AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಸಿನಿಮಾ ‘ಜೈ ಹನುಮಾನ್’ ಒಪ್ಪಿಕೊಂಡಿದ್ದು ಏಕೆ? ರಿಷಬ್ ಉತ್ತರ

Rishab Shetty movies: ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಇದೀಗ ಅವರು ಸಿನಿಮಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಈ ವೇಳೆ ‘ಕಾಂತಾರ’ ಬಳಿಕ ಅವರು ನಟಿಸುತ್ತಿರುವ ಹೊಸ ಸಿನಿಮಾದ ಬಗ್ಗೆ ಮಾತನಾಡಿದ್ದು, ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು ಎಂದು ವಿವರಿಸಿದ್ದಾರೆ.

ತೆಲುಗು ಸಿನಿಮಾ ‘ಜೈ ಹನುಮಾನ್’ ಒಪ್ಪಿಕೊಂಡಿದ್ದು ಏಕೆ? ರಿಷಬ್ ಉತ್ತರ
Rishab Shetty Kantara
ಮಂಜುನಾಥ ಸಿ.
|

Updated on: Sep 26, 2025 | 1:19 PM

Share

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇವೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕಾಗಿ ಬರೋಬ್ಬರಿ ಹಲವು ವರ್ಷಗಳ ಕಾಲ ಕಷ್ಟಪಟ್ಟಿರುವುದಾಗಿ ರಿಷಬ್ ಶೆಟ್ಟಿ ಹೇಳಿಕೊಂಡಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಪ್ರಚಾರದಲ್ಲಿರುವ ರಿಷಬ್ ಶೆಟ್ಟಿ, ಸಂದರ್ಶನವೊಂದರ ವೇಳೆ ತಮ್ಮ ಮುಂದಿನ ಸಿನಿಮಾ ‘ಜೈ ಹನುಮಾನ್’ ಬಗ್ಗೆಯೂ ಮಾತನಾಡಿದ್ದಾರೆ. ಆ ಸಿನಿಮಾ ಒಪ್ಪಿಕೊಳ್ಳಲು ಕಾರಣ ಏನೆಂದು ವಿವರಿಸಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಮುಗಿಯುವ ವರೆಗೆ ಬೇರೆ ಯಾವ ಸಿನಿಮಾವನ್ನೂ ಸಹ ಒಪ್ಪಿಕೊಳ್ಳಬಾರದು ಎಂದು ರಿಷಬ್ ಶೆಟ್ಟಿ ನಿರ್ಧರಿಸಿದ್ದರಂತೆ. ಆದರೆ ಪ್ರಶಾಂತ್ ವರ್ಷ ಬಂದು ‘ಜೈ ಹನುಮಾನ್’ ಸಿನಿಮಾದ ಕತೆ ಹೇಳಿದಾಗ ಸಿನಿಮಾ ಒಪ್ಪಿಕೊಳ್ಳದೆ ಇರಲಾಗಲಿಲ್ಲವಂತೆ. ‘ಪ್ರಶಾಂತ್ ವರ್ಮಾ ಅದ್ಭುತವಾಗಿ ಕತೆ ಮಾಡಿಕೊಂಡಿದ್ದಾರೆ. ಅವರು ಹೇಳಿದ ಕತೆ ಕೇಳಿದ ಬಳಿಕ ನನಗೆ ನೋ ಹೇಳಲು ಆಗಲೇ ಇಲ್ಲ’ ಎಂದಿದ್ದಾರೆ ರಿಷಬ್ ಶೆಟ್ಟಿ.

‘ಪ್ರಶಾಂತ್ ವರ್ಮಾ ಅದ್ಭುತವಾದ ಕತೆ ಮಾಡಿದ್ದಾರೆ. ನಾನು ಸಿನಿಮಾ ಒಪ್ಪಿದ ಬಳಿಕ ಫೋಟೊಶೂಟ್ ಮಾಡಿಸಿದೆವು. ಈಗ ಅವರು ಪ್ರೀ ಪ್ರೊಡಕ್ಷನ್​​​ನಲ್ಲಿ ತೊಡಗಿಕೊಂಡಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬಿಡುಗಡೆ ಬಳಿಕ ಒಂದು ದಿನಾಂಕ ನಿಗದಿ ಮಾಡಿ ನಾವು ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಲಿದ್ದೇವೆ. ಪ್ರಶಾಂತ್ ವರ್ಮಾ ಹಾಗೂ ಮೈತ್ರಿ ಮೂವಿ ಮೇಕರ್ಸ್ ಜೊತೆಗೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ:ಮಾಡಿದ ಆ ಒಂದು ತಪ್ಪಿಗೆ ವೇದಿಕೆ ಮೇಲೆ ಅನುಶ್ರೀಗೆ ಕ್ಷಮೆ ಕೇಳಿದ ರಿಷಬ್ ಶೆಟ್ಟಿ

‘ಜೈ ಹನುಮಾನ್’ ಹೆಸರಿನ ಸಿನಿಮಾನಲ್ಲಿ ರಿಷಬ್ ಶೆಟ್ಟಿ ನಟಿಸಲಿದ್ದಾರೆ. ಸಿನಿಮಾದ ಪೋಸ್ಟರ್​ ಬಿಡುಗಡೆ ಆಗಿದ್ದು ರಿಷಬ್ ಶೆಟ್ಟಿ ಹನುಮಂತನ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ. ಇದೊಂದು ತೆಲುಗು ಪ್ಯಾನ್ ಇಂಡಿಯಾ ಸಿನಿಮಾ ಆಗಿರಲಿದೆ. ಈ ಹಿಂದೆ ‘ಹನು ಮ್ಯಾನ್’ ಸಿನಿಮಾ ಮಾಡಿದ್ದ ಪ್ರಶಾಂತ್ ವರ್ಮಾ ಈಗ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ‘ಪುಷ್ಪ’ ಸಿನಿಮಾ ಸರಣಿ ನಿರ್ಮಿಸಿದ್ದ ಮೈತ್ರಿ ಮೂವಿ ಮೇಕರ್ಸ್ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ರಿಷಬ್ ಶೆಟ್ಟಿ ಪ್ರಸ್ತುತ ‘ಕಾಂತಾರ: ಚಾಪ್ಟರ್ 1’ ಅಕ್ಟೋಬರ್ 2 ರಂದು ಬಿಡುಗಡೆ ಆಗಿದೆ. ಸಿನಿಮಾನಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾಕ್ಕೆ ಹೊಂಬಾಳೆ ಫಿಲಮ್ಸ್ ಬಂಡವಾಳ ತೊಡಗಿಸಿದ್ದಾರೆ. ಸಿನಿಮಾ ಪ್ಯಾನ್ ಇಂಡಿಯಾ ಮಾತ್ರವಲ್ಲದೆ ಹೊರ ದೇಶಗಳಲ್ಲಿಯೂ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ