ಬೆಂಗಳೂರು ಬಿಟ್ಟು ಕುಂದಾಪುರಕ್ಕೆ ಶಿಫ್ಟ್ ಆದ ರಿಷಬ್ ಶೆಟ್ಟಿ; ಊರಲ್ಲೇ ಮಗನ ಶಾಲೆಗೆ ಸೇರಿಸಿದ ನಟ

‘ಕಾಂತಾರ: ಅಧ್ಯಾಯ 1’ ಚಿತ್ರದ ಶೂಟಿಂಗ್​ಗಾಗಿ ಕುಂದಾಪುರದಲ್ಲಿ ದೊಡ್ಡ ಸ್ಟುಡಿಯೋ ಮಾಡಿ ಸೆಟ್ ಹಾಕಲಾಗಿದೆ. ಅಲ್ಲಿಯೇ ಶೂಟಿಂಗ್ ನಡೆಯುತ್ತಿದೆ. ವಿಶೇಷ ಎಂದರೆ ಈಗಾಗಲೇ ಒಂದು ಹಂತದ ಶೂಟಿಂಗ್ ಪೂರ್ತಿ ಆಗಿದೆಯಂತೆ. ಇಂಡೋರ್​, ಔಟ್​ಡೋರ್ ಎಲ್ಲವೂ ಅಲ್ಲಿಯೇ ಶೂಟ್ ಮಾಡಲಾಗುತ್ತಿದೆ ಎಂದು ರಿಷಬ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು ಬಿಟ್ಟು ಕುಂದಾಪುರಕ್ಕೆ ಶಿಫ್ಟ್ ಆದ ರಿಷಬ್ ಶೆಟ್ಟಿ; ಊರಲ್ಲೇ ಮಗನ ಶಾಲೆಗೆ ಸೇರಿಸಿದ ನಟ
ರಿಷಬ್ ಶೆಟ್ಟಿ
Follow us
ರಾಜೇಶ್ ದುಗ್ಗುಮನೆ
|

Updated on:Jun 05, 2024 | 8:37 AM

ಸ್ಯಾಂಡಲ್​ವುಡ್ ಮಂದಿಗೆ ಬೆಂಗಳೂರು ಫೇವರಿಟ್. ಸಿನಿಮಾ ಕೆಲಸಗಳ ಹೃದಯಭಾಗ ಇರೋದು ಇಲ್ಲಿಯೇ. ಹೀಗಾಗಿ, ಬೇರೆ ಕಡೆ ಇದ್ದವರೂ ಬೆಂಗಳೂರಿಗೆ ಬಂದು ಸಿನಿಮಾ ಮಾಡೋಕೆ ಪ್ರಯತ್ನಿಸುತ್ತಾರೆ. ಆದರೆ, ರಿಷಬ್ ಶೆಟ್ಟಿ  (Rishab Shetty)ಈ ವಿಚಾರದಲ್ಲಿ ಡಿಫರೆಂಟ್. ಅವರು ಸದ್ಯ ಕುಂದಾಪುರಕ್ಕೆ ಶಿಫ್ಟ್ ಆಗಿದ್ದಾರೆ. ಮಗನನ್ನು ಕುಂದಾಪುರದ ಶಾಲೆಗೆ ಸೇರಿಸಿದ್ದಾರೆ. ಇದಕ್ಕೆ ಕಾರಣ ಆಗಿದ್ದು ‘ಕಾಂತಾರ: ಚಾಪ್ಟರ್ 1’ ಸಿನಿಮಾ. ಈ ಚಿತ್ರದ ಶೂಟಿಂಗ್ ಸದ್ಯ ಕುಂದಾಪುರದಲ್ಲಿ ನಡೆಯುತ್ತಿದೆ. ಈ ಕಾರಣಕ್ಕೆ ಪತ್ನಿ ಪ್ರಗತಿ ಹಾಗೂ ಮಕ್ಕಳ ಜೊತೆ ಅವರು ಅಲ್ಲಿಗೆ ತೆರಳಿದ್ದಾರೆ.

‘ಕಾಂತಾರ: ಅಧ್ಯಾಯ 1’ ಚಿತ್ರದ ಶೂಟಿಂಗ್​ಗಾಗಿ ಕುಂದಾಪುರದಲ್ಲಿ ದೊಡ್ಡ ಸ್ಟುಡಿಯೋ ಮಾಡಿ ಸೆಟ್ ಹಾಕಲಾಗಿದೆ. ಅಲ್ಲಿಯೇ ಶೂಟಿಂಗ್ ನಡೆಯುತ್ತಿದೆ. ವಿಶೇಷ ಎಂದರೆ ಈಗಾಗಲೇ ಒಂದು ಹಂತದ ಶೂಟಿಂಗ್ ಪೂರ್ತಿ ಆಗಿದೆಯಂತೆ. ಇಂಡೋರ್​, ಔಟ್​ಡೋರ್ ಎಲ್ಲವೂ ಅಲ್ಲಿಯೇ ಶೂಟ್ ಮಾಡಲಾಗುತ್ತಿದೆ ಎಂದು ರಿಷಬ್ ಮಾಹಿತಿ ನೀಡಿದ್ದಾರೆ. ಅವರು ಈ ಸಿನಿಮಾ ಶೂಟ್​ಗಾಗಿ ಈ ಮೊದಲು 10 ಕೆಜಿ ತೂಕ ಹೆಚ್ಚಿಸಿಕೊಂಡಿದ್ದರು. ಈಗ 8 ಕೆಜಿ ಇಳಿಸಿಕೊಂಡಿದ್ದಾರೆ.

‘ಈಗಾಗಲೇ ಒಂದು ಹಂತದ ಶೂಟಿಂಗ್ ಮುಗಿದಿದೆ. 100ಕ್ಕೂ ಅಧಿಕ ದಿನ ಶೂಟಿಂಗ್ ನಡೆಯಲಿದೆ. ಬಳಿಕ ಬೇರೆ ಭಾಷೆಗಳಿಗೆ ಡಬ್ಬಿಂಗ್ ನಡೆಯಲಿದೆ. ಸಿನಿಮಾ ಕೆಲಸ ಈ ವರ್ಷ ಪೂರ್ಣಗೊಳ್ಳಲಿದೆ. ಬಿಡುಗಡೆ ಮುಂದಿನ ವರ್ಷ ಆಗುತ್ತದೆ. ರಿಲೀಸ್ ಬಗ್ಗೆ ಹೊಂಬಾಳೆ ಫಿಲ್ಮ್ಸ್ ನಿರ್ಧಾರ ತೆಗೆದುಕೊಳ್ಳುತ್ತದೆ’ ಎಂದಿದ್ದಾರೆ ರಿಷಬ್.

ಇದನ್ನೂ ಓದಿ: ಜೂನ್​ 14ಕ್ಕೆ ಬಿಡುಗಡೆ ಆಗಲಿದೆ ರಿಷಬ್​ ಶೆಟ್ಟಿ ನಿರ್ಮಾಣದ ‘ಶಿವಮ್ಮ’ ಸಿನಿಮಾ

‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಅವರು ಸಾಕಷ್ಟು ಶ್ರದ್ಧೆಯಿಂದ ಪ್ರೀಕ್ವೆಲ್ ಕೆಲಸಗಳನ್ನು ಮಾಡುತ್ತಿದ್ದಾರೆ. ‘ಕಾಂತಾರ’ ಸಿನಿಮಾಗಿಂತ ಹಿಂದೇನಾಗಿತ್ತು ಎಂಬುದನ್ನು ಈ ಚಿತ್ರದಲ್ಲಿ ಹೇಳಲಾಗುತ್ತಿದೆ. ಈ ಚಿತ್ರಕ್ಕಾಗಿ ಅವರು ಕಲರಿಪಯಟ್ಟು ಕೂಡ ಅವರು ಕಲಿಯುತ್ತಿದ್ದಾರೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:58 am, Wed, 5 June 24

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು