Rishab Shetty: ವಿಶ್ವಸಂಸ್ಥೆಯಲ್ಲಿ ಕನ್ನಡ ಮಾತನಾಡಿದ ರಿಷಬ್ ಶೆಟ್ಟಿ

|

Updated on: Mar 16, 2023 | 10:37 PM

ನಟ, ನಿರ್ದೇಶಕ ರಿಷಬ್ ಶೆಟ್ಟಿ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಅಲ್ಲಿ ಕನ್ನಡದಲ್ಲಿಯೇ ಭಾಷಣ ಮಾಡಿದ್ದಾರೆ.

ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ (UN Annual Meeting) ಕನ್ನಡದಲ್ಲಿ (Kannada) ಮಾತನಾಡಿದ್ದಾರೆ. ಅವರು ವಿಶ್ವಸಂಸ್ಥೆಯ ವಾರ್ಷಿಕ ಸಭೆಯ ಮಾನವ ಹಕ್ಕು ಸಂರಕ್ಷಣೆ ಪರಿಷತ್ತಿನ 28ನೇ ಸಭೆಯಲ್ಲಿ ಪರಿಸರ ಸಂರಕ್ಷಣೆ ವಿಷಯವಾಗಿ ಭಾಷಣ ಮಾಡಿದರು.

ವಿಶ್ವಸಂಸ್ಥೆಯ ವೇದಿಕೆಯಲ್ಲಿ ಕನ್ನಡ ದನಿ ಪಸರಿಸುವ ಕಾರ್ಯವನ್ನು ರಿಷಬ್ ಶೆಟ್ಟಿ ಮಾಡಿದರು. ಈ ಬಾರಿ ಪಂಚೆಯಲ್ಲಲ್ಲದೆ, ಸರಳ ಭಾರತೀಯ ಉಡುಗೆ, ಬಿಳಿಯ ಬಣ್ಣದ ಖುರ್ತಾ ಧರಿಸಿ ಅದಕ್ಕೊಪ್ಪುವ ನೀಲಿ ಬಣ್ಣದ ವೇಸ್ ಕೋಟು ಧರಿಸಿದ್ದ ರಿಷಬ್ ಶೆಟ್ಟಿ, ಉತ್ಸಾಹದಿಂದ, ಆತ್ಮವಿಶ್ವಾಸದಿಂದ ಭಾಷಣ ಮಾಡಿದರು. ವಿಶ್ವಸಂಸ್ಥೆಯ ಸಭೆಯಲ್ಲಿ ಭಾಷಣಕಾರರಿಗೆ ಸೀಮಿತ ಸಮಯ ನೀಡುವ ಕಾರಣ, ತುಸು ವೇಗವಾಗಿ ಭಾಷಣ ಓದಿದ ರಿಷಬ್, ”ನಮಸ್ಕಾರ ನಾನು ರಿಷಬ್ ಶೆಟ್ಟಿ. ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತಲೂ ಹೆಚ್ಚು ಕಾಲದಿಂದ ತಳಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತದ ಇಕೋಫಾರ್ಮ್ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ಪರಿಸರ ಸ್ವಚ್ಛತೆ ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ, ನಿರ್ದೇಶಕನಾಗಿ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದು ನನ್ನ ಉದ್ದೇಶ” ಎಂದರು.

ರಿಷಬ್ ಶೆಟ್ಟಿ ಟ್ವೀಟ್

ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಮಾರ್ಚ್ 17 ರಂದು ವಿಶೇಷ ಪ್ರದರ್ಶನ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:41 pm, Thu, 16 March 23