AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಕಾಂತಾರ 2, ವರಾಹ ರೂಪಂ ವಿವಾದ, ಮುಂದಿನ ಚಿತ್ರ: 3 ಮುಖ್ಯ ವಿಚಾರಕ್ಕೆ ರಿಷಬ್​ ಶೆಟ್ಟಿ ಪ್ರತಿಕ್ರಿಯೆ

Kantara 2 | Rishab Shetty: ರಿಷಬ್​ ಶೆಟ್ಟಿ ಅವರಿಗೆ ಸಿದ್ದಶ್ರೀ ಪ್ರಶಸ್ತಿ ನೀಡಲಾಗಿದೆ. ಈ ಸಲುವಾಗಿ ಕಲಬುರಗಿಗೆ ಬಂದ ಅವರು ಒಂದಷ್ಟು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

Rishab Shetty: ಕಾಂತಾರ 2, ವರಾಹ ರೂಪಂ ವಿವಾದ, ಮುಂದಿನ ಚಿತ್ರ: 3 ಮುಖ್ಯ ವಿಚಾರಕ್ಕೆ ರಿಷಬ್​ ಶೆಟ್ಟಿ ಪ್ರತಿಕ್ರಿಯೆ
ರಿಷಬ್ ಶೆಟ್ಟಿ
TV9 Web
| Updated By: ಮದನ್​ ಕುಮಾರ್​|

Updated on:Dec 02, 2022 | 5:23 PM

Share

ನಟ ರಿಷಬ್​ ಶೆಟ್ಟಿ (Rishab Shetty) ಅವರು ‘ಕಾಂತಾರ’ (Kantara) ಸಿನಿಮಾದ ಯಶಸ್ಸಿನಲ್ಲಿ ತೇಲುತ್ತಿದ್ದಾರೆ. ಅನೇಕ ಕಡೆಗಳಿಗೆ ತೆರಳಿ ಅವರು ಪ್ರಚಾರ ಮಾಡಿದ್ದಾರೆ. ಚಿತ್ರಮಂದಿರದಲ್ಲಿ ಧೂಳೆಬ್ಬಿಸಿದ ಈ ಸಿನಿಮಾ ಈಗ ಒಟಿಟಿಗೂ ಕಾಲಿಟ್ಟು ಪ್ರೇಕ್ಷಕರನ್ನು ರಂಜಿಸುತ್ತಿದೆ. ಅಮೇಜಾನ್​ ಪ್ರೈಂ ವಿಡಿಯೋದಲ್ಲಿ ಈ ಚಿತ್ರ ಪ್ರದರ್ಶನ ಕಾಣುತ್ತಿದೆ. ಸದ್ಯಕ್ಕೆ ಸಿನಿಮಾ ಕೆಲಸಗಳಿಂದ ರಿಷಬ್​ ಶೆಟ್ಟಿ ಅವರು ಸ್ವಲ್ಪ ಬ್ರೇಕ್ ಪಡೆದುಕೊಂಡಿದ್ದಾರೆ. ಒಂದಷ್ಟು ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು (ಡಿ.2) ಅವರು ಕಲಬುರಗಿ ನಗರಕ್ಕೆ ತೆರಳಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ‘ಕಾಂತಾರ 2’ (Kantara 2) ಸಿನಿಮಾ ಪ್ಲ್ಯಾನ್​, ವರಾಹ ರೂಪಂ ಹಾಡಿನ ವಿವಾದ ಸೇರಿದಂತೆ ಅನೇಕ ವಿಚಾರ ಬಗ್ಗೆ ಎದುರಾದ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ.

ಮಲಯಾಳಂನ ತೈಕ್ಕುಡಂ ಬ್ರಿಡ್ಜ್​ ಮ್ಯೂಸಿ​ಕ್​ ಬ್ಯಾಂಡ್​ನವರು ‘ಕಾಂತಾರ’ ಸಿನಿಮಾದ ‘ವರಾಹ ರೂಪಂ..’ ಹಾಡಿನ ಮೇಲೆ ಕೃತಿ ಚೌರ್ಯ ಆರೋಪ ಮಾಡಿದ್ದಾರೆ. ಕೋರ್ಟ್​ನಲ್ಲಿ ಇದರ ವಿಚಾರಣೆ ನಡೆಯುತ್ತಿದೆ. ಈ ಬಗ್ಗೆ ರಿಷಬ್​ ಶೆಟ್ಟಿ ಹೋದಲ್ಲೆಲ್ಲ ಪ್ರಶ್ನೆ ಎದುರಾಗುತ್ತಿದೆ. ಆದರೆ ಹಾಡಿನ ವಿವಾದದ ಬಗ್ಗೆ ಮಾತನಾಡಲು ರಿಷಬ್​ ಶೆಟ್ಟಿ ನಿರಾಕರಿಸಿದ್ದಾರೆ.

‘ಹಾಡಿನ ವಿಚಾರ ಕೋರ್ಟ್​ನಲ್ಲಿ ಇದೆ. ಅಲ್ಲಿಂದ ಬಂದಾಗಲೇ ಮಾತನಾಡಬೇಕು. ಅದರ ಬಗ್ಗೆ ನಾವು ಇಲ್ಲಿ ಮಾತನಾಡಬಾರದು’ ಎಂದು ರಿಷಬ್​ ಶೆಟ್ಟಿ ಹೇಳಿದ್ದಾರೆ. ಒಟಿಟಿಯಲ್ಲಿ ‘ಕಾಂತಾರ’ ಪ್ರಸಾರ ಆಗುತ್ತಿದ್ದು, ಅದರಲ್ಲಿ ‘ವರಾಹ ರೂಪಂ..’ ಹಾಡು ಬದಲಾಗಿರುವುದಕ್ಕೆ ಅನೇಕ ಪ್ರೇಕ್ಷಕರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

‘ಕಾಂತಾರ’ ಚಿತ್ರ 400 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಈ ಯಶಸ್ಸು ಜನರಿಂದ ಬಂದಿದ್ದು ಎಂದು ರಿಷಬ್​ ಹೇಳಿದ್ದಾರೆ. ಹಾಗಾದರೆ ‘ಕಾಂತಾರ 2’ ಸಿನಿಮಾ ಬರುತ್ತಾ ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ‘ಟೈಮ್ ಬಂದಾಗ ಕಾಂತಾರ 2 ಚಿತ್ರ ಬರುತ್ತದೆ. ಅದರ ಬಗ್ಗೆ ಆಗಲೇ ಹೇಳುತ್ತೇವೆ. ಆ ಕುರಿತು ಈಗ ಯಾವುದೇ ಆಲೋಚನೆ ಇಲ್ಲ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Rishab Shetty: ದೇಶಾದ್ಯಂತ ‘ಕಾಂತಾರ’ ಗೆದ್ದಿದ್ದು ಯಾಕೆ? ಬಹಿರಂಗ ವೇದಿಕೆಯಲ್ಲಿ ಕಾರಣ ತಿಳಿಸಿದ ರಿಷಬ್​ ಶೆಟ್ಟಿ

ರಿಷಬ್​ ಶೆಟ್ಟಿ ಅವರಿಗೆ ಸಿದ್ದಶ್ರೀ ಪ್ರಶಸ್ತಿ ನೀಡಲಾಗಿದೆ. ಹೋದಲ್ಲೆಲ್ಲ ಅಭಿಮಾನಿಗಳು ಸಾಕಷ್ಟು ಪ್ರೀತಿ ತೋರಿಸುತ್ತಿದ್ದಾರೆ. ರಿಷಬ್​ ಅವರ ಮುಂದಿನ ಸಿನಿಮಾ ಯಾವುದು ಎಂದು ತಿಳಿದುಕೊಳ್ಳಲು ಸಿನಿಪ್ರಿಯರು ಕಾತರರಾಗಿದ್ದಾರೆ. ಈ ಬಗ್ಗೆ ಸದ್ಯಕ್ಕೆ ರಿಷಬ್​ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ. ಶೀಘ್ರವೇ ಘೋಷಣೆ ಆಗಲಿ ಎಂದು ಫ್ಯಾನ್ಸ್​ ನಿರೀಕ್ಷಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:23 pm, Fri, 2 December 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ