AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ‘ಕಾಂತಾರ’ ಟಿಕೆಟ್​ ಬುಕಿಂಗ್​ ಶುರು; ಪ್ರೀಮಿಯರ್​ ಶೋ ಧೂಳೆಬ್ಬಿಸುವುದು ಖಚಿತ

Kantara Ticket Booking: ರಿಷಬ್​ ಶೆಟ್ಟಿ ನಟನೆಯ ‘ಕಾಂತಾರ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ದೊಡ್ಡ ಪರದೆ ಮೇಲೆ ಈ ಚಿತ್ರವನ್ನು ನೋಡಿ ಆಸ್ವಾದಿಸಲು ಕಾದಿರುವ ಅಭಿಮಾನಿಗಳು ಮುಗಿಬಿದ್ದು ಟಿಕೆಟ್​ ಬುಕ್​ ಮಾಡುತ್ತಿದ್ದಾರೆ.

Kantara: ‘ಕಾಂತಾರ’ ಟಿಕೆಟ್​ ಬುಕಿಂಗ್​ ಶುರು; ಪ್ರೀಮಿಯರ್​ ಶೋ ಧೂಳೆಬ್ಬಿಸುವುದು ಖಚಿತ
ರಿಷಬ್ ಶೆಟ್ಟಿ
TV9 Web
| Edited By: |

Updated on: Sep 26, 2022 | 3:15 PM

Share

ಬಹುನಿರೀಕ್ಷಿತ ‘ಕಾಂತಾರ’ (Kantara) ಸಿನಿಮಾದ ಟಿಕೆಟ್​ ಬುಕಿಂಗ್​ ಆರಂಭ ಆಗಿದೆ. ಸೆಪ್ಟೆಂಬರ್​ 30ರಂದು ಈ ಚಿತ್ರ ರಿಲೀಸ್​ ಆಗಲಿದೆ. ಆದರೆ ಒಂದು ದಿನ ಮುನ್ನವೇ, ಅಂದರೆ ಗುರುವಾರ (ಸೆ.29) ಹಲವು ಕಡೆಗಳಲ್ಲಿ ಪ್ರೀಮಿಯರ್​ ಶೋ (Kantara premiere show) ಆಯೋಜನೆ ಮಾಡಲಾಗುತ್ತಿದೆ. ಅದರ ಟಿಕೆಟ್​ಗಳನ್ನು ಕೂಡ ಜನರು ಮುಗಿಬಿದ್ದು ಬುಕ್​ ಮಾಡುತ್ತಿದ್ದಾರೆ. ರಿಷಬ್​ ಶೆಟ್ಟಿ (Rishab Shetty) ಅಭಿಮಾನಿಗಳು ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ದೊಡ್ಡ ಮಟ್ಟದಲ್ಲಿ ‘ಕಾಂತಾರ’ ರಿಲೀಸ್​ ಆಗಲಿದೆ. ಈಗಾಗಲೇ ಟ್ರೇಲರ್​ ಧೂಳೆಬ್ಬಿಸಿದ್ದು, ಪೂರ್ತಿ ಸಿನಿಮಾವನ್ನು ಕಣ್ತುಂಬಿಕೊಳ್ಳುವ ಸಮಯ ಹತ್ತಿರ ಆಗಿದೆ. ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ ಮೂಲಕ ಈ ಚಿತ್ರ ನಿರ್ಮಾಣ ಆಗಿದೆ. ಆ ಕಾರಣದಿಂದಲೂ ಚಿತ್ರದ ಮೇಲೆ ಹೈಪ್​ ಹೆಚ್ಚಿದೆ.

‘ಕಾಂತಾರ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ ರಿಷಬ್​ ಶೆಟ್ಟಿ. ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಕಿಶೋರ್​ ಕೂಡ ಒಂದು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕರಾವಳಿ ಭಾಗದಲ್ಲಿ ಈ ಸಿನಿಮಾದ ಕಥೆ ಸಾಗುತ್ತದೆ. ಹಾಗಾಗಿ ಅಲ್ಲಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳ ದೃಶ್ಯವೂ ಚಿತ್ರದಲ್ಲಿ ಇದೆ. ಅದರ ಮೇಕಿಂಗ್​ ವಿಡಿಯೋವನ್ನು ಇತ್ತೀಚೆಗೆ ರಿಲೀಸ್​ ಮಾಡಲಾಗಿತ್ತು.

ಅರವಿಂದ್ ಕಶ್ಯಪ್​ ಛಾಯಾಗ್ರಹಣ, ಅಜನೀಶ್​ ಬಿ. ಲೋಕನಾಥ್​ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಇದು ರಾಷ್ಟ್ರ ಮಟ್ಟದಲ್ಲಿ ರಿಲೀಸ್​ ಆಗುತ್ತಿದ್ದರೂ ಕೂಡ ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿಲ್ಲ. ಕೇವಲ ಕನ್ನಡದಲ್ಲಿ ಮಾತ್ರ ಬಿಡುಗಡೆ ಮಾಡಲಾಗುತ್ತಿದೆ. ಗುರುವಾರ ನಡೆಯಲಿರುವ ಪ್ರೀಮಿಯರ್​ ಶೋನಲ್ಲಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕರೆ ಚಿತ್ರಕ್ಕೆ ಖಂಡಿತವಾಗಿಯೂ ದೊಡ್ಡ ಬೂಸ್ಟ್​ ಸಿಗಲಿದೆ.

ಇದನ್ನೂ ಓದಿ
Image
Kantara: ‘ಕಾಂತಾರ’ ಚಿತ್ರಕ್ಕೆ ಪುನೀತ್​ ಹೀರೋ ಆಗ್ಬೇಕಿತ್ತು; ಆ ಸ್ಥಾನಕ್ಕೆ ರಿಷಬ್ ಶೆಟ್ಟಿ ಬಂದಿದ್ದು ಹೇಗೆ? ಇಲ್ಲಿದೆ ಉತ್ತರ
Image
‘ಸಿಂಗಾರ ಸಿರಿಯೆ..’ ಹಾಡಿಗೆ ತಲೆದೂಗಿದ ಪ್ರೇಕ್ಷಕರು; ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಚಿತ್ರಕ್ಕೆ ಸಿಕ್ತು ಮೈಲೇಜ್
Image
ದಸರಾ ಹಬ್ಬಕ್ಕೆ ಬರಲಿದೆ ‘ಕಾಂತಾರ’; ರಿಷಬ್​ ಶೆಟ್ಟಿ ಚಿತ್ರದ ರಿಲೀಸ್​ ಡೇಟ್​ ಘೋಷಿಸಿದ ‘ಹೊಂಬಾಳೆ ಫಿಲ್ಮ್ಸ್​’

ರಿಷಬ್​ ಶೆಟ್ಟಿ ನಿರ್ದೇಶನದ ಸಿನಿಮಾ ಎಂದರೆ ಅದರಲ್ಲಿ ಏನಾದರೂ ವಿಶೇಷತೆ ಇದ್ದೇ ಇರುತ್ತದೆ ಎಂಬುದು ಪ್ರೇಕ್ಷಕರ ನಂಬಿಕೆ. ಅಷ್ಟರಮಟ್ಟಿಗೆ ಭರವಸೆ ಮೂಡಿಸುವಲ್ಲಿ ರಿಷಬ್​ ಯಶಸ್ವಿ ಆಗಿದ್ದಾರೆ. ಅಚ್ಚರಿ ಎಂದರೆ, ಈ ಸಿನಿಮಾದ ಕಥೆ ಪುನೀತ್​ ರಾಜ್​ಕುಮಾರ್​ ಅವರಿಗೂ ಇಷ್ಟ ಆಗಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಅವರೇ ಹೀರೋ ಆಗಿ ನಟಿಸಬೇಕಿತ್ತು. ಆದರೆ ಡೇಟ್ಸ್​ ಹೊಂದಿಕೆ ಆಗದ ಕಾರಣ ಪುನೀತ್​ ಬದಲು ರಿಷಬ್​ ಶೆಟ್ಟಿ ಅವರು ಹೀರೋ ಸ್ಥಾನಕ್ಕೆ ಬಂದರು. ಈ ವಿಚಾರವನ್ನು ಇತ್ತೀಚೆಗೆ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್​ ಗೌಡ ಬಹಿರಂಗ ಪಡಿಸಿದರು.

ತಾಂತ್ರಿಕವಾಗಿ ‘ಕಾಂತಾರ’ ಚಿತ್ರ ತುಂಬ ಶ್ರೀಮಂತವಾಗಿ ಮೂಡಿಬಂದಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ. ದೊಡ್ಡ ಪರದೆ ಮೇಲೆ ಈ ಚಿತ್ರವನ್ನು ನೋಡಿ ಆಸ್ವಾದಿಸಲು ಕಾದಿರುವ ಅಭಿಮಾನಿಗಳು ಮುಗಿಬಿದ್ದು ಟಿಕೆಟ್​ ಬುಕ್​ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ