AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

80 ಕೋಟಿ ರೂಪಾಯಿ ಸಂಭಾವನೆ ಡಿಮ್ಯಾಂಡ್ ಮಾಡುತ್ತಿರುವ ರಿಷಬ್ ಶೆಟ್ಟಿ?

ರಿಷಬ್ ಶೆಟ್ಟಿ ನಟಿಸುವ, ನಿರ್ದೇಶಿಸುವ ಸಿನಿಮಾಗಳಿಗೆ ಹಣ ಹೂಡಿದರೆ ನಷ್ಟ ಆಗಲ್ಲ ಎಂಬುದು ಖಚಿತ ಆಗಿದೆ. ಆದ್ದರಿಂದ ಪರಭಾಷೆಯ ದೊಡ್ಡ ದೊಡ್ಡ ನಿರ್ಮಾಪಕರು ರಿಷಬ್ ಶೆಟ್ಟಿ ಜೊತೆ ಸಿನಿಮಾ ಮಾಡಲು ಮುಂದಾಗಿದ್ದಾರೆ. ಹೊಸ ಸಿನಿಮಾಗೆ ರಿಷಬ್ ಶೆಟ್ಟಿ ಅವರು ಬರೋಬ್ಬರಿ 80 ಕೋಟಿ ರೂಪಾಯಿ ಸಂಬಳ ಕೇಳುತ್ತಿದ್ದಾರೆ ಎಂಬ ಸುದ್ದಿ ಹಬ್ಬಿದೆ.

80 ಕೋಟಿ ರೂಪಾಯಿ ಸಂಭಾವನೆ ಡಿಮ್ಯಾಂಡ್ ಮಾಡುತ್ತಿರುವ ರಿಷಬ್ ಶೆಟ್ಟಿ?
Rishab Shetty
ಮದನ್​ ಕುಮಾರ್​
|

Updated on: Feb 03, 2026 | 2:22 PM

Share

ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಬಹಳ ಕಷ್ಟಪಟ್ಟು ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ರಿಷಬ್ ಶೆಟ್ಟಿ ಅವರ ಹೆಸರು ಕರ್ನಾಟಕಕ್ಕೆ ಮಾತ್ರ ಸೀಮಿತ ಆಗಿತ್ತು. ಆದರೆ ‘ಕಾಂತಾರ’ ಸಿನಿಮಾದಿಂದ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆದರು. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆದ ಬಳಿಕ ಅವರ ಡಿಮ್ಯಾಂಡ್ ಹೆಚ್ಚಾಯಿತು. ಅವರ ಜೊತೆ ಸಿನಿಮಾ ಮಾಡಲು ಪರಭಾಷೆಯ ನಿರ್ಮಾಪಕರು ಮುಂದೆ ಬರುತ್ತಿದ್ದಾರೆ. ರಿಷಬ್ ಶೆಟ್ಟಿ ಅವರ ಸಂಭಾವನೆ (Rishab Shetty Remuneration) ಬಗ್ಗೆ ಈಗೊಂದು ಇಂಟರೆಸ್ಟಿಂಗ್ ವಿಷಯ ಕೇಳಿಬಂದಿದೆ.

‘ಜೈ ಹನುಮಾನ್’, ‘ಛತ್ರಪತಿ ಶಿವಾಜಿ ಮಹಾರಾಜ್’ ಮುಂತಾದ ಸಿನಿಮಾಗಳಲ್ಲಿ ರಿಷಬ್ ಶೆಟ್ಟಿ ಅವರು ನಟಿಸುತ್ತಿದ್ದಾರೆ. ಇವೆಲ್ಲವೂ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿವೆ. ಈಗ ರಿಷಬ್ ಶೆಟ್ಟಿ ಅವರ ಮಾರುಕಟ್ಟೆ ಹಿರಿದಾಗಿದೆ. ಅದಕ್ಕೆ ತಕ್ಕಂತೆ ಅವರು ಸಂಭಾವನೆ ಕೇಳುತ್ತಿದ್ದಾರೆ. ವರದಿಗಳ ಪ್ರಕಾರ, ರಿಷಬ್ ಶೆಟ್ಟಿ ಬರೋಬ್ಬರಿ 80 ಕೋಟಿ ರೂಪಾಯಿ ಡಿಮ್ಯಾಂಡ್ ಮಾಡಿದ್ದಾರೆ.

ಚಿತ್ರರಂಗದಲ್ಲಿ ರಿಷಬ್ ಶೆಟ್ಟಿ ಅವರ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತು ಮಾಡಿದ್ದಾರೆ. ನಿರ್ದೇಶಕನಾಗಿ ‘ಕಿರಿಕ್ ಪಾರ್ಟಿ’, ‘ಕಾಂತಾರ’, ‘ಕಾಂತಾರ: ಚಾಪ್ಟರ್ 1’, ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಮುಂತಾದ ಸಿನಿಮಾಗಳಲ್ಲಿ ಅವರು ಯಶಸ್ಸು ಕಂಡಿದ್ದಾರೆ. ನಟನಾಗಿಯೂ ಅವರು ಜನರ ಮನ ಗೆದ್ದಿದ್ದಾರೆ. ಅದಕ್ಕೆ ತಕ್ಕಂತೆ ಅವರ ಸಂಭಾವನೆ ಏರಿಕೆ ಆಗುತ್ತಿದೆ.

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿದ್ದ ‘ಕಾಂತಾರ: ಚಾಪ್ಟರ್ 2’ ಸಿನಿಮಾಗೆ ಬಾಕ್ಸ್ ಆಫೀಸ್​​ನಲ್ಲಿ 850 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಆಗಿದೆ. ಅವರನ್ನು ನಂಬಿಕೊಂಡು ಹಣ ಹೂಡುವ ನಿರ್ಮಾಪಕರಿಗೆ ನಷ್ಟ ಆಗುವುದಿಲ್ಲ ಎಂಬುದು ಚಿತ್ರರಂಗದಲ್ಲಿ ಖಚಿತ ಆಗಿದೆ. ಆದ್ದರಿಂದ ರಿಷಬ್ ಶೆಟ್ಟಿ ಅವರು ಪ್ರತಿ ಸಿನಿಮಾಗೆ 80 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ: ನಿಂತು ಹೋಗಿದ್ದ ಬಿಗ್ ಬಜೆಟ್ ಚಿತ್ರ ಕೈಗೆತ್ತಿಕೊಂಡ ರಿಷಬ್? ನಟನೆಯ ಜೊತೆಗೆ ನಿರ್ದೇಶನ

ಸದ್ಯಕ್ಕೆ ಈ ಮಾಹಿತಿ ಕೇವಲ ಅಂತೆ-ಕಂತೆಯ ಹಂತದಲ್ಲಿ ಇದೆ. ಯಾವುದೇ ಚಿತ್ರತಂಡದವರು ಖಚಿತಪಡಿಸಿಲ್ಲ. ರಿಷಬ್ ಶೆಟ್ಟಿ ಅವರು ಸಾರ್ವಜನಿಕವಾಗಿ ತಮ್ಮ ಸಂಭಾವನೆ ಬಗ್ಗೆ ಮಾತನಾಡಿಲ್ಲ. ಪರಭಾಷೆಯ ಕೆಲವು ಮಾಧ್ಯಮಗಳು ಈ ಕುರಿತು ಸುದ್ದಿ ಪ್ರಕಟ ಮಾಡಿವೆ. ರಿಷಬ್ ಶೆಟ್ಟಿ ಅವರ ಸಂಭಾವನೆ 80 ಕೋಟಿ ರೂಪಾಯಿಗೆ ಏರಿಕೆ ಆಗಿದೆ ಎಂದು ವರದಿ ಮಾಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ