ಹೊಂಬಾಳೆ ಅನ್​​ಫಾಲೋ ಮಾಡಿದ ರಿಷಬ್; ತಮ್ಮದೇ ಬ್ಯಾನರ್​ ಅಲ್ಲಿ ‘ಚಾಪ್ಟರ್ 2’ ಘೋಷಣೆ

ರಿಷಬ್ ಶೆಟ್ಟಿ ಅವರು ಹೊಂಬಾಳೆ ಫಿಲ್ಮ್ಸ್ ಅನ್ನು ಇನ್‌ಸ್ಟಾದಲ್ಲಿ ಅನ್‌ಫಾಲೋ ಮಾಡಿ, ತಮ್ಮದೇ ಬ್ಯಾನರ್ ಅಡಿಯಲ್ಲಿ "ಚಾಪ್ಟರ್ 2" ಘೋಷಿಸಿದ್ದಾರೆ. ಇದು "ಕಾಂತಾರ ಚಾಪ್ಟರ್ 2" ಅಥವಾ ಬೇರೆ ಚಿತ್ರವೇ ಎಂಬ ಚರ್ಚೆ ಹುಟ್ಟುಹಾಕಿದೆ. ಈ ಬೆಳವಣಿಗೆಯು ರಿಷಬ್ ಮತ್ತು ಹೊಂಬಾಳೆ ನಡುವಿನ ಸಂಬಂಧದ ಬಗ್ಗೆ ಹಲವು ಪ್ರಶ್ನೆಗಳನ್ನು ಸೃಷ್ಟಿಸಿದೆ.

ಹೊಂಬಾಳೆ ಅನ್​​ಫಾಲೋ ಮಾಡಿದ ರಿಷಬ್; ತಮ್ಮದೇ ಬ್ಯಾನರ್​ ಅಲ್ಲಿ ‘ಚಾಪ್ಟರ್ 2’ ಘೋಷಣೆ
ರಿಷಬ್

Updated on: Mar 20, 2026 | 10:22 AM

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾ ಮೂಲಕ ದೊಡ್ಡ ಮಟ್ಟದ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ನಿರ್ದೇಶನ ಮಾಡುವುದರ ಮೂಲಕ ಜನಪ್ರಿಯತೆ ಪಡೆದಿದ್ದಾರೆ. ಈಗ ಅವರು ತಮ್ಮದೇ ಬ್ಯಾನರ್ ಅಲ್ಲಿ ‘ಚಾಪ್ಟರ್ 2’ ಎಂದು ಘೋಷಣೆ ಮಾಡಿದ್ದಾರೆ. ಇದು ನಿಜಕ್ಕೂ ‘ಕಾಂತಾರ ಚಾಪ್ಟರ್ 2’ನಾ? ಅಥವಾ ಬೇರೆ ಚಿತ್ರವೇ ಎಂಬ ಪ್ರಶ್ನೆ ಮೂಡಿದೆ. ಹೀಗಿರುವಾಗಲೇ ರಿಷಬ್ ಅವರ ಒಂದು ನಿರ್ಧಾರ ಅಚ್ಚರಿ ಮೂಡಿಸಿದೆ. ಇನ್ಸ್ಟಾದಲ್ಲಿ ಹೊಂಬಾಳೆ ಫಿಲ್ಮ್ಸ್​​ ಅನ್ನು ರಿಷಬ್ ಅನ್​​ಫಾಲೋ ಮಾಡಿದ್ದಾರೆ.

ರಿಷಬ್ ಶೆಟ್ಟಿ ಅವರು ಸಾಕಷ್ಟು ಜನಪ್ರಿಯತೆ ಪಡದಿದ್ದು ‘ಕಾಂತಾರ’ ಸಿನಿಮಾ ಮೂಲಕ. ಈ ಚಿತ್ರ ಸೂಪರ್ ಡೂಪರ್ ಹಿಟ್ ಆಯಿತು. ಆ ಬಳಿಕ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮಾಡಿದರು. ಈ ಚಿತ್ರಕ್ಕೆ ಎರಡನೇ ಚಾಪ್ಟರ್ ಬರಬೇಕಿತ್ತು. ಆ ಬಗ್ಗೆ ಚಾಪ್ಟರ್ 1 ಅಂತ್ಯದಲ್ಲಿ ಘೋಷಣೆ ಆಗಿತ್ತು. ಹೀಗಿರುವಾಗಲೇ ರಿಷಬ್ ಅವರು ಯುಗಾದಿಗೆ ‘ಚಾಪ್ಟರ್ 2’ ಎಂದು ರಿಷಬ್ ಘೋಷಣೆ ಮಾಡಿದ್ದಾರೆ.

ರಿಷಬ್ ‘ಚಾಪ್ಟರ್ 2’ ಘೋಷಣೆ ಮಾಡಿದರೆ ಖುಷಿ ಆಗೋದು ಸಹಜ. ಆದರೆ, ರಿಷಬ್ ಪೋಸ್ಟ್ ಚರ್ಚೆ ಹುಟ್ಟುಹಾಕಿದೆ. ‘ಕಾಂತಾರ’ ಸರಣಿಯನ್ನು ನಿರ್ಮಾಣ ಮಾಡಿರೋದು ಹೊಂಬಾಳೆ ಫಿಲ್ಮ್ಸ್. ಆದರೆ, ‘ಚಾಪ್ಟರ್ 2’ ಅನೌನ್ಸ್ ಮಾಡಿರೋದು ಅವರದ್ದೇ ಬ್ಯಾನರ್ ಅಡಿಯಲ್ಲಿ.

ಇದನ್ನೂ ಓದಿ: ‘ಅಧ್ಯಾಯ ಎರಡು’: ‘ಕಾಂತಾರ: ಚಾಪ್ಟರ್ 2’ ಆರಂಭಿಸಿದರೇ ರಿಷಬ್ ಶೆಟ್ಟಿ?

ರಿಷಬ್ ಪೋಸ್ಟರ್​ ಅಲ್ಲಿ ಎಲ್ಲಿಯೂ ಇದು ‘ಕಾಂತಾರ: ಚಾಪ್ಟರ್ 2’ ಎಂದು ಅನೌನ್ಸ್ ಮಾಡಿಲ್ಲ. ಹೀಗಾಗಿ ವಿವಿಧ ಚರ್ಚೆ ನಡೆದಿದೆ. ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ’ ಚಿತ್ರಕ್ಕೆ ಎರಡನೇ ಚಾಪ್ಟರ್ ಇದಾಗಿರಬಹುದು ಎಂದು ಅನೇಕರು ಊಹಿಸಿದ್ದಾರೆ. ಇನ್ನೂ ಕೆಲವರು ‘ಕಾಂತಾರ: ಚಾಪ್ಟರ್ 2’ ಎನ್ನುತ್ತಿದ್ದಾರೆ.
ಇವುಗಳ ಮಧ್ಯೆ ರಿಷಬ್ ಅವರು ಇನ್​​ಸ್ಟಾದಲ್ಲಿ ‘ಕಾಂತಾರ’ ಹಾಗೂ ‘ಹೊಂಬಾಳೆ ಫಿಲ್ಮ್ಸ್’ ಖಾತೆಯನ್ನು ಅನ್​​​ಫಾಲೋ ಮಾಡಿದ್ದಾರೆ. ಇದು ಚರ್ಚೆಗೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us