AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ಕಾರಣದಿಂದ ರಿಷಬ್ ಶೆಟ್ಟಿ ಸಿನಿಮಾ ಮೇಲೆ ಕರಿನೆರಳು

Rishab Shetty-Prabhas: ರಿಷಬ್ ಶೆಟ್ಟಿ ಇದೀಗ ‘ಕಾಂತಾರ: ಚಾಪ್ಟರ್ 1’, ಹಿಂದಿಯ ‘ಛತ್ರಪತಿ ಶಿವಾಜಿ’ ಮತ್ತು ತೆಲುಗಿನಲ್ಲಿ ‘ಜೈ ಹನುಮಾನ್’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ‘ಜೈ ಹನುಮಾನ್’ ಸಿನಿಮಾವನ್ನು ‘ಹನುಮ್ಯಾನ್’ ಖ್ಯಾತಿಯ ಪ್ರಶಾಂತ್ ವರ್ಮಾ ನಿರ್ದೇಶಿಸಲಿದ್ದಾರೆ. ಆದರೆ ಈ ಸಿನಿಮಾ ಪ್ರಭಾಸ್ ಕಾರಣದಿಂದ ಮುಂಡೂಲ್ಪಡುವ ಸಾಧ್ಯತೆ ಹೆಚ್ಚಾಗಿದೆ.

ಪ್ರಭಾಸ್ ಕಾರಣದಿಂದ ರಿಷಬ್ ಶೆಟ್ಟಿ ಸಿನಿಮಾ ಮೇಲೆ ಕರಿನೆರಳು
Rishab Shetty Prabhas
Follow us
ಮಂಜುನಾಥ ಸಿ.
|

Updated on:Mar 05, 2025 | 12:01 PM

ಕಾಂತಾರ’ (Kantara) ಸಿನಿಮಾದಿಂದಾಗಿ ಪ್ಯಾನ್ ಇಂಡಿಯಾ (Pan India) ಸ್ಟಾರ್ ಆಗಿದ್ದಾರೆ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty). ಈಗ ಅವರು ತೆಲುಗು, ಹಿಂದಿ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ತಮ್ಮ ನಿರ್ದೇಶನದ ‘ಕಾಂತಾರ’ ಸಿನಿಮಾದ ಮೇಕಿಂಗ್​ನಲ್ಲಿ ಬ್ಯುಸಿಯಾಗಿದ್ದಾರೆ ರಿಷನ್ ಶೆಟ್ಟಿ. ಇದರ ನಡುವೆ ಈಗಾಗಲೇ ತೆಲುಗಿನಲ್ಲಿ ‘ಜೈ ಹನುಮಾನ್’ ಹಾಗೂ ಹಿಂದಿಯಲ್ಲಿ ‘ಛತ್ರಪತಿ ಶಿವಾಜಿ’ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಆದರೆ ಇದೀಗ ಹರಿದಾಡುತ್ತಿರುವ ಸುದ್ದಿಯಂತೆ, ಪ್ರಭಾಸ್ ಇಂದಾಗಿ ರಿಷಬ್ ಶೆಟ್ಟಿಯ ಸಿನಿಮಾ ಮುಂದೂಡಲ್ಪಟ್ಟಿದೆಯಂತೆ.

‘ಹನುಮ್ಯಾನ್’ ಸಿನಿಮಾದಿಂದ ಪ್ರಶಾಂತ್ ವರ್ಮಾ ಪ್ಯಾನ್ ಇಂಡಿಯಾ ನಿರ್ದೇಶಕರಾಗಿದ್ದಾರೆ. ಹಲವು ಸ್ಟಾರ್ ನಟರು ಪ್ರಶಾಂತ್ ವರ್ಮಾ ಜೊತೆ ಕೆಲಸ ಮಾಡಲು ಬಯಸಿದ್ದಾರೆ. ಬಾಲಿವುಡ್ ನಟ ರಣ್ವೀರ್ ಸಿಂಗ್, ಪ್ರಶಾಂತ್ ವರ್ಮಾ ಸಿನಿಮಾದಲ್ಲಿ ನಟಿಸುವವರಿದ್ದರು ಆದರೆ ಅದು ಸಾಧ್ಯವಾಗಲಿಲ್ಲ. ಇದೀಗ ಪ್ರಭಾಸ್​ಗೆ ಹೊಸ ಕತೆ ಹೇಳಿರುವ ಪ್ರಶಾಂತ್ ವರ್ಮಾ, ಪ್ರಭಾಸ್ ಜೊತೆ ಸಿನಿಮಾ ಮಾಡುತ್ತಿರುವುದಾಗಿ ಘೋಷಿಸಿದ್ದಾರೆ.

ಇತ್ತ ರಿಷಬ್ ಶೆಟ್ಟಿ, ‘ಛತ್ರಪತಿ ಶಿವಾಜಿ’ ಮತ್ತು ‘ಕಾಂತಾರ’ ಸಿನಿಮಾದಲ್ಲಿ ತೊಡಗಿಕೊಂಡಿದ್ದು, ಈ ಎರಡೂ ಸಿನಿಮಾಗಳಿಗೆ ಹೆಚ್ಚು ಸಮಯ ಬೇಕಾಗಿರುವ ಕಾರಣದಿಂದಾಗಿ ಪ್ರಶಾಂತ್ ವರ್ಮಾರ ‘ಜೈ ಹನುಮಾನ್’ ಸಿನಿಮಾ ತಡವಾಗಲಿದೆ. ಮಾತ್ರವಲ್ಲದೆ ಪ್ರಭಾಸ್ ಸಹ, ತಮ್ಮ ಸಿನಿಮಾ ಅನ್ನು ಮೊದಲು ಮುಗಿಸುವಂತೆ ಪ್ರಶಾಂತ್ ವರ್ಮಾ ಮೇಲೆ ಒತ್ತಡ ಹೇರಿದ್ದಾರೆ ಎನ್ನಲಾಗುತ್ತಿದೆ. ಪ್ರಭಾಸ್​ಗೆ ಹೇಳಿರುವ ಕತೆಯ ಚಿತ್ರಕತೆ ಈಗಾಗಲೇ ರೆಡಿಯಾಗಿದ್ದು, ಸಿನಿಮಾದ ಚಿತ್ರೀಕರಣ ಶೀಘ್ರವೇ ಶುರು ಮಾಡಲು ವರ್ಮಾ ಸಹ ಅಣಿಯಾಗಿದ್ದಾರೆ.

ಇದನ್ನೂ ಓದಿ
Image
ಕಂಡಕ್ಟರ್ ಆಗಿದ್ದಾಗಲೇ ರಜನಿಕಾಂತ್ ಸ್ಟೈಲಿಶ್​
Image
ಕನ್ನಡ ಸಿನಿಮಾ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಪುಷ್ಪ ಚಿತ್ರದ ಸಂಗೀತ ಸಂಯೋಜಕ
Image
‘ಮಾಣಿಕ್ಯ’ ಚಿತ್ರದ ನಟಿ ರನ್ಯಾ ಬಳಿ ಸಿಕ್ಕಿದ್ದು ಬರೋಬ್ಬರಿ 15 ಕೆಜಿ ಚಿನ್ನ
Image
ಪುಡಿರೌಡಿ ತರ ಆಡೋದು ಬಿಡಿ, ಸಿಎಂ ಆದ್ರೆ ಕಷ್ಟ ಇದೆ’; ಡಿಕೆಶಿಗೆ ಕೌಂಟರ್

ಇದನ್ನೂ ಓದಿ:ಪತ್ರಿಕೆಯಲ್ಲೂ ಕೆಲಸ ಮಾಡಿದ್ದ ರಿಷಬ್ ಶೆಟ್ಟಿ; ಲಾಭ ತಂದುಕೊಟ್ಟ ಉದ್ಯಮ ಯಾವುದು?

ಒಂದೊಮ್ಮೆ ಪ್ರಶಾಂತ್ ವರ್ಮಾ, ಪ್ರಭಾಸ್ ಜೊತೆಗಿನ ಸಿನಿಮಾ ಮೊದಲು ಪ್ರಾರಂಭಿಸಿದರೆ ರಿಷಬ್ ಶೆಟ್ಟಿ ಜೊತೆಗಿನ ‘ಜೈ ಹನುಮಾನ್’ ಸಿನಿಮಾ ಮುಂದೂಡಲ್ಪಡುವುದು ಪಕ್ಕಾ. ರಿಷಬ್ ಶೆಟ್ಟಿ ನಟನೆಯ ‘ಕಾಂತಾರ, ಚಾಪ್ಟರ್ 1’ ಇದೇ ವರ್ಷಾಂತ್ಯಕ್ಕೆ ಬಿಡುಗಡೆ ಆಗಲಿದೆ. ಅದಾದ ಬಳಿಕ ಅವರು ‘ಛತ್ರಪತಿ ಶಿವಾಜಿ’ ಸಿನಿಮಾದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲಿದ್ದು, ಆ ಸಿನಿಮಾ 2027ಕ್ಕೆ ತೆರೆಗೆ ಬರಲಿದೆ. ಅದರ ಬಳಿಕವಷ್ಟೆ ‘ಜೈ ಹನುಮಾನ್’ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ.

ಇನ್ನು ಪ್ರಭಾಸ್ ಸಹ ಪ್ರಸ್ತುತ ಬಹಳ ಬ್ಯುಸಿಯಾಗಿಯೇ ಇದ್ದಾರೆ. ಪ್ರಭಾಸ್ ಇತ್ತೀಚೆಗಷ್ಟೆ ‘ರಾಜಾ ಸಾಬ್’ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಈಗ ರಘು ಹನುಪುಡಿ ನಿರ್ದೇಶನದ ಒಂದು ಸಿನಿಮಾ ಹಾಗೂ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ಎರಡು ಸಿನಿಮಾಗಳ ಬಳಿಕ ಪ್ರಭಾಸ್​ಗೆ ಸಣ್ಣ ಬ್ರೇಕ್ ಇದ್ದು, ಅದರಲ್ಲಿ ಪ್ರಶಾಂತ್ ವರ್ಮಾ ಜೊತೆಗೆ ಸಿನಿಮಾ ಮುಗಿಸುವ ಆಲೋಚನೆಯಲ್ಲಿದ್ದಾರೆ ಪ್ರಭಾಸ್. ಇದರ ಹೊರತಾಗಿ ‘ಕಲ್ಕಿ 2’, ‘ಸಲಾರ್ 2’ ಮತ್ತು ಹೊಂಬಾಳೆ ನಿರ್ಮಾಣದ ಮತ್ತೊಂದು ಸಿನಿಮಾದಲ್ಲಿಯೂ ಪ್ರಭಾಸ್ ನಟಿಸಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:00 pm, Wed, 5 March 25

VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ