Kantara: ಹಿಂದಿಯಲ್ಲೂ ಅಬ್ಬರಿಸಲಿದೆ ‘ಕಾಂತಾರ’; ಅ.14ರಿಂದ 2500 ಪರದೆಗಳಲ್ಲಿ ರಿಲೀಸ್​

Kantara Hindi Version: ‘ಕಾಂತಾರ’ ಚಿತ್ರಕ್ಕೆ ಎಲ್ಲ ಕಡೆಗಳಿಂದ ಉತ್ತಮ ವಿಮರ್ಶೆ ಸಿಕ್ಕಿದ್ದರಿಂದ ಉತ್ತರ ಭಾರತದಲ್ಲೂ ಈ ಚಿತ್ರಕ್ಕೆ ಡಿಮ್ಯಾಂಡ್​ ಸೃಷ್ಟಿ ಆಗಿದೆ. ಹಾಗಾಗಿ ಹಿಂದಿಗೆ ಡಬ್​ ಮಾಡಿ ಬಿಡುಗಡೆ ಮಾಡಲಾಗುತ್ತಿದೆ.

Kantara: ಹಿಂದಿಯಲ್ಲೂ ಅಬ್ಬರಿಸಲಿದೆ ‘ಕಾಂತಾರ’; ಅ.14ರಿಂದ 2500 ಪರದೆಗಳಲ್ಲಿ ರಿಲೀಸ್​
ಕಾಂತಾರ ಸಿನಿಮಾ ಪೋಸ್ಟರ್​
Follow us
TV9 Web
| Updated By: ಮದನ್​ ಕುಮಾರ್​

Updated on:Oct 12, 2022 | 12:31 PM

ಕನ್ನಡದಲ್ಲಿ ‘ಕಾಂತಾರ’ (Kantara) ಸಿನಿಮಾ ಹೊಸ ಸೆನ್ಸೇಷನ್​ ಸೃಷ್ಟಿ ಮಾಡಿದೆ. ಪ್ರೇಕ್ಷಕರು ಈ ಚಿತ್ರಕ್ಕೆ ಫುಲ್​ ಮಾರ್ಕ್ಸ್​ ನೀಡಿದ್ದಾರೆ. ಕರಾವಳಿಯ ಭೂತಕೋಲ, ದೈವಾರಾಧನೆ ಹಿನ್ನೆಲೆಯಲ್ಲಿ ರಿಷಬ್​ ಶೆಟ್ಟಿ (Rishab Shetty) ಹೇಳಿರುವ ಕಥೆಗೆ ಜನರು ಫಿದಾ ಆಗಿದ್ದಾರೆ. ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡ ಈ ಚಿತ್ರದಿಂದ ನಿರ್ಮಾಪಕರಿಗೆ ಭರ್ಜರಿ ಲಾಭ ಆಗಿದೆ. ಈ ಮೂಲಕ ‘ಹೊಂಬಾಳೆ ಫಿಲ್ಮ್ಸ್​’ ತೆಕ್ಕೆಗೆ ಮತ್ತೊಂದು ಸೂಪರ್​ ಹಿಟ್​ ಸಿನಿಮಾ ಸೇರ್ಪಡೆ ಆದಂತೆ ಆಗಿದೆ. ಕನ್ನಡದಲ್ಲಿ ಧೂಳೆಬ್ಬಿಸಿದ ‘ಕಾಂತಾರ’​ ಈಗ ಹಿಂದಿ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ. ಹೌದು, ಹಿಂದಿಗೆ ಈ ಚಿತ್ರವನ್ನು ಡಬ್​ ಮಾಡಲಾಗಿದ್ದು, ಅಕ್ಟೋಬರ್​ 14ರಂದು ರಿಲೀಸ್​ ಆಗಲಿದೆ. ಬರೋಬ್ಬರಿ 2500 ಪರದೆಗಳಲ್ಲಿ ಬಿಡುಗಡೆ ಮಾಡಲು ‘ಹೊಂಬಾಳೆ ಫಿಲ್ಮ್ಸ್​’ (Hombale Films) ಸಂಸ್ಥೆ ಸಕಲ ಸಿದ್ಧತೆ ಮಾಡಿಕೊಂಡಿದೆ.

‘ಕಾಂತಾರ’ ಸಿನಿಮಾದಿಂದ ರಿಷಬ್​ ಶೆಟ್ಟಿ ಅವರ ಚಾರ್ಮ್​ ಹೆಚ್ಚಿದೆ. ಈ ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸುವುದರ ಜೊತೆಗೆ ನಿರ್ದೇಶಕವನ್ನೂ ಅವರೇ ಮಾಡಿದ್ದಾರೆ. ಸೆಪ್ಟೆಂಬರ್​ 30ರಂದು ಕೇವಲ ಕನ್ನಡದಲ್ಲಿ ಮಾತ್ರ ಈ ಚಿತ್ರವನ್ನು ರಿಲೀಸ್​ ಮಾಡಲಾಯಿತು. ಪರಭಾಷೆ ಮಂದಿ ಕೂಡ ಕನ್ನಡ ವರ್ಷನ್​ ನೋಡಿ ಮೆಚ್ಚುಗೆ ಸೂಚಿಸಿದರು. ಎಲ್ಲ ಕಡೆಗಳಿಂದ ಉತ್ತಮ ವಿಮರ್ಶೆ ಸಿಕ್ಕಿದ್ದರಿಂದ ಉತ್ತರ ಭಾರತದಲ್ಲೂ ಈ ಚಿತ್ರಕ್ಕೆ ಡಿಮ್ಯಾಂಡ್​ ಸೃಷ್ಟಿ ಆಗಿದೆ. ಹಾಗಾಗಿ ಹಿಂದಿಗೆ ಡಬ್​ ಮಾಡಿ ಬಿಡುಗಡೆ ಮಾಡಲಾಗುತ್ತಿದೆ.

ಇದನ್ನೂ ಓದಿ
Image
Sapthami Gowda: ಜನರ ಮಧ್ಯೆ ‘ಕಾಂತಾರ’ ನಾಯಕಿ ಸಪ್ತಮಿ ಗೌಡ ಬಿಂದಾಸ್​ ಡ್ಯಾನ್ಸ್​; ಇಲ್ಲಿದೆ ವಿಡಿಯೋ
Image
Kantara Review: ಹಲವು ಸಂಘರ್ಷಗಳ ‘ಕಾಂತಾರ’; ರಿಷಬ್​ ಶೆಟ್ಟಿಯ ಹೊಸ ಅವತಾರ
Image
Kantara Review: ‘ಕಾಂತಾರ’ ವಿಮರ್ಶೆ ಮಾಡಿದ ರಮ್ಯಾ; ರಿಷಬ್​ ಶೆಟ್ಟಿ ಚಿತ್ರದ ಬಗ್ಗೆ ‘ಮೋಹಕ ತಾರೆ’ ಹೇಳಿದ್ದೇನು?
Image
Kantara: ರಿಷಬ್​ ಶೆಟ್ಟಿ ಕಂಬಳದ ಕೋಣ ಓಡಿಸುವುದು ಕಲಿತಿದ್ದು ಹೇಗೆ? ಇಲ್ಲಿದೆ ಮೇಕಿಂಗ್​ ವಿಡಿಯೋ

ವಿಜಯ್​ ಕಿರಗಂದೂರು ಅವರು ‘ಕಾಂತಾರ’ ಚಿತ್ರವನ್ನು ನಿರ್ಮಿಸಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಮೂಲಕ ಅವರು ಉತ್ತರ ಭಾರತದ ಪ್ರೇಕ್ಷಕರನ್ನು ಸೆಳೆದುಕೊಂಡಿದ್ದರು. ಈಗ ‘ಕಾಂತಾರ’ ಸಿನಿಮಾ ಯಾವ ರೀತಿ ಮೋಡಿ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ. ಅಚ್ಚರಿ ಏನೆಂದರೆ, ಈ ಸಿನಿಮಾ ಹಿಂದಿಗೆ ಡಬ್​ ಆಗುವುದಕ್ಕೂ ಮುನ್ನ ಮುಂಬೈನ ಅನೇಕ ಚಿತ್ರಮಂದಿರಗಳಲ್ಲಿ ಕನ್ನಡ ವರ್ಷನ್​ ಬಿಡುಗಡೆ ಮಾಡಲಾಗಿತ್ತು. ಅಲ್ಲಿನ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿದ್ದು ವಿಶೇಷ.

ಈ ಸಿನಿಮಾದಲ್ಲಿ ರಿಷಬ್​ ಶೆಟ್ಟಿ ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಅಚ್ಯುತ್​ ಕುಮಾರ್​, ಪ್ರಮೋದ್​ ಶೆಟ್ಟಿ, ಕಿಶೋರ್ ಮುಂತಾದವರು ಮುಖ್ಯ ಪಾತ್ರಗಳನ್ನು ನಿಭಾಯಿಸಿದ್ದಾರೆ. ಅಜನೀಶ್​ ಬಿ. ಲೋಕನಾಥ್​ ಅವರ ಸಂಗೀತ, ಅರವಿಂದ್​ ಎಸ್​. ಕಶ್ಯಪ್​ ಅವರ ಛಾಯಾಗ್ರಹಣಕ್ಕೂ ಸಖತ್​ ಮೆಚ್ಚುಗೆ ಸಿಕ್ಕಿದೆ. ಇತ್ತೀಚೆಗೆ ‘ಕಾಂತಾರ’ ಸಿನಿಮಾದ ಹಿಂದಿ ಟ್ರೇಲರ್​ ಬಿಡುಗಡೆ ಮಾಡಲಾಯಿತು. ಯೂಟ್ಯೂಬ್​ನಲ್ಲಿ ಮೂರು ದಿನಕ್ಕೆ 30 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಆ ಮೂಲಕ ಸಿನಿಮಾ ಮೇಲೆ ಹಿಂದಿ ಪ್ರೇಕ್ಷಕರಿಗೆ ಎಷ್ಟು ನಿರೀಕ್ಷೆ ಎಂಬುದು ಗೊತ್ತಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:31 pm, Wed, 12 October 22

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ