ಲೂಸಿಯಾದಲ್ಲಿ ರಿಷಬ್ ಶೆಟ್ಟಿ ಮಾಡಿದ ಪಾತ್ರ ನೆನಪಿದೆಯೇ? 12 ವರ್ಷಗಳಲ್ಲಿ ಅದೆಷ್ಟು ಬದಲಾವಣೆ
ರಿಷಬ್ ಶೆಟ್ಟಿ ಅವರ 'ಕಾಂತಾರ: ಚಾಪ್ಟರ್ 1' ಸಿನಿಮಾ ಅಕ್ಟೋಬರ್ 2 ರಂದು ಬಿಡುಗಡೆಯಾಗಲಿದೆ. ಈ ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆ ಇದೆ. 12 ವರ್ಷಗಳ ಹಿಂದಿನ 'ಲೂಸಿಯಾ' ಸಿನಿಮಾದಲ್ಲಿನ ಅವರ ಪಾತ್ರದ ವಿಡಿಯೋ ವೈರಲ್ ಆಗಿದೆ.12 ವರ್ಷಗಳಲ್ಲಿ ಅವರ ಬದುಕು ಎಷ್ಟೆಲ್ಲ ಬದಲಾಗಿದೆ ಎಂದು ಅನೇಕರು ಹೇಳಿದ್ದಾರೆ.

ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ಎಲ್ಲರ ಎದುರು ಬರಲು ಸಿದ್ಧರಾಗಿದ್ದಾರೆ. ಈ ಸಿನಿಮಾವು ‘ಕಾಂತಾರ’ ಚಿತ್ರಕ್ಕಿಂತ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗಲು ರೆಡಿ ಆಗುತ್ತಿದೆ. ರಿಷಬ್ ಅವರು ಪ್ರತಿ ಸಿನಿಮಾದಲ್ಲೂ ಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರ ಯಾವ ರೀತಿಯಲ್ಲಿ ಇರಲಿದೆ ಎಂಬ ಕುತೂಹಲ ಮೂಡಿದೆ. ಈಗ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. 12 ವರ್ಷಗಳ ಹಿಂದೆ ಬಂದ ‘ಲೂಸಿಯಾ’ ಸಿನಿಮಾದಲ್ಲಿ ರಿಷಬ್ ಕೂಡ ನಟಿಸಿದ್ದರು. ಅದರ ವಿಡಿಯೋ ಈಗ ವೈರಲ್ ಆಗುತ್ತಿದೆ.
ರಿಷಬ್ ಶೆಟ್ಟಿ ಅವರು ಚಿತ್ರರಂಗಕ್ಕೆ ಬರೋ ಮೊದಲು ಹಲವು ಕೆಲಸಗಳನ್ನು ಮಾಡಿದ್ದರು. ಆ ಬಳಿಕ ಚಿತ್ರರಂಗಕ್ಕೆ ಕಾಲಿಟ್ಟರು. ಆರಂಭದಲ್ಲಿ ‘ತುಘಲಕ್’ ಹೆಸರಿನ ಸಿನಿಮಾ ಮಾಡಿದರು. 2013ರಲ್ಲಿ ‘ಲೂಸಿಯಾ’ ಸಿನಿಮಾದಲ್ಲಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಪವನ್ ಕುಮಾರ್ ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದರು. ಆಗಿನ ಕಾಲಕ್ಕೆ ದೊಡ್ಡ ಮಟ್ಟದಲ್ಲಿ ಸಿನಿಮಾ ಯಶಸ್ಸು ಕಂಡಿತು. ನೀನಾಸಂ ಸತೀಶ್ ಅವರಿಗೆ ಈ ಸಿನಿಮಾ ಖ್ಯಾತಿ ತಂದುಕೊಟ್ಟಿತ್ತು.
ಇದನ್ನೂ ಓದಿ: ಯಶ್, ರಿಷಬ್ ಶೆಟ್ಟಿಯನ್ನು ಕೊಂಡಾಡಿದ ರುಕ್ಮಿಣಿ ವಸಂತ್, ನಟಿ ಹೇಳಿದ್ದೇನು?
ರಿಷಬ್ ಶೆಟ್ಟಿ ಅವರು ಈ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿರುವ ವಿಡಿಯೋ ವೈರಲ್ ಆಗಿದೆ. ಲೂಸಿಯಾ ಸಿನಿಮಾ ಮಾಡುವಾಗ ರಿಷಬ್ ಆಗತಾನೇ ಗುರುತಿಸಿಕೊಳ್ಳುತ್ತಿದ್ದರು. ಆದರೆ, ಈಗ ಅವರು ಬೇಡಿಕೆಯ ನಟ ಹಾಗೂ ನಿರ್ದೇಶಕ ಆಗಿದ್ದಾರೆ. ರಿಷಬ್ ಅವರ ಪ್ರಯತ್ನವನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. 12 ವರ್ಷಗಳಲ್ಲಿ ಅವರ ಬದುಕು ಎಷ್ಟೆಲ್ಲ ಬದಲಾಗಿದೆ ಎಂದು ಅನೇಕರು ಹೇಳಿದ್ದಾರೆ.
ಲೂಸಿಯಾ ದೃಶ್ಯ
View this post on Instagram
‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ರಿಲೀಸ್ ಆಗಲಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಾಣುವ ನಿರೀಕ್ಷೆ ಇದೆ. ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ದೊಡ್ಡ ಬಜೆಟ್ನಲ್ಲಿ ನಿರ್ಮಾಣ ಮಾಡಿದೆ. ಅದ್ದೂರಿಯಾಗಿ ಸಿನಿಮಾ ಮೂಡಿ ಬಂದಿದೆ. ಈ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿ. ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರ ಬೀಳಬೇಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 7:55 am, Thu, 11 September 25







