧಿಕಾರಿಯ ಪಾತ್ರಕ್ಕೆ ಕಿಶೋರ್​ ಬಣ್ಣ ಹಚ್ಚಿದ್ದಾರೆ. ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ನೋಡಲು ಸಿನಿಪ್ರಿಯರು ಕಾದಿದ್ದಾರೆ.

ಕರಾವಳಿ ಭಾಗದ ಅರಣ್ಯ ಪ್ರದೇಶ, ಅಲ್ಲಿನ ಸಂಸ್ಕೃತಿ, ಜಾನಪದ ಕಲೆಗಳು, ಭೂತಾರಾಧನೆ, ಕಂಬಳ ಸೇರಿದಂತೆ ಅನೇಕ ವಿಚಾರಗಳು ‘ಕಾಂತಾರ’ ಟ್ರೇಲರ್​ನಲ್ಲಿ ಕಾಣಿಸಿವೆ. ಈ ಮೊದಲು ಬಿಡುಗಡೆ ಆಗಿದ್ದ ‘ಸಿಂಗಾರ ಸಿರಿಯೇ..’ ಹಾಡು ಜನರಿಗೆ ಸಖತ್​ ಇಷ್ಟ ಆಗಿದೆ. ಯೂಟ್ಯೂಬ್​ನಲ್ಲಿ ಈ ಗೀತೆಗೆ 30 ಲಕ್ಷಕ್ಕೂ ಅಧಿಕ ವೀವ್ಸ್​ ಆಗಿದೆ.

ರಿಷಬ್​ ಶೆಟ್ಟಿ ನಿರ್ದೇಶನದ ಸಿನಿಮಾ ಎಂದರೆ ಏನಾದರೂ ವಿಶೇಷ ಇದ್ದೇ ಇರುತ್ತದೆ. ‘ಕಿರಿಕ್​ ಪಾರ್ಟಿ’, ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಮುಂತಾದ ಸಿನಿಮಾಗಳ ಮೂಲಕ ಅವರು ಆ ಭರವಸೆ ಮೂಡಿಸಿದ್ದಾರೆ. ಈಗ ‘ಕಾಂತಾರ’ದಲ್ಲಿ ಅವರು ಯಾವ ರೀತಿ ಮೋಡಿ ಮಾಡುತ್ತಾರೆ ಎಂಬುದನ್ನು ನೋಡುವ ಸಮಯ ಹತ್ತಿರ ಆಗುತ್ತಿದೆ. ಸೆ.30ರಂದು ಈ ಚಿತ್ರ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:28 pm, Mon, 5 September 22

ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ