ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿಗೆ ತಮ್ಮದೇ ಸ್ಟೈಲ್​ನಲ್ಲಿ ಅಭಿನಂದನೆ ತಿಳಿಸಿದ ರಿಷಬ್

ಭಾನುವಾರ (ಜೂನ್ 9) ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದರು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಈ ಕಾರ್ಯಕ್ರಮ ನಡೆದಿದೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿದ್ದಾರೆ. ಈ ಮಧ್ಯೆ ಅನೇಕ ಸೆಲೆಬ್ರಿಟಿಗಳು ಮನೆಯಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದ್ದಾರೆ.

ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿಗೆ ತಮ್ಮದೇ ಸ್ಟೈಲ್​ನಲ್ಲಿ ಅಭಿನಂದನೆ ತಿಳಿಸಿದ ರಿಷಬ್
ಮೋದಿ-ರಿಷಬ್

Updated on: Jun 10, 2024 | 7:09 AM

ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅವರಿಗೆ ಕೋಟ್ಯಂತರ ಮಂದಿ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯ ಕೋರುತ್ತಿದ್ದಾರೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಕೂಡ ಮೋದಿಗೆ ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ. ಸಾವಿರಾರು ಮಂದಿ ಇದನ್ನು ರೀ-ಟ್ವೀಟ್ ಮಾಡಿದ್ದಾರೆ.

ಭಾನುವಾರ (ಜೂನ್ 9) ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದರು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಈ ಕಾರ್ಯಕ್ರಮ ನಡೆದಿದೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿದ್ದಾರೆ. ಈ ಮಧ್ಯೆ ಅನೇಕ ಸೆಲೆಬ್ರಿಟಿಗಳು ಮನೆಯಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರದ ವೇಳೆ ಪರಸ್ಪರ ತಬ್ಬಿಕೊಂಡ ಅಕ್ಷಯ್, ಶಾರುಖ್

‘3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಮೂರನೇ ಬಾರಿಗೆ ಭಾರತದ ಪ್ರಧಾನಿ ಆಗುತ್ತಿರುವ ನಿಮಗೆ ಅಭಿನಂದನೆ. ಅಭಿವೃದ್ಧಿ, ಶಿಕ್ಷಣ ಮತ್ತು ರಾಷ್ಟ್ರೀಯ ಸುರಕ್ಷತೆಯ ಕಡೆಗೆ ನಿಮ್ಮ ಸಮರ್ಪಣೆಯನ್ನು ಗೌರವಿಸುತ್ತೇವೆ’ ಎಂದು ರಿಷಬ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಮೋದಿ ಅವರನ್ನು ಹೊಗಳಿದ್ದಾರೆ.

ಸಿನಿಮಾ ಕೆಲಸ

ರಿಷಬ್ ಶೆಟ್ಟಿ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಕಾಂತಾರ: ಚಾಪ್ಟರ್ 1’ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಕುಂದಾಪುರದಲ್ಲಿ ದೊಡ್ಡ ಸೆಟ್ ಹಾಕಿ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿದೆ. ಈ ಕಾರಣಕ್ಕೆ ರಿಷಬ್ ಅವರು ಅಲ್ಲಿಗೆ ಶಿಫ್ಟ್ ಆಗಿದ್ದಾರೆ. ಈಗಾಗಲೇ ‘ಕಾಂತಾರ: ಅಧ್ಯಾಯ 1’ ಸಿನಿಮಾದ ಮೊದಲ ಹಂತದ ಶೂಟಿಂಗ್ ಪೂರ್ಣಗೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us