AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕಲಾವಿದ ನಿಧನ; ರಿಷಬ್ ಶೆಟ್ಟಿ ಚಿತ್ರಕ್ಕೆ ಸಂಕಷ್ಟ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ: ಚಾಪ್ಟರ್ 1’ ಚಿತ್ರದ ಶೂಟಿಂಗ್ ವೇಳೆ ಅವಘಡ ನಡೆದಿದೆ. ಸಿನಿಮಾ ಸೆಟ್​ನಲ್ಲಿದ್ದ ಜೂನಿಯರ್ ಆರ್ಟಿಸ್ಟ್​ ಕಪಿಲ್ ಎಂಬುವವರು ನಿಧನರಾಗಿದ್ದಾರೆ. ನೀರಿನಲ್ಲಿ ಮುಳುಗಿ ಅವರು ಸಾವನ್ನಪ್ಪಿದ್ದಾರೆ. ಕೊಲ್ಲೂರಿನಲ್ಲಿ ಈ ಘಟನೆ ನಡೆದಿದ್ದು, ಚಿತ್ರತಂಡಕ್ಕೆ ವಿಘ್ನ ಎದುರಾಗಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕಲಾವಿದ ನಿಧನ; ರಿಷಬ್ ಶೆಟ್ಟಿ ಚಿತ್ರಕ್ಕೆ ಸಂಕಷ್ಟ
Junior Artist Kapil, Rishab Shetty
ಪ್ರಜ್ವಲ್ ಅಮೀನ್​, ಉಡುಪಿ
| Updated By: ಮದನ್​ ಕುಮಾರ್​|

Updated on:May 06, 2025 | 10:43 PM

Share

ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾದ ಶೂಟಿಂಗ್ ವೇಳೆ ಅವಘಡ ಸಂಭವಿಸಿದೆ. ಈ ಸಿನಿಮಾದ ಸೆಟ್​ನಲ್ಲಿದ್ದ ಜೂನಿಯರ್ ಆರ್ಟಿಸ್ಟ್​ ನಿಧನರಾಗಿದ್ದಾರೆ. ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ (Junior Artist) ಕಪಿಲ್ ಅವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ಈ ಘಟನೆ ನಡೆದಿದೆ. ಇದರಿಂದ ಸಿನಿಮಾ ತಂಡಕ್ಕೆ ವಿಘ್ನ ಎದುರಾದಂತೆ ಆಗಿದೆ. ರಿಷಬ್ ಶೆಟ್ಟಿ (Rishab Shetty) ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

ಶೂಟಿಂಗ್ ಮುಗಿಸಿದ ಬಳಿಕ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಕಪಿಲ್ ಅವರು ತಮ್ಮ ತಂಡದವರ ಜೊತೆ ಈಜಲು ತೆರಳಿದ್ದರು. ನೀರಿನ ಆಳ ತಿಳಿಯದೇ ಅವರು ನದಿಗೆ ಇಳಿದರು. ಈ ವೇಳೆ ಅವರು ಮುಳುಗಿ ಸಾವಿಗೀಡಾಗಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಚಿತ್ರದ ಹವಾ; ಸೂಪರ್ ಸ್ಟಾರ್​ಗಳನ್ನು ಹಿಂದಿಕ್ಕಿದ ರಿಷಬ್ ಶೆಟ್ಟಿ

ಇದನ್ನೂ ಓದಿ
Image
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
Image
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ
Image
ರಿಷಬ್ ಶೆಟ್ಟಿ ನಟನೆಯ ಬಾಲಿವುಡ್ ಸಿನಿಮಾದ ಪೋಸ್ಟರ್ ಬಿಡುಗಡೆ
Image
ರಿಷಬ್ ಶೆಟ್ಟಿ ಮೊದಲ ಹೆಸರೇನು? ನಾಮ ಬದಲಿಸಿಕೊಳ್ಳಲು ಕಾರಣವಾಯಿತು ಆ ಘಟನೆ

‘ಕಾಂತಾರ: ಚಾಪ್ಟರ್ 1’ ಸಿನಿಮಾ ತಂಡಕ್ಕೆ ಒಂದಲ್ಲ ಒಂದು ಗಂಡಾಂತರ ಎದುರಾಗುತ್ತಲೇ ಇದೆ. ಈ ಮೊದಲು ದೈವ ನುಡಿದಂತೆಯೇ ಚಿತ್ರೀಕರಣಕ್ಕೆ ಹಲವು ಸಂಕಷ್ಟಗಳು ಎದುರಾಗುತ್ತಿವೆ. ಈ ಹಿಂದೆ ಕೊಲ್ಲೂರಿನಲ್ಲೇ ಜೂನಿಯರ್ ಆರ್ಟಿಸ್​ಟ್​ಗಳಿದ್ದ ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿತ್ತು. ಬಳಿಕ ಗಾಳಿ ಮಳೆಗೆ ಬೃಹತ್ ಸೆಟ್ ಹಾರಿ ಹೋಗಿತ್ತು. ಇಂಥ ಘಟನೆಗಳ ಬೆನ್ನಲ್ಲೇ ಜೂನಿಯರ್ ಆರ್ಟಿಸ್ಟ್ ದಾರುಣ ಸಾವು ಸಂಭವಿಸಿದೆ.

‘ಹೊಂಬಾಳೆ ಫಿಲ್ಮ್ಸ್’ ಮೂಲಕ ‘ಕಾಂತಾರ: ಚಾಪ್ಟರ್ 1’ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಸಿನಿಮಾ ಮೇಲೆ ಜನರಿಗೆ ಹೆಚ್ಚು ನಿರೀಕ್ಷೆ ಇದೆ. ‘ಕಾಂತಾರ’ ಸಿನಿಮಾದ ಪ್ರೀಕ್ವೆಲ್ ಆಗಿ ಈ ಚಿತ್ರ ಮೂಡಿಬರುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ತಯಾರಾಗುತ್ತಿದೆ. ಆದರೆ ಶೂಟಿಂಗ್ ಸಂದರ್ಭದಲ್ಲಿ ಅನೇಕ ತೊಂದರೆಗಳು ಉಂಟಾಗುತ್ತಿವೆ.

ಜೂನಿಯರ್ ಆರ್ಟಿಸ್ಟ್ ಕಪಿಲ್ ನಿಧನರಾಗಿರುವುದು ‘ಕಾಂತಾರ: ಚಾಪ್ಟರ್ 1’ ತಂಡಕ್ಕೆ ನೋವುಂಟು ಮಾಡಿದೆ. ಘಟನೆ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಗೊತ್ತಾಗಬೇಕಿದೆ. ಚಿತ್ರತಂಡದ ಪ್ರಮುಖರು ಶೀಘ್ರದಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:33 pm, Tue, 6 May 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ