ಅನಂತ್ ನಾಗ್ ಚಿತ್ರರಂಗಕ್ಕೆ ಕಾಲಿಟ್ಟು 50 ವರ್ಷ; ಶುಭಕೋರಿದ ಶಿವಣ್ಣ, ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ನಿರ್ದೇಶನದ ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರದಲ್ಲಿ ಅನಂತ್ ನಾಗ್ ಅವರು ನಟಿಸಿದ್ದರು. ಅವರು ಮಾಡಿದ ಪಾತ್ರ ಗಮನ ಸೆಳೆದಿತ್ತು. ಹೀಗಾಗಿ ರಿಷಬ್ ಹಾಗೂ ಅನಂತ್​ ನಾಗ್ ಮಧ್ಯೆ ಒಳ್ಳೆಯ ಒಡನಾಟ ಇದೆ.

ಅನಂತ್ ನಾಗ್ ಚಿತ್ರರಂಗಕ್ಕೆ ಕಾಲಿಟ್ಟು 50 ವರ್ಷ; ಶುಭಕೋರಿದ ಶಿವಣ್ಣ, ರಿಷಬ್ ಶೆಟ್ಟಿ
ಶಿವಣ್ಣ-ಅನಂತ್ ನಾಗ್-ರಿಷಬ್
Follow us
ರಾಜೇಶ್ ದುಗ್ಗುಮನೆ
|

Updated on: Aug 03, 2023 | 10:25 AM

ಅನಂತ್ ನಾಗ್ (Anant Nag) ಅವರು ಚಿತ್ರರಂಗಕ್ಕೆ ಬಂದು 50 ವರ್ಷ ಕಳೆದಿದೆ. ಬಣ್ಣದ ಲೋಕಕ್ಕೆ ಅವರು ನೀಡಿದ ಸೇವೆ ದೊಡ್ಡದು. ಅವರು ತಮ್ಮ ಕಲಾ ಸೇವೆಯನ್ನು ನಿಲ್ಲಿಸಿಲ್ಲ. ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಅವರು ನೀಡಿದ ಸೇವೆಗೆ ಎಲ್ಲ ಕಡೆಗಳಿಂದ ಶುಭಾಶಯಗಳು ಬರುತ್ತಿವೆ. ರಿಷಬ್ ಶೆಟ್ಟಿ  (Rishab Shetty), ಶಿವರಾಜ್​ಕುಮಾರ್ ಸೇರಿದಂತೆ ಅನೇಕರು ಅನಂತ್ ನಾಗ್ ಅವರಿಗೆ ವಿಶ್ ಮಾಡಿದ್ದಾರೆ.

‘ಸಂಕಲ್ಪ’ (1973) ಚಿತ್ರದ ಮೂಲಕ ಅನಂತ್ ನಾಗ್ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನಿಮಾ ರಿಲೀಸ್ ಆಗಿ 50 ವರ್ಷಗಳು ಕಳೆದಿವೆ. ಐದು ದಶಕಗಳಲ್ಲಿ ಅವರು ನಟಿಸಿದ ಸಿನಿಮಾಗಳಿಗೆ ಲೆಕ್ಕವಿಲ್ಲ. ಫಿಲ್ಮ್​ಫೇರ್, ರಾಜ್ಯ ಪ್ರಶಸ್ತಿ ಸೇರಿ ಅನೇಕ ಅವಾರ್ಡ್​ಗಳು ಅವರಿಗೆ ಸಿಕ್ಕಿವೆ. ಇವೆಲ್ಲಕ್ಕಿಂತ ಮುಖ್ಯವಾಗಿ ಅವರು ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ‘ನನಗೆ ಅವಾರ್ಡ್​ಗಳಿಗಿಂತ ಅಭಿಮಾನ ಮುಖ್ಯ’ ಎಂದು ಈ ಮೊದಲು ಅವರು ಹೇಳಿದ್ದರು.

ಅನಂತ್ ನಾಗ್ ಜೊತೆ ಇರುವ ಫೋಟೋ ಹಂಚಿಕೊಂಡಿರುವ ಶಿವರಾಜ್​ಕುಮಾರ್ ಅವರು, ‘ಚಿತ್ರರಂಗದಲ್ಲಿ 50 ವರ್ಷ ಯಶಸ್ವಿಯಾಗಿ ಪೂರೈಸಿದ ಅನಂತ್ ನಾಗ್ ಸರ್ ಅವರಿಗೆ ಹೃತ್ಪೂರ್ವಕ ಅಭಿನಂದನೆ. ನಿಮ್ಮ ಪ್ರತಿಭೆ ವರ್ಚಸ್ಸು ತಲೆಮಾರುಗಳವರೆಗೆ ಪ್ರೇರಣೆ’ ಎಂದು ಬರೆದುಕೊಂಡಿದ್ದಾರೆ.

ರಿಷಬ್ ಶೆಟ್ಟಿ ನಿರ್ದೇಶನದ ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರದಲ್ಲಿ ಅನಂತ್ ನಾಗ್ ಅವರು ನಟಿಸಿದ್ದರು. ಅವರು ಮಾಡಿದ ಪಾತ್ರ ಗಮನ ಸೆಳೆದಿತ್ತು. ಹೀಗಾಗಿ ರಿಷಬ್ ಹಾಗೂ ಅನಂತ್​ ನಾಗ್ ಮಧ್ಯೆ ಒಳ್ಳೆಯ ಒಡನಾಟ ಇದೆ. ‘ಕನ್ನಡ ಚಿತ್ರರಂಗದ ಮೇರು ನಟ, ನಮ್ಮೆಲ್ಲರ ಪ್ರೀತಿಯ ಅನಂತ್ ನಾಗ್ ಸರ್ ಚಿತ್ರರಂಗದಲ್ಲಿ 50 ವಸಂತಗಳನ್ನು ಪೂರೈಸಿದ್ದಾರೆ. ನಮ್ಮ ಸ.ಹಿ.ಪ್ರಾ.ಶಾಲೆ ಕಾಸರಗೋಡು ಚಿತ್ರದ ಅನಂತಪದ್ಮನಾಭರಿಗೆ ಅನಂತ ಶುಭಾಶಯಗಳು. ನಿಮ್ಮ ಪಯಣ ಸ್ಫೂರ್ತಿದಾಯಕ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ನನ್ನ ಸಿನಿಮಾಗಳನ್ನೂ ನಾನು ನೋಡುವುದಿಲ್ಲ’; ಅಚ್ಚರಿಯ ವಿಚಾರ ಬಿಚ್ಚಿಟ್ಟ ಅನಂತ್ ನಾಗ್

ಕಳೆದ ವರ್ಷ ಅನಂತ್ ನಾಗ್ ನಟನೆಯ ‘ತಿಮ್ಮಯ್ಯ & ತಿಮ್ಮಯ್ಯ’, ‘ಗಾಳಿಪಟ 2’,  ‘ವಿಜಯಾನಂದ’, ‘ಮೇಡ್ ಇನ್ ಬೆಂಗಳೂರು’ ಸಿನಿಮಾಗಳು ತೆರೆಗೆ ಬಂದವು. ಈಗ ಅವರು ಕೆಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಅವರು ರಾಜಕೀಯಕ್ಕೆ ಕಾಲಿಡುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ ಅದು ನಿಜವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್