GGVV Trailer: ರಾಜ್​ ಬಿ ಶೆಟ್ಟಿ ಇನ್ನೊಂದು ಮುಖ ಅನಾವರಣ; ಸಾಥ್​ ನೀಡಿದ ರಿಷಬ್​ ಶೆಟ್ಟಿ

Garuda Gamana Vrishabha Vahana: ‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ರಾಜ್​ ಬಿ. ಶೆಟ್ಟಿ ಅವರಿಗೆ ತುಂಬ ರೆಬಲ್​ ಆದಂತಹ ಪಾತ್ರವಿದೆ. ಕೈಯಲ್ಲಿ ಚೂರಿ ಹಿಡಿದು ಅವರು ಹೇಗೆ ಆರ್ಭಟಿಸುತ್ತಾರೆ ಎಂಬುದರ ಝಲಕ್​ ಈ ಟ್ರೇಲರ್​ನಲ್ಲಿದೆ.

GGVV Trailer: ರಾಜ್​ ಬಿ ಶೆಟ್ಟಿ ಇನ್ನೊಂದು ಮುಖ ಅನಾವರಣ; ಸಾಥ್​ ನೀಡಿದ ರಿಷಬ್​ ಶೆಟ್ಟಿ
‘ಗರುಡ ಗಮನ ವೃಷಭ ವಾಹನ’ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ
Follow us
TV9 Web
| Updated By: ಮದನ್​ ಕುಮಾರ್​

Updated on:Oct 15, 2021 | 12:08 PM

ರಾಜ್​ ಬಿ. ಶೆಟ್ಟಿ ಮತ್ತು ರಿಷಬ್​ ಶೆಟ್ಟಿ ಕನ್ನಡದ ಪ್ರತಿಭಾವಂತ ನಿರ್ದೇಶಕರು. ಇವರಿಬ್ಬರು ಜೊತೆಯಾಗಿ ನಟಿಸುತ್ತಿರುವ ‘ಗರುಡ ಗಮನ ವೃಷಭ ವಾಹನ’ ಚಿತ್ರ ಹಲವು ಕಾರಣಗಳಿಂದಾಗಿ ನಿರೀಕ್ಷೆ ಮೂಡಿಸಿದೆ. ಆ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸುವ ರೀತಿಯಲ್ಲಿ ಇಂದು (ಅ.15) ಟ್ರೇಲರ್​ ಬಿಡುಗಡೆ ಆಗಿದೆ. ‘ಒಂದು ಮೊಟ್ಟೆಯ ಕಥೆ’ ಬಳಿಕ ರಾಜ್​ ಬಿ. ಶೆಟ್ಟಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು, ಬೇರೊಂದು ಶೇಡ್​ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

‘ಗರುಡ ಗಮನ ವೃಷಭ ವಾಹನ’ ಸಿನಿಮಾದಲ್ಲಿ ಶಿವ ಎಂಬ ಪಾತ್ರಕ್ಕೆ ರಾಜ್​ ಬಿ ಶೆಟ್ಟಿ ಬಣ್ಣ ಹಚ್ಚಿದ್ದಾರೆ. ಈ ಮೊದಲಿನ ಸಿನಿಮಾಗಳಂತೆ ಅವರಿಲ್ಲಿ ಕಾಮಿಡಿ ಮಾಡುವುದಿಲ್ಲ. ಕಾಮಿಡಿ ಬದಲಿಗೆ ಸಿಕ್ಕಾಪಟ್ಟೆ ಟೆರರ್​ ಆಗಿದ್ದಾರೆ. ಕೈಯಲ್ಲಿ ಚೂರಿ ಹಿಡಿದು ಆರ್ಭಟಿಸುತ್ತಾರೆ. ತುಂಬ ರೆಬಲ್​ ಆದಂತಹ ಪಾತ್ರವನ್ನು ಅವರು ನಿಭಾಯಿಸಿದ್ದಾರೆ ಎಂಬುದಕ್ಕೆ ಈ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ.

ಕರಾವಳಿ ಭಾಗದಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾ ಹೊಂದಿದೆ. ಟ್ರೇಲರ್​ ನೋಡಿದ ಬಳಿಕ ಸಿನಿಪ್ರಿಯ ನಿರೀಕ್ಷೆ ಡಬಲ್​ ಆಗುವುದು ಗ್ಯಾರಂಟಿ. ನವೆಂಬರ್​ 19ರಂದು ಚಿತ್ರಮಂದಿರಗಳಲ್ಲಿ ‘ಗರುಡ ಗಮನ ವೃಷಭ ವಾಹನ’ ಬಿಡುಗಡೆ ಆಗಲಿದೆ.

(ಗರುಡ ಗಮನ ವೃಷಭ ವಾಹನ ಚಿತ್ರದ ಟ್ರೇಲರ್​)

ಈ ಚಿತ್ರವನ್ನು ರಕ್ಷಿತ್​ ಶೆಟ್ಟಿಯವರ ಪರಂವಾ ಸ್ಡುಡಿಯೋಸ್​ ಬ್ಯಾನರ್​ ಮೂಲಕ ಪ್ರಸ್ತುತ ಪಡಿಸಲಾಗುತ್ತಿದೆ. ರಕ್ಷಿತ್​ ಶೆಟ್ಟಿ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಈ ಟ್ರೇಲರ್​ ಹಂಚಿಕೊಂಡಿದ್ದಾರೆ. ಕಾರ್ತಿಕ್​ ಗೌಡ ಅವರ ಕೆಆರ್​ಜಿ ಸ್ಟುಡಿಯೋಸ್​ ಮೂಲಕ ಚಿತ್ರವನ್ನು ವಿತರಣೆ ಮಾಡಲಾಗುವುದು. ಟ್ರೇಲರ್​ಗೆ ಕಾರ್ತಿಕ್​ ಗೌಡ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ:

GGVV: ಬಹುನಿರೀಕ್ಷಿತ ‘ಗರುಡ ಗಮನ ವೃಷಭ ವಾಹನ’ ಚಿತ್ರ ತಂಡದಿಂದ ಹೊರಬಿತ್ತು ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ

‘ಕೋಟಿಗೊಬ್ಬ 3’ ನೋಡಲು ಸಾಲುಗಟ್ಟಿ ನಿಂತ ಫ್ಯಾನ್ಸ್​; ಸುದೀಪ್ ಕಟೌಟ್​ಗೆ ಹಾಲಿನ ಅಭಿಷೇಕ

Published On - 11:42 am, Fri, 15 October 21

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ