
ರಾಜ್ ಬಿ. ಶೆಟ್ಟಿ ಮತ್ತು ರಿಷಬ್ ಶೆಟ್ಟಿ ಕನ್ನಡದ ಪ್ರತಿಭಾವಂತ ನಿರ್ದೇಶಕರು. ಇವರಿಬ್ಬರು ಜೊತೆಯಾಗಿ ನಟಿಸುತ್ತಿರುವ ‘ಗರುಡ ಗಮನ ವೃಷಭ ವಾಹನ’ ಚಿತ್ರ ಹಲವು ಕಾರಣಗಳಿಂದಾಗಿ ನಿರೀಕ್ಷೆ ಮೂಡಿಸಿದೆ. ಆ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸುವ ರೀತಿಯಲ್ಲಿ ಇಂದು (ಅ.15) ಟ್ರೇಲರ್ ಬಿಡುಗಡೆ ಆಗಿದೆ. ‘ಒಂದು ಮೊಟ್ಟೆಯ ಕಥೆ’ ಬಳಿಕ ರಾಜ್ ಬಿ. ಶೆಟ್ಟಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು, ಬೇರೊಂದು ಶೇಡ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
‘ಗರುಡ ಗಮನ ವೃಷಭ ವಾಹನ’ ಸಿನಿಮಾದಲ್ಲಿ ಶಿವ ಎಂಬ ಪಾತ್ರಕ್ಕೆ ರಾಜ್ ಬಿ ಶೆಟ್ಟಿ ಬಣ್ಣ ಹಚ್ಚಿದ್ದಾರೆ. ಈ ಮೊದಲಿನ ಸಿನಿಮಾಗಳಂತೆ ಅವರಿಲ್ಲಿ ಕಾಮಿಡಿ ಮಾಡುವುದಿಲ್ಲ. ಕಾಮಿಡಿ ಬದಲಿಗೆ ಸಿಕ್ಕಾಪಟ್ಟೆ ಟೆರರ್ ಆಗಿದ್ದಾರೆ. ಕೈಯಲ್ಲಿ ಚೂರಿ ಹಿಡಿದು ಆರ್ಭಟಿಸುತ್ತಾರೆ. ತುಂಬ ರೆಬಲ್ ಆದಂತಹ ಪಾತ್ರವನ್ನು ಅವರು ನಿಭಾಯಿಸಿದ್ದಾರೆ ಎಂಬುದಕ್ಕೆ ಈ ಟ್ರೇಲರ್ನಲ್ಲಿ ಸಾಕ್ಷಿ ಸಿಕ್ಕಿದೆ.
ಕರಾವಳಿ ಭಾಗದಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾ ಹೊಂದಿದೆ. ಟ್ರೇಲರ್ ನೋಡಿದ ಬಳಿಕ ಸಿನಿಪ್ರಿಯ ನಿರೀಕ್ಷೆ ಡಬಲ್ ಆಗುವುದು ಗ್ಯಾರಂಟಿ. ನವೆಂಬರ್ 19ರಂದು ಚಿತ್ರಮಂದಿರಗಳಲ್ಲಿ ‘ಗರುಡ ಗಮನ ವೃಷಭ ವಾಹನ’ ಬಿಡುಗಡೆ ಆಗಲಿದೆ.
(ಗರುಡ ಗಮನ ವೃಷಭ ವಾಹನ ಚಿತ್ರದ ಟ್ರೇಲರ್)
ಈ ಚಿತ್ರವನ್ನು ರಕ್ಷಿತ್ ಶೆಟ್ಟಿಯವರ ಪರಂವಾ ಸ್ಡುಡಿಯೋಸ್ ಬ್ಯಾನರ್ ಮೂಲಕ ಪ್ರಸ್ತುತ ಪಡಿಸಲಾಗುತ್ತಿದೆ. ರಕ್ಷಿತ್ ಶೆಟ್ಟಿ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಈ ಟ್ರೇಲರ್ ಹಂಚಿಕೊಂಡಿದ್ದಾರೆ. ಕಾರ್ತಿಕ್ ಗೌಡ ಅವರ ಕೆಆರ್ಜಿ ಸ್ಟುಡಿಯೋಸ್ ಮೂಲಕ ಚಿತ್ರವನ್ನು ವಿತರಣೆ ಮಾಡಲಾಗುವುದು. ಟ್ರೇಲರ್ಗೆ ಕಾರ್ತಿಕ್ ಗೌಡ ಮೆಚ್ಚುಗೆ ಸೂಚಿಸಿದ್ದಾರೆ.
ಇದನ್ನೂ ಓದಿ:
GGVV: ಬಹುನಿರೀಕ್ಷಿತ ‘ಗರುಡ ಗಮನ ವೃಷಭ ವಾಹನ’ ಚಿತ್ರ ತಂಡದಿಂದ ಹೊರಬಿತ್ತು ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ
‘ಕೋಟಿಗೊಬ್ಬ 3’ ನೋಡಲು ಸಾಲುಗಟ್ಟಿ ನಿಂತ ಫ್ಯಾನ್ಸ್; ಸುದೀಪ್ ಕಟೌಟ್ಗೆ ಹಾಲಿನ ಅಭಿಷೇಕ
Published On - 11:42 am, Fri, 15 October 21