ಹೊಸ ಪ್ರಯತ್ನಕ್ಕೆ ಕೈ ಹಾಕಿದ ರಿಷಬ್ ಶೆಟ್ಟಿ; ಕನಸು ಹುಟ್ಟಿದ ಊರಿನ ಹೆಸರಿಟ್ಟ ನಟ

Kerady Studios: 'ಕೆರಾಡಿ ಸ್ಟುಡಿಯೋಸ್' ಎಂಬ ವೇದಿಕೆಯ ಮೂಲಕ ಚಿತ್ರಗಳ ಮಾರ್ಕೆಟಿಂಗ್, ಪ್ರಚಾರ ಮತ್ತು ಇತರ ಸೇವೆಗಳನ್ನು ಪ್ರಾರಂಭಿಸದ್ದೇವೆ. ಇದು ಉತ್ತಮ ಚಿತ್ರಗಳು ಮತ್ತು ಪ್ರೇಕ್ಷಕರ ನಡುವೆ ಸೇತುವೆ ಆಗಬೇಕೆಂಬುದೇ ನಮ್ಮ ಆಶಯ’ ಎಂದು ಪತ್ರ ಆರಂಭಿಸಿದ್ದಾರೆ ರಿಷಬ್

ಹೊಸ ಪ್ರಯತ್ನಕ್ಕೆ ಕೈ ಹಾಕಿದ ರಿಷಬ್ ಶೆಟ್ಟಿ; ಕನಸು ಹುಟ್ಟಿದ ಊರಿನ ಹೆಸರಿಟ್ಟ ನಟ
ರಿಷಬ್ ಶೆಟ್ಟಿ
Follow us
ರಾಜೇಶ್ ದುಗ್ಗುಮನೆ
|

Updated on:May 25, 2023 | 10:13 AM

ಸೋಶಿಯಲ್ ಮೀಡಿಯಾದಲ್ಲಿ ರಿಷಬ್ ಶೆಟ್ಟಿ (Rishab Shetty) ಹೊಸ ಘೋಷಣೆ ಮಾಡಿದ್ದಾರೆ.  ‘ಒಂದು ಸಿನಿಮಾದ ಗೆಲುವಿಗೆ ಅದರ ನಿರ್ಮಾಣದಷ್ಟೇ, ಪ್ರಚಾರದ ಅಗತ್ಯವೂ ಇದೆ. ಕಳೆದ ಕೆಲವು ವರ್ಷಗಳಲ್ಲಿ ಸಿನಿಮಾಗಳನ್ನು ನಿರ್ಮಾಣ ಮಾಡಿ ಅದನ್ನು ಸೂಕ್ತ ಪ್ರಚಾರದ ಮೂಲಕ ಜನರಿಗೆ ತಲುಪಿಸಿದ ಅನುಭವದೊಂದಿಗೆ ಇಂದು ನಮ್ಮ ತಂಡ ಹೊಸ ಹೆಜ್ಜೆ ಇರಿಸುತ್ತಿದೆ. ‘ಕೆರಾಡಿ ಸ್ಟುಡಿಯೋಸ್’ (Kerady Studios) ಎಂಬ ವೇದಿಕೆಯ ಮೂಲಕ ಚಿತ್ರಗಳ ಮಾರ್ಕೆಟಿಂಗ್, ಪ್ರಚಾರ ಮತ್ತು ಇತರ ಸೇವೆಗಳನ್ನು ಪ್ರಾರಂಭಿಸಿದ್ದೇವೆ. ಇದು ಉತ್ತಮ ಚಿತ್ರಗಳು ಮತ್ತು ಪ್ರೇಕ್ಷಕರ ನಡುವೆ ಸೇತುವೆ ಆಗಬೇಕೆಂಬುದೇ ನಮ್ಮ ಆಶಯ’ ಎಂದು ಪತ್ರ ಆರಂಭಿಸಿದ್ದಾರೆ ರಿಷಬ್.

‘ಅಂದ ಹಾಗೆ ಕೆರಾಡಿ.. ನಾನು ಹುಟ್ಟಿ ಬೆಳೆದ, ನನ್ನ ಹೃದಯಕ್ಕೆ ಬಹಳ ಹತ್ತಿರವಾದ ಊರು. ಎಲ್ಲಕ್ಕಿಂತಲೂ ಹೆಚ್ಚಾಗಿ ನನ್ನೊಳಗೆ ಸಿನಿಮಾದ ಕನಸು ಹುಟ್ಟಿದ್ದು ಇಲ್ಲೇ! ಈ ಪ್ರಯತ್ನವನ್ನು ನನ್ನ ಕೆರಾಡಿಗೆ ಅರ್ಪಿಸಿ, ಚಿತ್ರರಂಗಕ್ಕೆ ನಮ್ಮ ಅಳಿಲು ಸೇವೆಯನ್ನು ಮುಂದುವರೆಸಲಿದ್ದೇವೆ. ನಿಮ್ಮ ಸಹಕಾರವಿರಲಿ’ ಎಂದು ರಿಷಬ್ ಕೋರಿದ್ದಾರೆ.

ರಿಷಬ್ ಶೆಟ್ಟಿ ಅವರು ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದಾರೆ. ಮೂರೂ ಕ್ಷೇತ್ರದಲ್ಲಿ ಅವರು ಯಶಸ್ಸು ಕಂಡಿದ್ದಾರೆ. ಈಗ ಅವರು ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಅವರು ಸಿನಿಮಾಗಳ ಪ್ರಚಾರ ಹಾಗೂ ಅದಕ್ಕೆ ಸಂಬಂಧಿಸಿದ ಇತರ ಸೇವೆಗಳನ್ನು ನೀಡಲು ಹೊಸ ವೇದಿಕೆ ಕಟ್ಟಿದ್ದಾರೆ. ಈ ವಿಚಾರವನ್ನು ರಿಷಬ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ಅವರ ಹೊಸ ಪ್ರಯತ್ನಕ್ಕೆ ಎಲ್ಲ ಕಡೆಗಳಿಂದ ಶುಭಾಶಯಗಳು ಬರುತ್ತಿವೆ. ಅವರು ಈ ಕ್ಷೇತ್ರದಲ್ಲೂ ಯಶಸ್ಸು ಕಾಣಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

ಇದನ್ನೂ ಓದಿ: ‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿಗೆ ಹೆಚ್ಚಾಯ್ತು ದೇವರ ಮೇಲಿನ ಭಕ್ತಿ

ರಿಷಬ್ ಶೆಟ್ಟಿ ನಟನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು. ಆರಂಭದಲ್ಲಿ ಪೋಷಕ ಪಾತ್ರ ಮಾಡುತ್ತಿದ್ದ ಅವರು ನಂತರ ಹೀರೋ ಆದರು. ‘ರಿಕ್ಕಿ’ ಚಿತ್ರದಿಂದ ನಿರ್ದೇಶಕರಾದರು. ‘ಕಿರಿಕ್ ಪಾರ್ಟಿ’ ಅವರಿಗೆ ದೊಡ್ಡ ಯಶಸ್ಸು ತಂದುಕೊಟ್ಟಿತು. 2018ರಲ್ಲಿ ರಿಲೀಸ್ ಆದ ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರದ ಮೂಲಕ ನಿರ್ಮಾಪಕನಾಗಿ ದೊಡ್ಡ ಯಶಸ್ಸು ಕಂಡರು. ಇತ್ತೀಚೆಗೆ ರಿಲೀಸ್ ಆದ ‘ಕಾಂತಾರ’ ಸಿನಿಮಾ ರಿಷಬ್ ಖ್ಯಾತಿಯನ್ನು ಹೆಚ್ಚಿಸಿದೆ. ಅವರು ದೇಶಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಸಿನಿಮಾ ಪ್ರಚಾರದಲ್ಲೂ ತೊಡಗಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:49 am, Thu, 25 May 23

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ