‘ನನ್ನನ್ನು ಒಂದು ಪಕ್ಷಕ್ಕೆ ಸೇರಿಸಿಬಿಟ್ಟಿದ್ದಾರೆ’, ರಾಜಕೀಯ ಪ್ರವೇಶದ ಬಗ್ಗೆ ರಿಷಬ್ ಶೆಟ್ಟಿ ಖಚಿತ ಹೇಳಿಕೆ

ನನ್ನನ್ನು ಒಂದು ರಾಜಕೀಯ ಪಕ್ಷಕ್ಕೆ ಸೇರಿಸಿಬಿಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿರುವ ರಿಷಬ್ ಶೆಟ್ಟಿ, ರಾಜಕೀಯ ಪ್ರವೇಶದ ಬಗ್ಗೆ ತಮ್ಮ ನಿಲುವು ವ್ಯಕ್ತಪಡಿಸಿದ್ದಾರೆ.

'ನನ್ನನ್ನು ಒಂದು ಪಕ್ಷಕ್ಕೆ ಸೇರಿಸಿಬಿಟ್ಟಿದ್ದಾರೆ', ರಾಜಕೀಯ ಪ್ರವೇಶದ ಬಗ್ಗೆ ರಿಷಬ್ ಶೆಟ್ಟಿ ಖಚಿತ ಹೇಳಿಕೆ
ರಿಷಬ್ ಶೆಟ್ಟಿ
Follow us
ಮಂಜುನಾಥ ಸಿ.
|

Updated on:Apr 01, 2023 | 3:41 PM

ಕಾಂತಾರ (Kantara) ಸಿನಿಮಾದ ಬಳಿಕ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಬಹುವಾಗಿ ಚರ್ಚೆಯಲ್ಲಿದ್ದಾರೆ. ಅವರ ಪ್ರತಿ ಹೇಳಿಕೆ, ಹಾಕುವ ಬಟ್ಟೆಗಳನ್ನೂ ಗಮನಿಸಿ ಅದರಲ್ಲೊಂದು ‘ಸ್ಟೇಟ್​ಮೆಂಟ್’ ಹುಡುಕಲಾಗುತ್ತಿದೆ. ಕಾಂತಾರ ಸಿನಿಮಾವನ್ನು ದೊಡ್ಡ ಸಂಖ್ಯೆಯ ಸಿನಿಮಾ ಪ್ರೇಮಿಗಳು ನೋಡಿ ಮೆಚ್ಚಿಕೊಂಡಿದ್ದಾರೆ. ಆದರೆ ಅದೇ ಸಿನಿಮಾದ ಚುಂಗು ಹಿಡಿದು ಸಾಮಾಜಿಕ ಜಾಲತಾಣದಲ್ಲಿ  ಎಡ-ಬಲ ಪಂಥಗಳವರು ಕಿತ್ತಾಡಿದ್ದೂ ಇದೆ, ರಿಷಬ್ ಶೆಟ್ಟಿಯನ್ನು ಒಂದು ಪಕ್ಷದ ವಕ್ತಾರನಂತೆ ಬಿಂಬಿಸಿದ ಉದಾಹರಣೆಗಳೂ ಇವೆ. ಇದೆಲ್ಲದರ ನಡುವೆ ಇಂದು ರಿಷಬ್ ಶೆಟ್ಟಿ ಹಠಾತ್ತನೇ ತಮ್ಮ ರಾಜಕೀಯ (Politics) ಪ್ರವೇಶದ ಬಗ್ಗೆ ಟ್ವೀಟ್ ಒಂದನ್ನು ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ರಿಷಬ್ ಶೆಟ್ಟಿ, ವಿಶ್ವಸಂಸ್ಥೆಗೆ ಹೋಗಿದ್ದಾಗ ಅಲ್ಲಿ ತೆಗೆಸಿಕೊಂಡಿದ್ದ ಚಿತ್ರಗಳನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದರು. ಮೋದಿ ಜಾಕೆಟ್ ಮಾದರಿಯ ನೀಲಿ ಬಣ್ಣದ ಜಾಕೆಟ್ ಧರಿಸಿ ಬಿಳಿ ಬಣ್ಣದ ಕುರ್ತಾ ಧರಿಸಿ ಥೇಟ್ ರಾಜಕಾರಣಿಯಂತೆ ಕಾಣುತ್ತಿದ್ದರು ರಿಷಬ್. ಇದೀಗ ಪತ್ರಕರ್ತೆಯೊಬ್ಬರು ರಿಷಬ್ ಅವರ ಅದೇ ಚಿತ್ರವನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಂಡು, ರಿಷಬ್ ಶೆಟ್ಟಿ ರಾಜಕೀಯ ಪ್ರವೇಶಿಸುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಅವರು ಈ ಪೋಸ್ಟ್ ಅನ್ನು ಏಪ್ರಿಲ್ ಫೂಲ್ ಮಾಡಲೆಂದು ತಮಾಷೆಗೆ ಹಂಚಿಕೊಂಡಿದ್ದಾರಷ್ಟೆ.

ಪತ್ರಕರ್ತೆಯ ಟ್ವೀಟ್​ಗೆ ತಮಾಷೆಯಾಗಿಯೇ ಪ್ರತಿಕ್ರಿಯಿಸಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ, ”ಸುಮ್ಮನೆ ಇರಿ ಮಾರಾರ್ಯೆ, ಸುಳ್ಳು ಸುದ್ದಿ ಇದು, ಏಪ್ರಿಲ್ 1 ಎಂದು ಸ್ಪಷ್ಟವಾಗಿ ಹೇಳಿ. ಮೊದಲೇ ಕೆಲವರು ನನ್ನನ್ನು ಒಂದು ಪಕ್ಷಕ್ಕೆ ಸೇರಿಸಿಬಿಟ್ಟಿದ್ದಾರೆ. ನಾನು ರಾಜಕೀಯಕ್ಕೆ ಎಂದೂ ಹೋಗುವುದಿಲ್ಲ” ಎಂದಿದ್ದಾರೆ. ರಿಷಬ್ ಶೆಟ್ಟರ ಈ ಟ್ವೀಟ್​ಗೆ ವ್ಯಕ್ತಿಯೊಬ್ಬ ಪ್ರತಿಕ್ರಿಯಿಸಿ ‘ಬನ್ನಿ ಶೆಟ್ರೆ, ನನ್ನ ಫುಲ್ ಬೆಂಬಲ ನಿಮಗೆ’ ಎಂದಿದ್ದಾನೆ. ಆ ವ್ಯಕ್ತಿಗೂ ಪ್ರತಿಕ್ರಿಯೆ ನೀಡಿರುವ ರಿಷಬ್ ಶೆಟ್ಟಿ, ‘ಬೇಡ ದೇವ್ರು ನನ್ನ ಸಿನಿಮಾಕ್ಕೆ ನಿಮ್ಮ ಬೆಂಬಲ ಇದ್ರೆ ಸಾಕು’ ಎಂದಿದ್ದಾರೆ.

ರಿಷಬ್ ಶೆಟ್ಟಿಯವರ ರಾಜಕೀಯದ ಪ್ರವೇಶದ ಬಗ್ಗೆ ಅಥವಾ ರಾಜಕೀಯ ಪಕ್ಷವೊಂದಕ್ಕೆ ಬೆಂಬಲ ನೀಡುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಲ್ಲಲ್ಲಿ ಮಾತುಗಳು ಕೇಳಿ ಬರುತ್ತಿದ್ದವು. ಇದೀಗ ಸ್ವತಃ ರಿಷಬ್ ಶೆಟ್ಟಿಯವರು ಎಲ್ಲ ಊಹಾಪೋಹಗಳಿಗೆ ಟ್ವೀಟ್​ ಮೂಲಕ ತೆರೆ ಎಳೆದಿದ್ದಾರೆ. ರಿಷಬ್ ಶೆಟ್ಟಿ ಸಂಪೂರ್ಣವಾಗಿ ಸಿನಿಮಾಗಳ ಮೇಲೆ ಮಾತ್ರವೇ ಗಮನ ಕೇಂದ್ರೀಕರಿಸಲು ನಿರ್ಧರಿಸಿದಂತಿದೆ.

ರಿಷಬ್ ಶೆಟ್ಟಿಯವರು ಬಿಜೆಪಿ ಪಕ್ಷ ಹಾಗೂ ಅದರ ಆಲೋಚನೆಗಳ ಪರವಾಗಿ ಒಲವಿರುವವರು ಎಂದು ಬ್ರ್ಯಾಂಡ್ ಮಾಡಲಾಗಿದೆ. ಅದಕ್ಕೆ ಕಾರಣವೂ ಇದೆ. ರಿಷಬ್ ಶೆಟ್ಟಿಯವರು ಕೆಲವು ಬಾರಿ ಮೋದಿಯವರ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದರು. ಇತ್ತೀಚಿನ ಸಂದರ್ಶನವೊಂದರಲ್ಲಿ ಮೋದಿಯವರನ್ನು ಹೊಗಳಿ ಆ ನಂತರ ರಾಹುಲ್ ಗಾಂಧಿ ಬಗ್ಗೆ ಕೇಳಿದಾಗ ನೋ ಕಮೆಂಟ್ಸ್ ಎಂದಿದ್ದರು ರಿಷಬ್, ಇದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು. ಹಿಂದೊಮ್ಮೆ ಬೆಲ್ ಬಾಟಮ್ ಸಿನಿಮಾದ ಸಂದರ್ಭದಲ್ಲಿಯೂ ಸಹ ಬಲಪಂಥೀಯರ ವಾದ ಸರಣಿಯ ರೀತಿಯಲ್ಲಿಯೇ ಬುದ್ಧಿಜೀವಿಗಳನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದರು ರಿಷಬ್ ಶೆಟ್ಟಿ.

ಏನಾದರಾಗಲಿ ರಿಷಬ್ ಶೆಟ್ಟಿ, ತಾವು ರಾಜಕೀಯ ಪ್ರವೇಶಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈಗ ಮಾತ್ರವಲ್ಲ ಎಂದಿಗೂ ರಾಜಕೀಯಕ್ಕೆ ಕಾಲಿಡುವುದಿಲ್ಲ ಎಂದಿದ್ದಾರೆ ಬೇರೆ. ಇದೇ ನಿಲವು ಅಚಲವಾಗಿ ಉಳಿಯುತ್ತದೆಯೇ? ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:29 pm, Sat, 1 April 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್