AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂತಾರ ಚಿತ್ರದ ಕಲಾವಿದರು ತೆರಳುತ್ತಿದ್ದ ಬಸ್ ಪಲ್ಟಿ; 6 ಜನರಿಗೆ ಗಂಭೀರ ಗಾಯ

ವಿವಿಧ ಲೊಕೇಷನ್​ಗಳಲ್ಲಿ ‘ಕಾಂತಾರ: ಚಾಪ್ಟರ್​ 1’ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಆದರೆ ಈ ಚಿತ್ರತಂಡದ ಬಗ್ಗೆ ಒಂದು ಕಹಿ ಸುದ್ದಿ ಕೇಳಿಬಂದಿದೆ. ಈ ಚಿತ್ರದಲ್ಲಿ ನಟಿಸುತ್ತಿದ್ದ ಕಲಾವಿದರು ತೆರಳುತ್ತಿದ್ದ ಬಸ್​ ಅಪಘಾತ ಆಗಿದೆ. ಮಿನಿ ಬಸ್ ಪಲ್ಟಿ ಆಗಿದ್ದರಿಂದ 6 ಜನರ ಪರಿಸ್ಥಿತಿ ಗಂಭೀರವಾಗಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ಕಾಂತಾರ ಚಿತ್ರದ ಕಲಾವಿದರು ತೆರಳುತ್ತಿದ್ದ ಬಸ್ ಪಲ್ಟಿ; 6 ಜನರಿಗೆ ಗಂಭೀರ ಗಾಯ
ರಿಷಬ್​ ಶೆಟ್ಟಿ
ಪ್ರಜ್ವಲ್ ಅಮೀನ್​, ಉಡುಪಿ
| Updated By: ಮದನ್​ ಕುಮಾರ್​|

Updated on:Nov 24, 2024 | 11:13 PM

Share

ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್​ 1’ ಸಿನಿಮಾದಲ್ಲಿ ನಟಿಸುತ್ತಿರುವ ಕಲಾವಿದರ ಬಸ್​ ಅಪಘಾತ ಆಗಿದೆ. ಶೂಟಿಂಗ್ ಸಲುವಾಗಿ ಜ್ಯೂನಿಯರ್​ ಕಲಾವಿದರನ್ನು ಕರೆದುಕೊಂಡು ಹೋಗಿದ್ದ ಮಿನಿ ಬಸ್​ ಪಲ್ಟಿ ಆಗಿದೆ. ಕೊಲ್ಲೂರು ಸಮೀಪದ ಜಡ್ಕಳ್ ಬಳಿ ಪಲ್ಟಿಯಾದ ಬಸ್​ನಲ್ಲಿ ಹಲವರು ಇದ್ದರು. ಆ ಪೈಕಿ 6 ಜನರಿಗೆ ಗಂಭೀರವಾಗಿ ಪೆಟ್ಟಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕರಾವಳಿ ಭಾಗದ ಬೇರೆ ಬೇರೆ ಲೊಕೇಷನ್​ಗಳಲ್ಲಿ ‘ಕಾಂತಾರ: ಚಾಪ್ಟರ್​ 1’ ಸಿನಿಮಾಗೆ ಶೂಟಿಂಗ್ ಮಾಡಲಾಗುತ್ತಿದೆ. ವಿವಿಧ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ಕೊಲ್ಲೂರಿಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕೊಲ್ಲೂರಿನ ಕಡೆಗೆ ಹೋಗುತ್ತಿದ್ದಾಗ ಮಿನಿ ಬಸ್​ ಪಲ್ಟಿಯಾಯಿತು ಎಂದು ತಿಳಿದುಬಂದಿದೆ. 20 ಜ್ಯೂನಿಯರ್ ಕಲಾವಿದರು ಈ ಬಸ್​ನಲ್ಲಿ ಪ್ರಯಾಣಿಸುತ್ತಿದ್ದರು.

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ವಿಜಯ್ ಕಿರಗಂದೂರು ಅವರು ‘ಕಾಂತಾರ: ಚಾಪ್ಟರ್​ 1’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಿಷಬ್​ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಭೂಮಿಕೆಯಲ್ಲೂ ನಟಿಸುತ್ತಿದ್ದಾರೆ. ‘ಕಾಂತಾರ’ ಚಿತ್ರದ ಪ್ರೀಕ್ವೆಲ್​ ಆಗಿ ‘ಕಾಂತಾರ: ಚಾಪ್ಟರ್​ 1’ ಸಿನಿಮಾ ಮೂಡಿಬರುತ್ತಿದೆ. ಬಸ್​ ಪಲ್ಟಿ ಆಗಿದ್ದರಿಂದ ಚಿತ್ರತಂಡದಲ್ಲಿ ಬೇಸರ ಆವರಿಸಿದೆ. ಅಪಘಾತಕ್ಕೆ ಒಳಗಾದವರ ಹೆಲ್ತ್​ ಅಪ್​ಡೇಟ್​ ಇನ್ನಷ್ಟೇ ಸಿಗಬೇಕಿದೆ.

ಇದನ್ನೂ ಓದಿ: ರಾನಾ ಜೊತೆ ಪೋಸ್ ಕೊಟ್ಟ ರಿಷಬ್; ‘ಕಾಂತಾರ’ ಚಿತ್ರಕ್ಕಾ?

ಇತ್ತೀಚೆಗಷ್ಟೇ ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್​ 1’ ಸಿನಿಮಾದ ರಿಲೀಸ್​ ಡೇಟ್​ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. 2025ರ ಅಕ್ಟೋಬರ್​ 2ರಂದು ಈ ಸಿನಿಮಾ ರಿಲೀಸ್ ಆಗಲಿದೆ ಎಂದು ಅವರು ತಿಳಿಸಿದ್ದರು. ‘ಕಾಂತಾರ’ ಚಿತ್ರದಲ್ಲಿ ದೈವಾರಾಧನೆ ಬಗ್ಗೆ ತೋರಿಸಲಾಗಿತ್ತು. ಆ ಚಿತ್ರದ ನಟನೆಗಾಗಿ ರಿಷಬ್​ ಶೆಟ್ಟಿ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದ್ದೂ ಅಲ್ಲದೇ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಬಂತು. ಈ ಎಲ್ಲ ಕಾರಣಗಳಿಂದಾಗಿ ಪ್ರೀಕ್ವೆಲ್​ ಮೇಲೆ ನಿರೀಕ್ಷೆ ಜಾಸ್ತಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:10 pm, Sun, 24 November 24

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು