AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂ ಸ್ಟಾರ್ ನಿರ್ದೇಶಕನ ಜೊತೆ ಕೈಜೋಡಿಸಲಿರುವ ರಿಷಬ್ ಶೆಟ್ಟಿ

ಈಗಾಗಲೇ ತೆಲುಗಿನ ಸ್ಟಾರ್ ಯುವ ನಿರ್ದೇಶಕ ಪ್ರಶಾಂತ್ ವರ್ಮಾ ರಿಷಬ್ ಅವರಿಗಾಗಿ ‘ಜೈ ಹನುಮಾನ್’ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ರಿಷಬ್ ಅವರು ಬಾಲಿವುಡ್​​ ಸಿನಿಮಾ ಒಂದರಲ್ಲೂ ನಟಿಸುತ್ತಿದ್ದಾರೆ. ಇದೀಗ ಮಲಯಾಳಂನ ಸ್ಟಾರ್ ನಿರ್ದೇಶಕರೊಬ್ಬರು ರಿಷಬ್ ಅವರಿಗೆ ಸಿನಿಮಾ ನಿರ್ದೇಶಿಸಲು ಮುಂದಾಗಿದ್ದಾರೆ. ಅದೂ ಕೇವಲ ಒಂದಲ್ಲ, ಎರಡು ಸಿನಿಮಾ.

ಮಲಯಾಳಂ ಸ್ಟಾರ್ ನಿರ್ದೇಶಕನ ಜೊತೆ ಕೈಜೋಡಿಸಲಿರುವ ರಿಷಬ್ ಶೆಟ್ಟಿ
Rishab Shetty Manjummel Boys
ಮಂಜುನಾಥ ಸಿ.
|

Updated on: Oct 06, 2026 | 11:48 AM

Share

ಮುಖ್ಯಾಂಶಗಳು

  • ರಿಷಬ್ ಶೆಟ್ಟಿ ಹೊಸ ಸಿನಿಮಾ ಅಪ್​​ಡೇಟ್
  • ಮಲಯಾಳಂ ನಿರ್ದೇಶಕನ ಜೊತೆ ಕೈಜೋಡಿಸಲಿದ್ದಾರೆ ರಿಷಬ್
  • ‘ಮಂಜ್ಞುಮೆಲ್ ಬಾಯ್ಸ್’ ನಿರ್ದೇಶಕ ಚಿದಂಬರಂ ಜೊತೆಗೆ

ರಿಷಬ್ ಶೆಟ್ಟಿ ಪ್ಯಾನ್ ಇಂಡಿಯಾ ಸ್ಟಾರ್ ನಟ. ‘ಕಾಂತಾರ’ ಸಿನಿಮಾ, ರಿಷಬ್ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆಯನ್ನು ನೀಡಿದೆ. ಇದೀಗ ಭಾರತದ ಹಲವು ಚಿತ್ರರಂಗದ ನಿರ್ದೇಶಕರು, ನಿರ್ಮಾಪಕರುಗಳು ರಿಷಬ್ ಶೆಟ್ಟಿ ಅವರೊಟ್ಟಿಗೆ ಸಿನಿಮಾ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ. ಈಗಾಗಲೇ ತೆಲುಗಿನ ಸ್ಟಾರ್ ಯುವ ನಿರ್ದೇಶಕ ಪ್ರಶಾಂತ್ ವರ್ಮಾ ರಿಷಬ್ ಅವರಿಗಾಗಿ ‘ಜೈ ಹನುಮಾನ್’ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ರಿಷಬ್ ಅವರು ಬಾಲಿವುಡ್​​ ಸಿನಿಮಾ ಒಂದರಲ್ಲೂ ನಟಿಸುತ್ತಿದ್ದಾರೆ. ಇದೀಗ ಮಲಯಾಳಂನ ಸ್ಟಾರ್ ನಿರ್ದೇಶಕರೊಬ್ಬರು ರಿಷಬ್ ಅವರಿಗೆ ಸಿನಿಮಾ ನಿರ್ದೇಶಿಸಲು ಮುಂದಾಗಿದ್ದಾರೆ. ಅದೂ ಕೇವಲ ಒಂದಲ್ಲ, ಎರಡು ಸಿನಿಮಾ.

‘ಕಾಂತಾರ’ ಖ್ಯಾತಿಯ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು ಮಲಯಾಳಂನ ಬ್ಲಾಕ್‌ಬಸ್ಟರ್ ‘ಮಂಜುಮ್ಮೇಲ್ ಬಾಯ್ಸ್’, ಇತ್ತೀಚೆಗೆ ಬಿಡುಗಡೆ ಆಗಿ ಸೂಪರ್ ಹಿಟ್ ಆದ ‘ಬಾಲನ್’ ಸಿನಿಮಾದ ನಿರ್ದೇಶಕ ಚಿದಂಬರಂ ಅವರೊಂದಿಗೆ ಕೈಜೋಡಿಸಿದ್ದು, ಹೊಸ ಸಿನಿಮಾಗೆ ಮುಂದಾಗಿದ್ದಾರೆ. ಈ ಪ್ರತಿಭಾವಂತ ಜೋಡಿಯು ಒಟ್ಟು ಎರಡು ಚಿತ್ರಗಳಿಗಾಗಿ ಒಂದಾಗುತ್ತಿದ್ದು, ಮೊದಲ ಯೋಜನೆಯಾಗಿ ಕ್ರೀಡಾ ಆಧಾರಿತ (ಸ್ಪೋರ್ಟ್ಸ್ ಡ್ರಾಮಾ) ಸಿನಿಮಾವನ್ನು ತೆರೆಗೆ ತರಲಿದೆ. ಪ್ರಸ್ತುತ ಈ ಚಿತ್ರದ ಪೂರ್ವಸಿದ್ಧತೆಗಳು ಭರದಿಂದ ಸಾಗಿದ್ದು, ಮುಂದಿನ ವರ್ಷ ಸೆಟ್ಟೇರುವ ನಿರೀಕ್ಷೆಯಿದೆ. ಈ ಬೃಹತ್ ಯೋಜನೆಗೆ ಶಿಬು ತಮೀನ್ಸ್ ಬಂಡವಾಳ ಹೂಡಲಿದ್ದಾರೆ.

ಇದನ್ನೂ ಓದಿ:ಸೈಮಾ ವೇದಿಕೆಯಲ್ಲಿ ಕನ್ನಡದಲ್ಲೇ ಮಾತನಾಡಿದ ಧ್ರುವ ವಿಕ್ರಮ್ ; ರಿಷಬ್ ಶೆಟ್ಟಿ ಬಗ್ಗೆ ಮೆಚ್ಚುಗೆ

ಭಿನ್ನ ಪ್ರಕಾರದ ಕಥೆಗಳೊಂದಿಗೆ ಪ್ರಯೋಗ ಮಾಡುತ್ತಿರುವ ರಿಷಬ್ ಶೆಟ್ಟಿ ಈ ಸ್ಪೋರ್ಟ್ಸ್ ಡ್ರಾಮಾ ಮೂಲಕ ಮತ್ತೊಮ್ಮೆ ಹೊಸ ಜಾನರ್‌ಗೆ ಕಾಲಿಡುತ್ತಿದ್ದಾರೆ. ರಿಷಬ್ ಅವರು ಹೊಸ ಹೊಸ ಜಾನರ್​​ಗಳ ಜೊತೆಗೆ ಪ್ರಯೋಗ ಮಾಡುತ್ತಲೇ ಇರುತ್ತಾರೆ. ಇನ್ನು ಚಿದಂಬಂರಂ ಸಹ ಅದ್ಭುತ ನಿರ್ದೇಶಕ, ‘ಮಂಜ್ಞುಮೆಲ್ ಬಾಯ್ಸ್’ ಮತ್ತು ‘ಬಾಲನ್’ ಸಿನಿಮಾ ಮೂಲಕ ತಮ್ಮ ಪ್ರತಿಭೆಯನ್ನು ಸಾರಿದ್ದಾರೆ. ಇದೀಗ ಪ್ಯಾನ್ ಇಂಡಿಯಾ ಸ್ಟಾರ್​​ ಜೊತೆಗೆ ಕೈಜೋಡಿಸಲು ಮುಂದಾಗಿದ್ದು, ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಮುಂದಾಗಿದ್ದಾರೆ.

ಪ್ರಸ್ತುತ ರಿಷಬ್ ಶೆಟ್ಟಿ ಅವರು ‘ಜೈ ಹನುಮಾನ್’ ಸಿನಿಮಾನಲ್ಲಿ ನಟನೆ ಮಾಡುತ್ತಿದ್ದು, ಮುಂದಿನ ವರ್ಷದ ಆರಂಭದಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ. ಅದಾದ ಬಳಿಕ ಶಿವಾಜಿ ಜೀವನ ಆಧರಿತ ಹಿಂದಿ ಸಿನಿಮಾನಲ್ಲಿ ನಟನೆ ಮಾಡಲಿದ್ದಾರೆ. ಆ ಸಿನಿಮಾದ ಬಳಿಕ ಅವರು ‘ಮಂಜ್ಞುಮೆಲ್ ಬಾಯ್ಸ್’ ನಿರ್ದೇಶಕನ ಸಿನಿಮಾನಲ್ಲಿ ನಟಿಸುವ ಸಾಧ್ಯತೆ ಇದೆ. ‘ಕಾಂತಾರ 3’ ಸಿನಿಮಾ ಸಹ ಅವರ ಕೈಯಲ್ಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್
ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್
ಮೈಸೂರು ದಸರಾ: ಖಾಸಗಿ ದರ್ಬಾರ್ ಮತ್ತು ರತ್ನಖಚಿತ ಸಿಂಹಾಸನದ ವಿಶೇಷತೆ
ಮೈಸೂರು ದಸರಾ: ಖಾಸಗಿ ದರ್ಬಾರ್ ಮತ್ತು ರತ್ನಖಚಿತ ಸಿಂಹಾಸನದ ವಿಶೇಷತೆ
ಇಂದು ಈ ರಾಶಿಯವರು ಸಾಲದ ವಿಚಾರದಲ್ಲಿ ಸ್ವಲ್ಪ ಜಾಗೃತರಾಗಿರಿ
ಇಂದು ಈ ರಾಶಿಯವರು ಸಾಲದ ವಿಚಾರದಲ್ಲಿ ಸ್ವಲ್ಪ ಜಾಗೃತರಾಗಿರಿ
ಬೆಂಗಳೂರಿನಾದ್ಯಂತ ವರುಣಾರ್ಭಟ: ರಾತ್ರಿ ಮಳೆಗೆ ರಸ್ತೆಗಳು ಜಲಾವೃತ
ಬೆಂಗಳೂರಿನಾದ್ಯಂತ ವರುಣಾರ್ಭಟ: ರಾತ್ರಿ ಮಳೆಗೆ ರಸ್ತೆಗಳು ಜಲಾವೃತ
ಮುಂಬೈನ ಡಿಪೋದಲ್ಲಿ ಭಾರೀ ಬೆಂಕಿ ಅವಘಡ; ಧಗಧಗನೆ ಹೊತ್ತಿ ಉರಿದ ಬಸ್‌ಗಳು
ಮುಂಬೈನ ಡಿಪೋದಲ್ಲಿ ಭಾರೀ ಬೆಂಕಿ ಅವಘಡ; ಧಗಧಗನೆ ಹೊತ್ತಿ ಉರಿದ ಬಸ್‌ಗಳು
ಶಿವರಾಜ್‌ಕುಮಾರ್ ಆಗಮನ ವೇಳೆ ಪಟಾಕಿ ಸ್ಫೋಟ; ತಪ್ಪಿದ ದೊಡ್ಡ ಅಪಾಯ
ಶಿವರಾಜ್‌ಕುಮಾರ್ ಆಗಮನ ವೇಳೆ ಪಟಾಕಿ ಸ್ಫೋಟ; ತಪ್ಪಿದ ದೊಡ್ಡ ಅಪಾಯ
ಹೆಚ್ಚಿತು ಗಾನವಿ, ಯಶಸ್ ನಡುವಿನ ಆಪ್ತತೆ; ಸೌಂದರ್ಯಾ ಶೆಟ್ಟಿ ಕಥೆ ಏನು?
ಹೆಚ್ಚಿತು ಗಾನವಿ, ಯಶಸ್ ನಡುವಿನ ಆಪ್ತತೆ; ಸೌಂದರ್ಯಾ ಶೆಟ್ಟಿ ಕಥೆ ಏನು?
‘ಹೆದ್ದಾರಿ ವಿಸ್ತರಣೆಗೆ 2,326 ಮರಗಳಿಗೆ ಕೊಡಲಿ ಪೆಟ್ಟು’
‘ಹೆದ್ದಾರಿ ವಿಸ್ತರಣೆಗೆ 2,326 ಮರಗಳಿಗೆ ಕೊಡಲಿ ಪೆಟ್ಟು’
ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಪ್ರಸಂಗ ಬಿಚ್ಚಿಟ್ಟ ಸಿದ್ದರಾಮಯ್ಯ
ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಪ್ರಸಂಗ ಬಿಚ್ಚಿಟ್ಟ ಸಿದ್ದರಾಮಯ್ಯ
ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ತುರ್ತು ಸುದ್ದಿಗೋಷ್ಠಿ ಲೈವ್
ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ತುರ್ತು ಸುದ್ದಿಗೋಷ್ಠಿ ಲೈವ್