Kantara: ‘ಕಾಂತಾರ’ ಚಿತ್ರದಲ್ಲಿ ಏನೆಲ್ಲಾ ಇರಲಿದೆ?; ಗುಟ್ಟು ಬಿಟ್ಟುಕೊಟ್ಟ ರಿಷಬ್ ಶೆಟ್ಟಿ

Rishab Shetty and Hombale Films: ಚಂದನವನದ ನಟ, ನಿರ್ದೇಶಕ ರಿಷಬ್ ಶೆಟ್ಟಿ ತಮ್ಮ ಹೊಸ ಚಿತ್ರ ‘ಕಾಂತಾರ’ದ ಕುರಿತಂತೆ ಟಿವಿ9 ಜೊತೆಗೆ ಮಾತನಾಡಿದ್ದಾರೆ. ಚಿತ್ರ ಹೇಗಿರಲಿದೆ, ಎಲ್ಲಿ ಚಿತ್ರೀಕರಣವಾಗಲಿದೆ ಮೊದಲಾದ ಮಾಹಿತಿಗಳನ್ನು ಅವರು ತಿಳಿಸಿದ್ದಾರೆ.

Kantara: ‘ಕಾಂತಾರ’ ಚಿತ್ರದಲ್ಲಿ ಏನೆಲ್ಲಾ ಇರಲಿದೆ?; ಗುಟ್ಟು ಬಿಟ್ಟುಕೊಟ್ಟ ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ ಮತ್ತು ಅವರ ಹೊಸ ಚಿತ್ರ ‘ಕಾಂತಾರ’ದ ಪೋಸ್ಟರ್
Follow us
TV9 Web
| Updated By: shivaprasad.hs

Updated on: Aug 06, 2021 | 6:53 PM

ಹೊಂಬಾಳೆ ಫಿಲ್ಮ್ಸ್ ಇಂದು ತನ್ನ ಹನ್ನೊಂದನೇ ಚಿತ್ರವನ್ನು ಅನೌನ್ಸ್ ಮಾಡಿತು. ಈಗಾಗಲೇ ತಮ್ಮ ನಟನೆ ಹಾಗೂ ನಿರ್ದೇಶನದಿಂದ ಚಂದನವನದಲ್ಲಿ ಭರವಸೆ ಮೂಡಿಸಿರುವ ಕರಾವಳಿಯ ಪ್ರತಿಭೆ ರಿಷಬ್ ಶೆಟ್ಟಿ, ಹೊಂಬಾಳೆಯೊಂದಿಗೆ ಕೈಜೋಡಿಸಲಿದ್ದಾರೆ. ನೂತನ ಚಿತ್ರಕ್ಕೆ ‘ಕಾಂತಾರ’ ಎಂದು ಹೆಸರಿಡಲಾಗಿದ್ದು, ಇದು ಸಂಪೂರ್ಣ ಕರಾವಳಿ ಭಾಗದಲ್ಲಿ ನಡೆಯುವ ಕತೆ ಎಂದಿದ್ದಾರೆ ರಿಷಬ್. ವಿಜಯ್ ಕಿರಗಂದೂರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಆಗಸ್ಟ್ 27ರಿಂದ ಚಿತ್ರತಂಡ ಶೂಟಿಂಗ್ ಪ್ರಾರಂಭಿಸಲಿದೆ. ಈ ಚಿತ್ರದ ಕುರಿತು ಸಂಪೂರ್ಣ ಮಾಹಿತಿಯನ್ನು ಟಿವಿ9ನೊಂದಿಗೆ ರಿಷಬ್ ಶೆಟ್ಟಿ ಹಂಚಿಕೊಂಡಿದ್ದಾರೆ.

‘ಕಾಂತಾರ’ದ ಅರ್ಥವೇನು ಎಂಬುದನ್ನು ಮೊದಲಿಗೆ ತಿಳಿಸಿದ ರಿಷಬ್ ಶೆಟ್ಟಿ, ಸಾಮಾನ್ಯವಾಗಿ ನಿಗೂಡ ಅರಣ್ಯವನ್ನು ಕಾಂತಾರ ಎನ್ನುತ್ತೇವೆ. ದಕ್ಷಿಣ ಕರಾವಳಿಯ ಸುತ್ತ ಮುತ್ತ ನಡೆಯುವ ಕತೆ ಇದಾಗಿದ್ದು, ಸಂಪೂರ್ಣವಾಗಿ ಅಲ್ಲಿನ ಜನ ಜೀವನ, ಸಂಸ್ಕೃತಿ, ಭಾಷೆಯನ್ನು ಒಳಗೊಂಡಿರುತ್ತದೆ ಎಂದಿದ್ದಾರೆ. ಪೋಸ್ಟರ್​ನಲ್ಲಿ ಕಂಬಳದ ಚಿತ್ರವಿರುವ ಕಾರಣ, ಸಂಪೂರ್ಣ ಕಂಬಳದ ಕುರಿತಾಗಿಯೇ ಕತೆ ಇದೆಯೇ ಎಂಬ ಪ್ರಶ್ನೆಗೆ ಇಲ್ಲ ಎನ್ನುತ್ತಾರೆ ರಿಷಬ್. ಇದು ಮನುಷ್ಯ ಮತ್ತು ಪ್ರಕೃತಿಯ ನಡುವಿನ ಕತೆ. ಕರಾವಳಿಯ ಜನಜೀವನವೂ ಕತೆಯಲ್ಲಿರುವುದರಿಂದ ಕಂಬಳವೂ ಚಿತ್ರದಲ್ಲಿ ಬರುತ್ತದೆ. ಆದರೆ ಸಂಪೂರ್ಣ ಅದರ ಕುರಿತಾಗಿಯೇ ಕತೆ ಸಾಗುವುದಿಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.

‘‘ಲಾಕ್​ಡೌನ್ ಸಂದರ್ಭದಲ್ಲಿ ಕತೆಯನ್ನು ಸಿದ್ಧಪಡಿಸಿದೆವು. ಚಿತ್ರವು ಆಕ್ಷನ್ ಥ್ರಿಲ್ಲರ್ ಮಾದರಿಯಲ್ಲಿರಲಿದೆ. ಚಿತ್ರದ ಕ್ಯಾನ್ವಾಸ್ ದೊಡ್ಡದು. ಅದಕ್ಕಾಗಿಯೇ ಹೊಂಬಾಳೆಯ ವಿಜಯ್ ಮತ್ತು ಕಾರ್ತಿಕ್ ಅವರಿಗೆ ಕತೆ ಹೇಳಿದ್ದೆ. ಸುಮಾರು ಎರಡು ವರ್ಷದಿಂದ ಮಾತುಕತೆ ನಡೆಯುತ್ತಿತ್ತು. ಅವರಿಗೆ ಕತೆಯ ಬಗ್ಗೆ ಬಹಳ ಖುಷಿಯಿದೆ. ಆಗಸ್ಟ್ 27ರಿಂದ ಶೂಟಿಂಗ್ ಪ್ರಾರಂಭಿಸಲಿದ್ದೇವೆ’’ ಎಂದು ಹೊಂಬಾಳೆಯೊಂದಿಗಿನ ಮಾತುಕತೆಯ ಕುರಿತು ತಿಳಿಸಿದ್ದಾರೆ ರಿಷಬ್ ಶೆಟ್ಟಿ.

ಹೊಂಬಾಳೆ ಫಿಲ್ಮ್ಸ್ ಈಗಾಗಲೇ ಪ್ಯಾನ್ ಇಂಡಿಯಾ ಚಿತ್ರಗಳನ್ನು ನಿರ್ಮಿಸುತ್ತಿದೆ. ಅಂತಹ ದೊಡ್ಡ ನಿರ್ಮಾಣ ಸಂಸ್ಥೆಯ ಭಾಗವಾಗಿದ್ದಕ್ಕೆ ಏನನ್ನಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ರಿಷಬ್, ‘‘ಕನ್ನಡದ ಹೆಮ್ಮೆಯ ಪ್ರೊಡಕ್ಷನ್ ಹೌಸ್ ಹೊಂಬಾಳೆ ಫಿಲ್ಮ್ಸ್. ಅವರ ಜೊತೆ ಕೈ ಜೋಡಿಸಿರುವುದು ಬಹಳ ಖುಷಿಯ ಸಂಗತಿ. ಹೀರೋ ಮತ್ತು ನಿರ್ದೇಶಕನಾಗಿ ಏಕಕಾಲಕ್ಕೆ ಕಾಣಿಸಿಕೊಳ್ಳುತ್ತಿರುವುದು ನನಗೆ ದೊಡ್ಡ ಚಾಲೆಂಜ್’’ ಎಂದಿದ್ದಾರೆ.

ಇದನ್ನೂ ಓದಿ:

Hombale Films: ಹೊಂಬಾಳೆ ಫಿಲ್ಮ್ಸ್​ನ 11ನೇ ಚಿತ್ರ ಕಾಂತಾರ; ನಿರ್ದೇಶಕ ಮತ್ತು ನಾಯಕನಾಗಿ ರಿಷಬ್ ಶೆಟ್ಟಿ

ಬಾರ್ ಮುಚ್ಚುವಂತೆ ಮಹಿಳೆಯರ ಧರಣಿ; ಬಾರ್ ಮುಚ್ಚದಂತೆ ಮದ್ಯಪ್ರಿಯರ ಹೋರಾಟ! ಚಿಕ್ಕಮಗಳೂರಿನಲ್ಲಿ ಹೀಗೊಂದು ಘಟನೆ

(Rishab Shetty opens up about his new movie Kantara produced by Hombale Films)

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ