AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara 2 Shooting: ‘ಕಾಂತಾರ 2’ ಆರಂಭಿಸಲು ಮಳೆಗಾಲಕ್ಕೆ ಕಾದಿರುವ ರಿಷಬ್​ ಶೆಟ್ಟಿ; ಮಾಹಿತಿ ನೀಡಿದ ವಿಜಯ್​ ಕಿರಗಂದೂರು

Rishab Shetty | Kantara 2 Movie: ಬಹುನಿರೀಕ್ಷಿತ ‘ಕಾಂತಾರ 2’ ಚಿತ್ರಕ್ಕೆ ಜೂನ್​ ತಿಂಗಳಲ್ಲಿ ಶೂಟಿಂಗ್​ ಆರಂಭ ಆಗಲಿದೆ. ಆ ಬಗ್ಗೆ ವಿಜಯ್​ ಕಿರಗಂದೂರು ಮಾಹಿತಿ ನೀಡಿದ್ದಾರೆ.

Kantara 2 Shooting: ‘ಕಾಂತಾರ 2’ ಆರಂಭಿಸಲು ಮಳೆಗಾಲಕ್ಕೆ ಕಾದಿರುವ ರಿಷಬ್​ ಶೆಟ್ಟಿ; ಮಾಹಿತಿ ನೀಡಿದ ವಿಜಯ್​ ಕಿರಗಂದೂರು
ಕಾಂತಾರ ಪೋಸ್ಟರ್, ವಿಜಯ್ ಕಿರಗಂದೂರು
ಮದನ್​ ಕುಮಾರ್​
|

Updated on:Jan 21, 2023 | 5:25 PM

Share

ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯಿಂದ ಮೂಡಿಬರಲಿರುವ ಎಲ್ಲ ಸಿನಿಮಾಗಳ ಬಗ್ಗೆ ಪ್ರೇಕ್ಷಕರಿಗೆ ಸಖತ್​ ನಿರೀಕ್ಷೆ ಸೃಷ್ಟಿ ಆಗಿದೆ. ಅದರಲ್ಲೂ ‘ಕಾಂತಾರ’ ಸಿನಿಮಾದ ಮುಂದುವರಿದ ಭಾಗ ಯಾವಾಗ ಬರಲಿದೆ ಎಂಬ ಪ್ರಶ್ನೆ ಎಲ್ಲರಿಂದಲೂ ಕೇಳಿಬರುತ್ತಿದೆ. ನಟ, ನಿರ್ದೇಶಕ ರಿಷಬ್​ ಶೆಟ್ಟಿ (Rishab Shetty) ಅವರಿಗೆ ‘ಕಾಂತಾರ’ ಸಿನಿಮಾದಿಂದ ಸಿಕ್ಕ ಜನಪ್ರಿಯತೆ ಬಹಳ ದೊಡ್ಡದು. ಆದಷ್ಟು ಬೇಗ ಅವರು ‘ಕಾಂತಾರ 2’ (Kantara 2) ಸಿನಿಮಾದ ಕೆಲಸ ಶುರುಮಾಡಲಿ ಎಂದು ಫ್ಯಾನ್ಸ್​ ಕಾದಿದ್ದಾರೆ. ಹಾಗಾದರೆ ಈ ಚಿತ್ರದ ಶೂಟಿಂಗ್​ ಯಾವಾಗ ಆರಂಭ ಆಗಲಿದೆ? ಅದಕ್ಕೀಗ ಉತ್ತರ ಸಿಕ್ಕಿದೆ. ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯ ವಿಜಯ್​ ಕಿರಗಂದೂರು (Vijay Kiragandur) ಅವರು ‘ಡೆಡ್​ಲೈನ್​’ಗೆ ನೀಡಿದ ಸಂದರ್ಶನದಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. 2023ರ ಮಳೆಗಾಲದಲ್ಲಿ ‘ಕಾಂತಾರ 2’ ಶೂಟಿಂಗ್​ ಶುರುವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಸಿದ್ಧವಾಗುತ್ತಿದೆ ‘ಕಾಂತಾರ 2’ ಕಥೆ:

‘ರಿಷಬ್​ ಶೆಟ್ಟಿ ಅವರು ಈಗ ಕಥೆ ಬರೆಯುತ್ತಿದ್ದಾರೆ. ತಮ್ಮ ತಂಡದ ಜೊತೆ ಅವರು ಕರಾವಳಿ ಕರ್ನಾಟಕದ ಕಾಡಿಗೆ ತೆರಳಿದ್ದು, ರಿಸರ್ಚ್​ ನಡೆಸುತ್ತಿದ್ದಾರೆ’ ಎಂದು ವಿಜಯ್​ ಕಿರಗಂದೂರು ಹೇಳಿದ್ದಾರೆ. ಅಚ್ಚರಿ ಎಂದರೆ, ಕಾಂತಾರ ಸಿನಿಮಾಗೆ ಸೀಕ್ವೆಲ್​ ಬದಲು, ಪ್ರೀಕ್ವೆಲ್​ ಮಾಡಲು ತಂಡ ನಿರ್ಧರಿಸಿದೆ. ಅಂದರೆ, ‘ಕಾಂತಾರ’ ಚಿತ್ರದ ಕಥೆ ಆರಂಭ ಆಗುವುದಕ್ಕೂ ಮುನ್ನ ಏನಾಗಿತ್ತು ಎಂಬುದು ‘ಕಾಂತಾರ 2’ ಸಿನಿಮಾದಲ್ಲಿ ಇರಲಿದೆ.

ಇದನ್ನೂ ಓದಿ: ದೈವದ ಹರಕೆ ತೀರಿಸಿದ ‘ಕಾಂತಾರ’ ತಂಡ; ರೋಮಾಂಚನಕಾರಿಯಾಗಿದೆ ವಿಡಿಯೋ ​

ಇದನ್ನೂ ಓದಿ
Image
Dhoomam: ‘ಹೊಂಬಾಳೆ ಫಿಲ್ಮ್ಸ್​’ ಹೊಸ ಚಿತ್ರ ‘ಧೂಮಂ’; ಫಹಾದ್​ ಫಾಸಿಲ್​-ಪವನ್​ ಕುಮಾರ್​ ಚಿತ್ರದ ಶೀರ್ಷಿಕೆ ಬಹಿರಂಗ
Image
KGF Chapter 2: 100 ದಿನ ಪೂರೈಸಿದ ‘ಕೆಜಿಎಫ್​: ಚಾಪ್ಟರ್​ 2’; ಪ್ರೇಕ್ಷಕರಿಗೆ ‘ಹೊಂಬಾಳೆ ಫಿಲ್ಮ್ಸ್​’ ಧನ್ಯವಾದ
Image
‘ಕೆಜಿಎಫ್​ 3’ ಸದ್ಯಕ್ಕಿಲ್ಲ: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್​ನ ಕಾರ್ತಿಕ್​ ಗೌಡ; ಅಂತೆ-ಕಂತೆಗಳಿಗೆ ಬ್ರೇಕ್​

‘ಕಾಂತಾರ 2’ ಶೂಟಿಂಗ್​ ಜೂನ್​ನಲ್ಲಿ ಆರಂಭ:

‘ಜೂನ್​ ತಿಂಗಳಲ್ಲಿ ಶೂಟಿಂಗ್​ ಶುರು ಮಾಡಬೇಕು ಎಂದು ರಿಷಬ್​ ಶೆಟ್ಟಿ ಪ್ಲ್ಯಾನ್​ ಮಾಡಿಕೊಂಡಿದ್ದಾರೆ. ಯಾಕೆಂದರೆ, ಒಂದಷ್ಟು ದೃಶ್ಯಗಳಿಗೆ ಮಳೆಗಾಲದ ಅಗತ್ಯವಿದೆ. 2024ರ ಏಪ್ರಿಲ್​ ಅಥವಾ ಮೇ ತಿಂಗಳಲ್ಲಿ ಈ ಸಿನಿಮಾವನ್ನು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಮಾಡಬೇಕು ಎಂಬ ಉದ್ದೇಶ ನಮ್ಮದು’ ಎಂದು ವಿಜಯ್​ ಕಿರಗಂದೂರು ಹೇಳಿದ್ದಾರೆ.

ಇದನ್ನೂ ಓದಿ: Kantara 2: ‘ಕಾಂತಾರ 2 ಅಂತ ನೀವೇ ಎಲ್ಲ ಹೇಳ್ತಿದ್ದೀರಿ..’; ಸೀಕ್ವೆಲ್​ ಬಗ್ಗೆ ಕೇಳಿದ್ದಕ್ಕೆ ರಿಷಬ್​ ಶೆಟ್ಟಿ ಉತ್ತರ

ಅದ್ದೂರಿ ಬಜೆಟ್​ನಲ್ಲಿ ಸಿದ್ಧವಾಗಲಿದೆ ‘ಕಾಂತಾರ’ ಪ್ರೀಕ್ವೆಲ್​:

ಸಾಧಾರಣ ಬಜೆಟ್​ನಲ್ಲಿ ನಿರ್ಮಾಣವಾದ ‘ಕಾಂತಾರ’ ಸಿನಿಮಾ ವಿಶ್ವಾದ್ಯಂತ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡುವ ಮೂಲಕ ದಾಖಲೆ ಬರೆಯಿತು. ಈಗ ಈ ಚಿತ್ರದ 2ನೇ ಪಾರ್ಟ್​ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಹಾಗಾಗಿ ದೊಡ್ಡ ಬಜೆಟ್​ನಲ್ಲಿ ಸಿನಿಮಾ ಮಾಡಲು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ನಿರ್ಧರಿಸಿದೆ.

ಇದನ್ನೂ ಓದಿ: Kamal Haasan: ‘ನಿಮ್ಮ ಮುಂದಿನ ಚಿತ್ರದಿಂದ ಕಾಂತಾರ ಸಿನಿಮಾ ದಾಖಲೆ ಮುರಿಯಿರಿ’; ರಿಷಬ್​ ಶೆಟ್ಟಿಗೆ ಕಮಲ್​ ಹಾಸನ್​ ಸಲಹೆ

‘ಕಾಂತಾರ ಸಿನಿಮಾ ಅಷ್ಟು ದೊಡ್ಡ ಸಕ್ಸಸ್​ ಆಗಿರೋದರಿಂದ ನಾವು ಏನೇ ಮಾಡಿದರೂ ದೊಡ್ಡದಾಗಿ ಮಾಡಬೇಕಿದೆ. ಪಾತ್ರವರ್ಗಕ್ಕೆ ಬೇರೆ ಕಲಾವಿದರು ಸೇರಲಿದ್ದಾರೆ. ಆದರೆ ಮೊದಲ ಚಿತ್ರದ ರೀತಿಯೇ ಇದರ ಶೈಲಿ ಇರಲಿದೆ’ ಎಂದು ವಿಜಯ್​ ಕಿರಗಂದೂರು ಹೇಳಿರುವುದಾಗಿ ‘ಡೆಡ್​ಲೈನ್​’ ವರದಿ ಮಾಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:25 pm, Sat, 21 January 23

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ