‘ಕಾಂತಾರ’ ಚಿತ್ರದಲ್ಲಿ ನಟಿಸಿದ್ದ ಟಿ. ಪ್ರಭಾಕರ್ ಹೃದಯಾಘಾತದಿಂದ ನಿಧನ

Kantara Movie: ‘ಕಾಂತಾರ’ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ದೊಡ್ಡ ಬಜೆಟ್​ನಲ್ಲಿ ನಿರ್ಮಾಣ ಮಾಡಿತ್ತು. ಈ ಸಿನಿಮಾಗೆ ನಿರ್ದೇಶನ ಮಾಡಿರೋದು ರಿಷಬ್ ಶೆಟ್ಟಿ. ಅವರು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿಯೂ ಕಾಣಿಸಿಕೊಂಡಿದ್ದರು. ಸಿನಿಮಾ 2022ರಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು.ಈಗ ಚಿತ್ರದ ಕಲಾವಿದರೊಬ್ಬರು ನಿಧನ ಹೊಂದಿದ್ದಾರೆ.

‘ಕಾಂತಾರ’ ಚಿತ್ರದಲ್ಲಿ ನಟಿಸಿದ್ದ ಟಿ. ಪ್ರಭಾಕರ್ ಹೃದಯಾಘಾತದಿಂದ ನಿಧನ
ಕಾಂತಾರ

Updated on: Aug 08, 2025 | 2:31 PM

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ್ದ ‘ಕಾಂತಾರ’  (Kantara) ಸಿನಿಮಾ ರಿಲೀಸ್ ಆಗಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಚಿತ್ರದಲ್ಲಿ ನಟಿಸಿದ್ದ ಹಿರಿಯ ರಂಗಭೂಮಿ ಕಲಾವಿದ ಟಿ. ಪ್ರಭಾಕರ್ ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ. ಅವರಿಗೆ ಹೃದಯ ಸಂಬಂಧಿ ಕಾಯಿಲೆ ಇದ್ದಿದ್ದರಿಂದ ಹೃದಯಾಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ‘ಕಾಂತಾರ’ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ಸಣ್ಣ ಬಜೆಟ್​ನಲ್ಲಿ ನಿರ್ಮಾಣ ಮಾಡಿತ್ತು. ಈ ಸಿನಿಮಾಗೆ ನಿರ್ದೇಶನ ಮಾಡಿರೋದು ರಿಷಬ್ ಶೆಟ್ಟಿ. ಅವರು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿಯೂ ಕಾಣಿಸಿಕೊಂಡಿದ್ದರು. ಸಿನಿಮಾ 2022ರಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು.

ಟಿ. ಪ್ರಭಾಕರ್ ಕಲ್ಯಾಣಿ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಪೆರ್ಡೂರು ಮೂಲದವರು. ‘ಕಾಂತಾರ’ ಚಿತ್ರದಲ್ಲಿ ನ್ಯಾಯವಾದಿಯ ಪಾತ್ರವನ್ನು ಪ್ರಭಾಕರ್ ಅವರು ನಿರ್ವಹಿಸಿದ್ದರು. ಇದೊಂದು ಸಣ್ಣ ಪಾತ್ರವಾಗಿತ್ತು. ಇವರು ‘ಬ್ಯಾಂಕ್ ಆಪ್ ಬರೋಡಾ’ ಬ್ಯಾಂಕ್​ನಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು.

ಪ್ರಭಾಕರ್ ಅವರಿಗೆ ರಂಗಭೂಮಿ ಬಗ್ಗೆ ಸಾಕಷ್ಟು ಆಸಕ್ತಿ ಇತ್ತು. ಅವರು ರಂಗಭೂಮಿ ಜೊತೆ ನಿಕಟ ಸಂಪರ್ಕ ಹೊಂದಿದ್ದರು. ಅವರು ರಂಗಕಲಾವಿದರಾಗಿ ವಿವಿಧ ನಾಟಕಗಳಲ್ಲಿ ಅಭಿನಯಿಸಿದ್ದರು. ‘ಕಾಂತಾರ’ ಚಿತ್ರಕ್ಕಾಗಿ ಸುಮಾರು ಒಂದು ವರ್ಷ ಅವರು ಗಡ್ಡ ತೆಗೆದಿರಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ
ಮಾಲಿವುಡ್​ನ ಶ್ರೀಮಂತ ನಟ ಫಹಾದ್ ಫಾಸಿಲ್ ಆಸ್ತಿ ಎಷ್ಟು?
‘ಸು ಫ್ರಮ್ ಸೋ’ ಚಿತ್ರಕ್ಕೆ ಎರಡು ವಾರ; ವಿಶ್ವ ಬಾಕ್ಸ್ ಆಫೀಸ್​ ಲೆಕ್ಕ
‘ಹಣ ಕೊಟ್ಟು ಟ್ರೋಲ್ ಮಾಡಿಸಿದರು, ಬೆಳೆಯದಂತೆ ತಡೆದರು’; ರಶ್ಮಿಕಾ ಮಂದಣ್ಣ
‘ನೀವು ಗ್ಯಾಂಗ್ ಮಾಡಿ ಬ್ರದರ್’; ‘ಶೆಟ್ಟಿ ಮಾಫಿಯಾ’ ಎಂದವರಿಗೆ ರಾಜ್ ಉತ್ತರ

ಪ್ರಭಾಕರ್ ಕೆಲ ದಿನಗಳ ಹಿಂದೆ ಕುಸಿದು ಬಿದ್ದಿದ್ದರು. ಇಂದು ಮಲಗಿದವರು ಎದ್ದೇಳಲೇ ಇಲ್ಲ. ಮೂಲಗಳ ಪ್ರಕಾರ ಪ್ರಭಾಕರ್ ಅವರಿಗೆ ಹೃದಯದ ಸಮಸ್ಯೆ ಇತ್ತು. ಅವರ ಹಾರ್ಟ್​ಗೆ ಸ್ಟಂಟ್ ಕೂಡ ಹಾಕಲಾಗಿತ್ತು. ಪ್ರಭಾಕರ್ ಅವರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ರಿಷಬ್​ಗೆ ಜೊತೆಯಾದ ರುಕ್ಮಿಣಿ ವಸಂತ್; ಕನಕವತಿ ಪೋಸ್ಟರ್ ರಿಲೀಸ್

‘ಕಾಂತಾರ’ ಚಿತ್ರ 2022ರಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಸಿನಿಮಾ ಮೊದಲು ಕನ್ನಡದಲ್ಲಿ ರಿಲೀಸ್ ಆಗಿ ದೊಡ್ಡ ಯಶಸ್ಸು ಕಂಡಿತ್ತು. ಬುಕ್ ಮೈ ಶೋನಲ್ಲಿ ಈ ಚಿತ್ರಕ್ಕೆ ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ವೋಟ್ ಮಾಡಿದ್ದು, 9.9 ರೇಟಿಂಗ್ ಪಡೆದ ಚಿತ್ರ ಇದಾಗಿದೆ. ಈ ಸಿನಿಮಾ ದಾಖಲೆಯನ್ನು ಸರಿಗಟ್ಟಲು ಈವರೆಗೆ ಯಾರಿಂದಲೂ ಸಾಧ್ಯವಾಗಿಲ್ಲ.

‘ಕಾಂತಾರ: ಚಾಪ್ಟರ್ 1’:

‘ಕಾಂತಾರ’ ಸಿನಿಮಾ ಪ್ರೀಕ್ವೆಲ್ ಆಗಿ ‘ಕಾಂತಾರ: ಚಾಪ್ಟರ್ 1’ ಮೂಡಿ ಬರುತ್ತಿದೆ. ಅಕ್ಟೋಬರ್ 2ರಂದು ಚಿತ್ರ ತೆರೆಗೆ ಬರುತ್ತಿದೆ. ಈ ಸಿನಿಮಾದಲ್ಲಿ ನಟಿಸಿದ ಕೆಲ ಕಲಾವಿದರು ಈಗಾಗಲೇ ನಿಧನ ಹೊಂದಿದ್ದು ಸಾಕಷ್ಟು ಚರ್ಚೆಗೆ ಕಾರಣ ಆಗಿತ್ತು. ಈ ಸಿನಿಮಾದಲ್ಲಿ ರಿಷಬ್, ರುಕ್ಮಿಣಿ ವಸಂತ್ ನಟಿಸುತ್ತಿದ್ದಾರೆ. ಪಾತ್ರವರ್ಗದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರ ಬರಬೇಕಿದೆ.

(ವರದಿ: ಪ್ರಜ್ವಲ್ ಅಮಿನ್)

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:09 pm, Fri, 8 August 25