Kantara 50 Days: ಯಶಸ್ವಿಯಾಗಿ 50 ದಿನ ಪೂರೈಸಿದ ‘ಕಾಂತಾರ’; ಇನ್ನೂ ನಿಂತಿಲ್ಲ ಅಬ್ಬರ

Rishab Shetty | Hombale Films: ಕರ್ನಾಟಕದ 300ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಹಾಗೂ ವಿದೇಶದ ಹಲವು ಕಡೆಗಳಲ್ಲಿ ‘ಕಾಂತಾರ’ ಚಿತ್ರ 50 ದಿನಗಳನ್ನು ಪೂರೈಸಿದೆ. 100ನೇ ದಿನದತ್ತ ದಾಪುಗಾಲಿಟ್ಟಿದೆ.

Kantara 50 Days: ಯಶಸ್ವಿಯಾಗಿ 50 ದಿನ ಪೂರೈಸಿದ ‘ಕಾಂತಾರ’; ಇನ್ನೂ ನಿಂತಿಲ್ಲ ಅಬ್ಬರ
ಕಾಂತಾರ
Follow us
TV9 Web
| Updated By: ಮದನ್​ ಕುಮಾರ್​

Updated on: Nov 18, 2022 | 1:25 PM

ಕನ್ನಡದ ‘ಕಾಂತಾರ’ (Kantara Movie) ಸಿನಿಮಾ ಮಾಡಿರುವ ದಾಖಲೆಗಳು ಒಂದೆರಡಲ್ಲ. ಈ ಚಿತ್ರದಿಂದ ಸ್ಯಾಂಡಲ್​ವುಡ್​ ಮೇಲೆ ಪರಭಾಷೆ ಮಂದಿಗೆ ಇದ್ದ ಭರವಸೆ ಜಾಸ್ತಿ ಆಗಿದೆ. ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರು ದೇಶಾದ್ಯಂತ ಫೇಮಸ್​ ಆಗಿದ್ದಾರೆ. ಬಂಡವಾಳ ಹೂಡಿದ ‘ಹೊಂಬಾಳೆ ಫಿಲ್ಮ್ಸ್​’ (Hombale Films) ಸಂಸ್ಥೆ ಸಖತ್​ ಲಾಭ ಮಾಡಿದೆ. ಸಿನಿಮಾಗಳು ರಿಲೀಸ್​ ಆಗಿ ಮೂರು-ನಾಲ್ಕು ದಿನಕ್ಕೆ ಬಿಸ್ನೆಸ್​ ಮುಗಿಸಿ ಮನೆಗೆ ಹೋಗುವ ಈ ಕಾಲದಲ್ಲಿ ‘ಕಾಂತಾರ’ ಚಿತ್ರ ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿದೆ ಎಂಬುದು ವಿಶೇಷ. ಗಲ್ಲಾಪೆಟ್ಟಿಗೆಯಲ್ಲಿ 350 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿರುವುದು ಈ ಚಿತ್ರದ ಹೆಚ್ಚುಗಾರಿಗೆ. ‘ಕಾಂತಾರ ಯಶಸ್ಸಿನಿಂದ ರಿಷಬ್​ ಶೆಟ್ಟಿ (Rishab Shetty) ಅವರ ಡಿಮ್ಯಾಂಡ್​ ಹೆಚ್ಚಾಗಿದೆ.

ಸೆ.30ರಂದು ಕನ್ನಡದಲ್ಲಿ ಬಿಡುಗಡೆಯಾದ ‘ಕಾಂತಾರ’ ಚಿತ್ರವು ರಾಜ್ಯದ 300ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಹಾಗೂ ವಿದೇಶದ ಹಲವು ಚಿತ್ರಮಂದಿರಗಳಲ್ಲಿ 50 ದಿನಗಳನ್ನು ಪೂರೈಸಿದೆ. 100ನೇ ದಿನದತ್ತ ದಾಪುಗಾಲಿಟ್ಟಿದೆ. ಬರೀ ಕನ್ನಡವಷ್ಟೇ ಅಲ್ಲದೇ ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂಗೆ ಡಬ್ ಆಗಿರುವ ಈ ಚಿತ್ರ ಅಲ್ಲಿಯೂ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದ್ದು, ಸದ್ಯದಲ್ಲೇ ಪರಭಾಷೆಯಲ್ಲೂ 50 ದಿನಗಳನ್ನು ಪೂರ್ಣಗೊಳಿಸಲಿದೆ.

ಇದನ್ನೂ ಓದಿ
Image
Dhoomam: ‘ಹೊಂಬಾಳೆ ಫಿಲ್ಮ್ಸ್​’ ಹೊಸ ಚಿತ್ರ ‘ಧೂಮಂ’; ಫಹಾದ್​ ಫಾಸಿಲ್​-ಪವನ್​ ಕುಮಾರ್​ ಚಿತ್ರದ ಶೀರ್ಷಿಕೆ ಬಹಿರಂಗ
Image
Prabhas: ‘ಸಲಾರ್​’ ನೋಡಲು ಇನ್ನೂ 1 ವರ್ಷ ಕಾಯಬೇಕು; ರಿಲೀಸ್​ ಡೇಟ್​ ತಿಳಿಸಿದ ‘ಹೊಂಬಾಳೆ ಫಿಲ್ಮ್ಸ್​’
Image
KGF Chapter 2: 100 ದಿನ ಪೂರೈಸಿದ ‘ಕೆಜಿಎಫ್​: ಚಾಪ್ಟರ್​ 2’; ಪ್ರೇಕ್ಷಕರಿಗೆ ‘ಹೊಂಬಾಳೆ ಫಿಲ್ಮ್ಸ್​’ ಧನ್ಯವಾದ
Image
‘ಕೆಜಿಎಫ್​ 3’ ಸದ್ಯಕ್ಕಿಲ್ಲ: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್​ನ ಕಾರ್ತಿಕ್​ ಗೌಡ; ಅಂತೆ-ಕಂತೆಗಳಿಗೆ ಬ್ರೇಕ್​

‘ಕೆಜಿಎಫ್​’ ರೀತಿಯ ಅದ್ದೂರಿ ಸಿನಿಮಾವನ್ನು ನಿರ್ಮಾಣ ಮಾಡಿದ ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಿಂದ ವಿಶೇಷ ಚಿತ್ರಗಳು ಮೂಡಿಬರುತ್ತಿವೆ. ಕೇವಲ ಅದ್ದೂರಿತನಕ್ಕೆ ಮಹತ್ವ ನೀಡಿದೇ ವಿಶೇಷ ಕಥಾಹಂದರವನ್ನೂ ಗಮನದಲ್ಲಿ ಇಟ್ಟುಕೊಂಡು ನಿರ್ಮಾಪಕ ವಿಜಯ್​ ಕಿರಗಂದೂರು ಅವರು ಬಂಡವಾಳ ಹೂಡುತ್ತಿದ್ದಾರೆ. ‘ಕಾಂತಾರ’ ಚಿತ್ರದ ಗೆಲುವಿನಿಂದ ಈ ಸಂಸ್ಥೆಯ ಖ್ಯಾತಿ ಇನ್ನಷ್ಟು ಹೆಚ್ಚಾಗಿದೆ.

ಐದು ಪ್ರಮುಖ ಭಾಷೆಗಳ ಸಿನಿಮಾಗಳನ್ನು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ನಿರ್ಮಿಸುತ್ತಿದೆ. ಜಗ್ಗೇಶ್ ಅಭಿನಯದ ‘ರಾಘವೇಂದ್ರ ಸ್ಟೋರ್ಸ್’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಶ್ರೀಮುರಳಿ ನಟನೆಯ ‘ಬಘೀರ’ ಚಿತ್ರಕ್ಕೆ ಶೂಟಿಂಗ್ ನಡೆಯುತ್ತಿದೆ. ರಕ್ಷಿತ್ ಅಭಿನಯದ ಮತ್ತು ನಿರ್ದೇಶನದ ‘ರಿಚರ್ಡ್ ಆಂಟೋನಿ’ ಮತ್ತು ಯುವ ರಾಜ್​ಕುಮಾರ್​​ ಅಭಿನಯದ ಹೊಸ ಸಿನಿಮಾ ಸದ್ಯದಲ್ಲೇ ಶುರುವಾಗಲಿವೆ. ಇವಿಷ್ಟು ಸದ್ಯಕ್ಕಿರುವ ಕನ್ನಡ ಚಿತ್ರಗಳು.

ಪರಭಾಷೆಯ ಸಿನಿಮಾ ಬಗ್ಗೆ ಹೇಳೋದಾದರೆ ತೆಲುಗಿನಲ್ಲಿ ಪ್ರಭಾಸ್ ಅಭಿನಯದ ‘ಸಲಾರ್’ ಚಿತ್ರೀಕರಣ ನಡೆಯುತ್ತಿದೆ. ತಮಿಳಿನಲ್ಲಿ 2 ಚಿತ್ರಗಳನ್ನು ‘ಹೊಂಬಾಳೆ ಫಿಲ್ಮ್ಸ್​’ ನಿರ್ಮಿಸುತ್ತಿದೆ. ಅದರಲ್ಲಿ ಒಂದು ಚಿತ್ರಕ್ಕೆ ‘ಸೂರರೈ ಪೊಟ್ರು’ ಖ್ಯಾತಿಯ ಸುಧಾ ಕೊಂಗರಾ ನಿರ್ದೇಶನ ಮಾಡುತ್ತಿದ್ದಾರೆ. ಇನ್ನೊಂದರ ಘೋಷಣೆ ಶೀಘ್ರದಲ್ಲೇ ಆಗಲಿದೆ. ಮಲಯಾಳಂನಲ್ಲಿ 2 ಚಿತ್ರ ನಿರ್ಮಾಣ ಆಗುತ್ತಿವೆ. ಫಹಾದ್ ಫಾಸಿಲ್ ಅಭಿನಯದ ‘ಧೂಮಂ’ ಚಿತ್ರಕ್ಕೆ ಶೂಟಿಂಗ್​ ಆರಂಭ ಆಗಿದೆ. ಪೃಥ್ವಿರಾಜ್ ಸುಕುಮಾರನ್ ನಟಿಸಿ-ನಿರ್ದೇಶಿಸಲಿರುವ ‘ಟೈಸನ್’ ಚಿತ್ರವು ಮುಂದಿನ ವರ್ಷ ಪ್ರಾರಂಭವಾಗಲಿದೆ. ಹಿಂದಿ ಚಿತ್ರದ ಬಗ್ಗೆ ಶೀಘ್ರದಲ್ಲೇ ಮಾಹಿತಿ ಹೊರಬೀಳಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ