Rishab Shetty: ‘ಕಾಂತಾರ 2’ ಚಿತ್ರಕ್ಕೆ ರಿಷಬ್ ಶೆಟ್ಟಿ ಪಡೆಯುತ್ತಿರೋ ಸಂಭಾವನೆ ಇಷ್ಟೊಂದಾ?

15 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಬಾಚಿಕೊಂಡಿತು. ಈಗ ‘ಕಾಂತಾರ 2’ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

Rishab Shetty: ‘ಕಾಂತಾರ 2’ ಚಿತ್ರಕ್ಕೆ ರಿಷಬ್ ಶೆಟ್ಟಿ ಪಡೆಯುತ್ತಿರೋ ಸಂಭಾವನೆ ಇಷ್ಟೊಂದಾ?
ರಿಷಬ್

Updated on: Mar 24, 2023 | 8:30 AM

ಮುಖ್ಯಾಂಶಗಳು

  • ‘ಕಾಂತಾರ 2’ ಚಿತ್ರದ ಕೆಲಸದಲ್ಲಿ ರಿಷಬ್ ಬ್ಯುಸಿ
  • ಚಿತ್ರಕಥೆ ಬರೆಯೋಕೆ ಶುರುಮಾಡಿದ ರಿಷಬ್
  • ಸೀಕ್ವೆಲ್​ಗೆ ರಿಷಬ್​ ಪಡೆಯುತ್ತಿರೋ ಸಂಭಾವನೆ ರಿವೀಲ್

ರಿಷಬ್ ಶೆಟ್ಟಿ ಅವರು ‘ಕಾಂತಾರಾ 2’ ಸಿನಿಮಾ (Kantara 2) ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಚಿತ್ರದ ಸ್ಕ್ರಿಪ್ಟ್ ಬರೆಯುವ ಕೆಲಸ ಆರಂಭ ಆಗಿದೆ. ಮಳೆಗಾಲದಲ್ಲಿ ಈ ಚಿತ್ರದ ಶೂಟಿಂಗ್ ಪ್ರಾರಂಭ ಆಗುವ ನಿರೀಕ್ಷೆ ಇದೆ. ಈ ಚಿತ್ರಕ್ಕಾಗಿ ರಿಷಬ್ ಶೆಟ್ಟಿ (Rishab Shetty) ಎಷ್ಟು ಸಂಭಾವನೆ ಪಡೆಯುತ್ತಿದ್ದಾರೆ ಎನ್ನುವ ವಿಚಾರದಲ್ಲಿ ಕೆಲ ಸುದ್ದಿಗಳು ಹುಟ್ಟಿಕೊಂಡಿವೆ. ಇದನ್ನು ರಿಷಬ್ ಅಧಿಕೃತ ಮಾಡಿಲ್ಲ. ಆದರೆ, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆ ಅಂತೂ ನಡೆಯುತ್ತಿದೆ.

‘ಕಾಂತಾರ’ ಸಿನಿಮಾ ಕಳೆದ ವರ್ಷ ಸೆಪ್ಟೆಂಬರ್ 30ರಂದು ರಿಲೀಸ್ ಆಯಿತು. ಮೊದಲು ಕನ್ನಡದಲ್ಲಿ ಮಾತ್ರ ಸಿನಿಮಾ ತೆರೆಗೆ ಬಂತು. ಆ ಬಳಿಕ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಪರಭಾಷೆಗೂ ಡಬ್ ಮಾಡುವ ಕೆಲಸ ಆಯಿತು. ಅಲ್ಲಿಯೂ ಈ ಸಿನಿಮಾ ಒಳ್ಳೆಯ ಕಮಾಯಿ ಮಾಡಿತು. ಕೇವಲ 15 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಬಾಚಿಕೊಂಡಿತು. ಈಗ ‘ಕಾಂತಾರ 2’ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರಕ್ಕಾಗಿ ರಿಷಬ್ ಶೆಟ್ಟಿ ಅವರು ತಮ್ಮ ಸಂಭಾವನೆ ಕೂಡ ಹೆಚ್ಚಿಸಿಕೊಂಡಿದ್ದಾರೆ.

‘ಕಾಂತಾರ’ ಸಂಭಾವನೆ ಎಷ್ಟು?

‘ಕಾಂತಾರ’ ಚಿತ್ರಕ್ಕೆ ರಿಷಬ್ ಶೆಟ್ಟಿ ಅವರೇ ಕಥೆ, ಚಿತ್ರಕಥೆ ಬರೆದಿದ್ದರು. ಸಿನಿಮಾ ನಿರ್ದೇಶಿಸಿ, ನಟಿಸಿದ್ದರು. ಈ ಚಿತ್ರದ ನಟನೆ ಹಾಗೂ ನಿರ್ದೇಶನಕ್ಕೆ ಫುಲ್ ಮಾರ್ಕ್ಸ್ ಗಿಟ್ಟಿಸಿಕೊಂಡರು. ಈ ಚಿತ್ರಕ್ಕೆ ಅವರು ಪಡೆದ ಸಂಭಾವನೆ 5 ಕೋಟಿ ರೂಪಾಯಿ ಎನ್ನಲಾಗಿದೆ. ‘ಕಾಂತಾರ ಗೆದ್ದ ನಂತರ ಹೊಂಬಾಳೆ ಸಂಸ್ಥೆ ತಂಡದವರಿಗೆ ಮತ್ತೊಮ್ಮೆ ಹಣ ನೀಡಿದ್ದಾರೆ’ ಎಂದು ರಿಷಬ್ ಶೆಟ್ಟಿ ಈ ಮೊದಲು ಹೇಳಿದ್ದರು. ರಿಷಬ್​ಗೆ ಆಗ ಎಷ್ಟು ಹಣ ಸಿಕ್ಕಿದೆ ಎಂಬುದು ರಿವೀಲ್ ಆಗಿಲ್ಲ.

ಇದನ್ನೂ ಓದಿ: Rishab Shetty: ವಿಶ್ವಸಂಸ್ಥೆ ತಲುಪಿದ ಕಾಂತಾರ, ಕನ್ನಡದಲ್ಲಿ ಮಾತನಾಡಲಿರುವ ರಿಷಬ್ ಶೆಟ್ಟಿ

‘ಕಾಂತಾರ 2’ ಸಂಭಾವನೆ ಎಷ್ಟು?

‘ಕಾಂತಾರ 2’ ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿದೆ. ಇದರ ಜೊತೆಗೆ ಅವರ ಸಂಭಾವನೆ ಕೂಡ ಹೆಚ್ಚಿದೆ. ‘ಕಾಂತಾರ 2’ ಚಿತ್ರಕ್ಕಾಗಿ ರಿಷಬ್ 30-50 ಕೋಟಿ ರೂ. ಪಡೆದುಕೊಳ್ಳುತ್ತಿದ್ದಾರೆ ಎಂದು ವರದಿ ಆಗಿದೆ. ನಿರ್ದೇಶನ, ನಟನೆ, ಕಥೆ, ಚಿತ್ರಕಥೆ ಎಲ್ಲವೂ ಸೇರಿ ಅವರು ಇಷ್ಟು ಹಣ ಪಡೆಯುತ್ತಿದ್ದಾರೆ. ಈ ವಿಚಾರದ ಬಗ್ಗೆ ರಿಷಬ್ ಆಗಲಿ, ನಿರ್ಮಾಣ ಸಂಸ್ಥೆ ಹೊಂಬಾಳೆಯಾಗಲೀ ಅಧಿಕೃತ ಹೇಳಿಕೆ ನೀಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us