Shivamma Movie: ರಿಷಬ್ ಶೆಟ್ಟಿ ನಿರ್ಮಾಣದ ‘ಶಿವಮ್ಮ’ ಚಿತ್ರಕ್ಕೆ ವಿದೇಶಗಳಲ್ಲಿ ಸಿಕ್ಕಿತು ಮನ್ನಣೆ
‘ರಿಷಬ್ ಶೆಟ್ಟಿ ಫಿಲ್ಮ್ಸ್’ ಮೂಲಕ ಹೊಸಬರಿಗೆ ಅವಕಾಶ ನೀಡುವ ಕೆಲಸವನ್ನು ರಿಷಬ್ ಶೆಟ್ಟಿ ಅವರು ಮಾಡುತ್ತಿದ್ದಾರೆ. ಈ ಕಾರಣದಿಂದಲೇ ‘ಶಿವಮ್ಮ’ ಸಿನಿಮಾವನ್ನು ಅವರು ನಿರ್ಮಾಣ ಮಾಡಿದ್ದಾರೆ.
ಕನ್ನಡದಲ್ಲಿ ಹಲವು ದೊಡ್ಡ ಬಜೆಟ್ ಚಿತ್ರಗಳು ರಿಲೀಸ್ ಆಗಿ ಮೆಚ್ಚುಗೆ ಪಡೆಯುತ್ತಿವೆ. ಇದರ ಜೊತೆಗೆ ಒಂದಷ್ಟು ಹೊಸಬರ ಸಿನಿಮಾ, ಪ್ರಯೋಗಾತ್ಮಕ ಸಿನಿಮಾಗಳು ಕೂಡ ರಿಲೀಸ್ ಆಗಿ ಭೇಷ್ ಎನಿಸಿಕೊಂಡಿದೆ. ಕನ್ನಡದ ಕೆಲವು ಸಣ್ಣ ಬಜೆಟ್ ಸಿನಿಮಾಗಳು ಭಾರತದ ಗಡಿಯಾಚೆಗೆ ಹೋಗಿ ಅಲ್ಲಿನ ಚಿತ್ರೋತ್ಸವಗಳಲ್ಲಿ ಮನ್ನಣೆ ಗಳಿಸುತ್ತಿವೆ. ಹಲವು ಪ್ರಶಸ್ತಿಗಳನ್ನು ಗೆದ್ದು ಬೀಗುತ್ತಿವೆ. ರಿಷಬ್ ಶೆಟ್ಟಿ (Rishab Shetty) ನಿರ್ಮಾಣ ಮಾಡಿ, ಪ್ರಸ್ತುತಪಡಿಸಿದ ‘ಶಿವಮ್ಮ’ ಸಿನಿಮಾ (Shivamma Movie) ಕೂಡ ಪ್ರಪಂಚಾದ್ಯಂತ ವಿವಿಧ ಸಿನಿಮೋತ್ಸವಗಳಲ್ಲಿ ಪ್ರದರ್ಶನ ಕಂಡು ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಚಿತ್ರತಂಡಕ್ಕೆ ಎಲ್ಲರೂ ಶುಭಕೋರುತ್ತಿದ್ದಾರೆ.
‘ರಿಷಬ್ ಶೆಟ್ಟಿ ಫಿಲ್ಮ್ಸ್’ ಮೂಲಕ ಹೊಸಬರಿಗೆ ಅವಕಾಶ ನೀಡುವ ಕೆಲಸವನ್ನು ರಿಷಬ್ ಶೆಟ್ಟಿ ಅವರು ಮಾಡುತ್ತಿದ್ದಾರೆ. ಈ ಕಾರಣದಿಂದಲೇ ‘ಶಿವಮ್ಮ’ ಸಿನಿಮಾವನ್ನು ಅವರು ನಿರ್ಮಾಣ ಮಾಡಿದ್ದಾರೆ. ಜೈಶಂಕರ್ ಆರ್ಯರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಇದು ಅವರ ನಿರ್ದೇಶನದ ಚೊಚ್ಚಲ ಸಿನಿಮಾ.
ಕೊಪ್ಪಳ ಜಿಲ್ಲೆಯ ಯಾರೇಹಂಚಿನಾಳ ಗ್ರಾಮದಿಂದ ಶುರುವಾದ ಪ್ರಯಾಣ ಹತ್ತಾರು ದೇಶಗಳಲ್ಲಿ ಸಾಕಷ್ಟು ಪ್ರಶಸ್ತಿಗಳನ್ನು ಬಾಚಿದೆ. ‘ಬುಸಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ 2022’ರಲ್ಲಿ ನ್ಯೂ ಕರೆಂಟ್ಸ್ ಪುರಸ್ಕಾರ ಪಡೆದಿದೆ. ‘ಥ್ರೀ ಕಾಂಟಿನೆಂಟ್ಸ್ ಫೆಸ್ಟಿವಲ್ 2022’ದಲ್ಲಿ ಯುವ ಜ್ಯೂರಿ ಪ್ರಶಸ್ತಿ, ‘ಫಾಜರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ’ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಇದನ್ನೂ ಓದಿ: ‘ಕಾಂತಾರ’ ಕನೆಕ್ಷನ್ ಕೊಟ್ಟು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ತಂಡದ ಕಾಲೆಳೆದ ರಿಷಬ್ ಶೆಟ್ಟಿ
ಇದಲ್ಲದೇ ಇನ್ನೂ ಅನೇಕ ಸಿನಿಮೋತ್ಸವಗಳಲ್ಲಿ ಈ ಚಿತ್ರ ಪ್ರದರ್ಶನ ಕಂಡಿದೆ. ಚೀನಾದಲ್ಲಿ ನಡೆದ ‘ಹೈನಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ’, ಇರಾನ್ನಲ್ಲಿ ನಡೆದ ‘ಫಜರ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’, ಸ್ವೀಡನ್ನ ‘ಗೋಥೆಂಬರ್ಗ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ’, ಮ್ಯುನಿಚ್ನ ‘ಮುಂಚಿಯನ್ ಸಿನಿಮೋತ್ಸವ, ರಷ್ಯಾದ ‘ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜೆರ್ಕಾಲೋ’, ಸ್ಪೇನ್ನ ‘ಇಮ್ಯಾಜಿನ್ ಇಂಡಿಯಾ’, ಕೆನಡಾದ ‘ಅಲ್ಬರ್ಟಾ ಭಾರತೀಯ ಚಲನಚಿತ್ರೋತ್ಸವ’, ಮೆಲ್ಬೋರ್ನ್ನ ‘ಇಂಡಿಯನ್ ಫಿಲ್ಮ್ ಫೆಸ್ಟಿವಲ್’, ಸ್ವಿಟ್ಜರ್ಲ್ಯಾಂಡ್ನ ‘ಬ್ಲಾಕ್ ಮೂವಿ ಫಿಲ್ಮ್ ಫೆಸ್ಟಿವಲ್’ ಮೊದಲಾದ ಕಡೆಗಳಲ್ಲಿ ಈ ಸಿನಿಮಾ ಪ್ರದರ್ಶನ ಕಂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:00 am, Fri, 14 July 23