‘ಕಾಂತಾರ: ಚಾಪ್ಟರ್​ 1’ ರಿಲೀಸ್ ದಿನಾಂಕ ಅನೌನ್ಸ್ ಮಾಡಿದ ರಿಷಬ್ ಶೆಟ್ಟಿ

ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್​ 1’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅದ್ದೂರಿಯಾಗಿ ಈ ಸಿನಿಮಾಗೆ ಶೂಟಿಂಗ್ ನಡೆಯುತ್ತಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಇಂದು (ನ.17) ರಿಷಬ್​ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ನೀಡಿದ್ದಾರೆ.

‘ಕಾಂತಾರ: ಚಾಪ್ಟರ್​ 1’ ರಿಲೀಸ್ ದಿನಾಂಕ ಅನೌನ್ಸ್ ಮಾಡಿದ ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ

Updated on: Nov 17, 2024 | 5:32 PM

ರಿಷಬ್ ಶೆಟ್ಟಿ ಮುಖ್ಯ ಪಾತ್ರದಲ್ಲಿ ನಟಿಸಿ, ನಿರ್ದೇಶನ ಮಾಡಿದ್ದ ‘ಕಾಂತಾರ’ ಸಿನಿಮಾ ದೇಶಾದ್ಯಂತ ಸೂಪರ್ ಹಿಟ್ ಆಗಿತ್ತು. ಆ ಯಶಸ್ಸಿನಿಂದ ಪ್ರೀಕ್ವೆಲ್​ ಘೋಷಿಸಲಾಗಿತ್ತು. ಅದಕ್ಕೆ ‘ಕಾಂತಾರ: ಚಾಪ್ಟರ್​ 1’ ಎಂದು ಶೀರ್ಷಿಕೆ ಇಡಲಾಗಿದ್ದು, ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ರಿಷಬ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾ ಮೂಲಕ ‘ಕಾಂತಾರ: ಚಾಪ್ಟರ್​ 1’ ಸಿನಿಮಾದ ಬಿಡುಗಡೆ ದಿನಾಂಕವನ್ನು ಅನೌನ್ಸ್ ಮಾಡಿದ್ದು, ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. 2025ರ ಅಕ್ಟೋಬರ್​ 2ರಂದು ‘ಕಾಂತಾರ: ಚಾಪ್ಟರ್​ 1’ ರಿಲೀಸ್ ಆಗಲಿದೆ.

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಪಕ ವಿಜಯ್ ಕಿರಗಂದೂರು ಅವರು ದೊಡ್ಡ ಮಟ್ಟದಲ್ಲಿ ‘ಕಾಂತಾರ: ಚಾಪ್ಟರ್​ 1’ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಘಟಾನುಘಟಿ ತಂತ್ರಜ್ಞರು ಈ ಸಿನಿಮಾದ ತೆರೆಹಿಂದೆ ಕೆಲಸ ಮಾಡುತ್ತಿದ್ದಾರೆ. ರಿಷಬ್​ ಶೆಟ್ಟಿ ಅವರು ಮುಖ್ಯ ಭೂಮಿಕೆ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಕುಂದಾಪುರದಲ್ಲಿ ಚಿತ್ರೀಕರಣ ಮಾಡಲಾಗುತ್ತಿದ್ದು, ಅದರ ಕೆಲಸಗಳಲ್ಲಿ ರಿಷಬ್ ಶೆಟ್ಟಿ ತುಂಬ ಬ್ಯುಸಿ ಆಗಿದ್ದಾರೆ.

ಬೃಹತ್ ಬಜೆಟ್​ನಲ್ಲಿ ‘ಕಾಂತಾರ: ಚಾಪ್ಟರ್​ 1’ ಸಿದ್ಧವಾಗುತ್ತಿದೆ. ಹಲವು ದಿನಗಳ ಕಾಲ ಶೂಟಿಂಗ್ ನಡೆಯಲಿದೆ. ಜೊತೆಗೆ ಪ್ರೀ-ಪ್ರೊಡಕ್ಷನ್ ಕೆಲಸಗಳಿಗೂ ಹೆಚ್ಚು ಸಮಯ ಹಿಡಿಯಲಿದೆ. ಈ ಎಲ್ಲ ಕಾರಣಗಳಿಂದ ಸಿನಿಮಾ ಬಿಡುಗಡೆಗೆ ಸಾಕಷ್ಟು ತಿಂಗಳು ಬೇಕಾಗುತ್ತದೆ. ಮುಂದಿನ ವರ್ಷ ಅಕ್ಟೋಬರ್​ 2ರಂದು ‘ಕಾಂತಾರ: ಚಾಪ್ಟರ್​ 1’ ಬಿಡುಗಡೆ ಮಾಡಲು ರಿಷಬ್​ ಶೆಟ್ಟಿ ಹಾಗೂ ಚಿತ್ರತಂಡ ನಿರ್ಧರಿಸಿದೆ.

ಇದನ್ನೂ ಓದಿ: ರಿಷಬ್ ತಂದೆ ಪಾತ್ರದಲ್ಲಿ ಮೋಹನ್​ಲಾಲ್; ‘ಕಾಂತಾರ: ಚಾಪ್ಟರ್ 1’ ಬಗ್ಗೆ ಹರಿದಾಡಿದೆ ಸುದ್ದಿ

‘ಕಾಂತಾರ’ ಸಿನಿಮಾವನ್ನು ಮೊದಲ ಕರ್ನಾಟಕದಲ್ಲಿ ಬಿಡುಗಡೆ ಮಾಡಲಾಗಿತ್ತು. ಬಳಿಕ ಬೇರೆ ರಾಜ್ಯಗಳಿಂದಲೂ ಬೇಡಿಕೆ ಬಂದಿದ್ದರಿಂದ ಬೇರೆ ಬೇರೆ ಭಾಷೆಗಳಿಗೆ ಡಬ್ ಮಾಡಿ ತೆರೆಕಾಣಿಸಲಾಗಿತ್ತು. ‘ಕಾಂತಾರ: ಚಾಪ್ಟರ್​ 1’ ಸಿನಿಮಾವನ್ನು ವಿಶ್ವಾದ್ಯಂತ ರಿಲೀಸ್ ಮಾಡಲಾಗುವುದು ಎಂದು ರಿಷಬ್ ಶೆಟ್ಟಿ ತಿಳಿಸಿದ್ದಾರೆ. ಹೆಚ್ಚಿನ ಅಪ್​ಡೇಟ್​ ತಿಳಿಯಲು ಅಭಿಮಾನಿಗಳು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us