AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ಸ್ವಿಟ್ಜರ್​ಲೆಂಡ್​ನ ಜಿನೆವಾನಲ್ಲಿ ಕಾಂತಾರ ಸಿನಿಮಾ ವಿಶೇಷ ಪ್ರದರ್ಶನ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಸ್ವಿಟ್ಜರ್​ಲೆಂಡ್​ನ ಜೆನಿವಾನಲ್ಲಿ ವಿಶೇಷ ಪ್ರದರ್ಶನ ಕಾಣಲಿದೆ. ವಿಶೇಷ ಸ್ಕ್ರೀನಿಂಗ್ ಅನ್ನು ಪರ್ಮನೆಂಟ್ ಮಿಷನ್ ಆಫ್ ಇಂಡಿಯಾ ಟು ಯುಎನ್ ಹಾಗೂ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾದವರು ಆಯೋಜನೆ ಮಾಡಿದ್ದಾರೆ.

Kantara: ಸ್ವಿಟ್ಜರ್​ಲೆಂಡ್​ನ ಜಿನೆವಾನಲ್ಲಿ ಕಾಂತಾರ ಸಿನಿಮಾ ವಿಶೇಷ ಪ್ರದರ್ಶನ
ಕಾಂತಾರ ಸಿನಿಮಾ
ಮಂಜುನಾಥ ಸಿ.
|

Updated on: Mar 17, 2023 | 8:46 PM

Share

ನಟ ನಿರ್ದೇಶಕ ರಿಷಬ್ ಶೆಟ್ಟಿಯವರು (Rishab Setty) ಸ್ವಿಟ್ಜರ್​ಲೆಂಡ್​ನ ಜಿನೆವಾದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ  ವಾರ್ಷಿಕ ಸಭೆಯಲ್ಲಿ (UN Annual Meet) ಭಾಗವಹಿಸಿ ಕನ್ನಡದಲ್ಲಿ ಮಾತನಾಡಿದ್ದರು. ವಿಶ್ವಸಂಸ್ಥೆಯಲ್ಲಿ ಕನ್ನಡ ಭಾಷಣ ಮಾಡಿದ ರಿಷಬ್​ಗೆ ಅಭಿನಂದನೆಗಳ ಸುರಿಮಳೆ ಸುರಿತ್ತಿರುವ ಬೆನ್ನಲ್ಲೆ ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ಸ್ವಿಟ್ಜರ್​ಲೆಂಡ್​ನಲ್ಲಿ ವಿಶೇಷ ಪ್ರದರ್ಶನಗೊಳ್ಳಲು ಅಣಿಯಾಗಿದೆ. ಪರ್ಮನೆಂಟ್ ಮಿಷನ್ ಆಫ್ ಇಂಡಿಯಾ ಟು ಯುಎನ್ ಹಾಗೂ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ದವರು ‘ಕಾಂತಾರ’ ಸಿನಿಮಾದ ವಿಶೇಷ ಸ್ಕ್ರೀನಿಂಗ್ ಅನ್ನು ಆಯೋಜಿಸಿದ್ದಾರೆ.

ವಿಶ್ವಸಂಸ್ಥೆಯ ಪ್ರಧಾನ ಕಚೇರಿ ಇರುವ ಜೆನಿವಾ ಬಳಿಯ ಬಲೆಕ್ಸರ್ಟ್ ಮಾಲ್​ನಲ್ಲಿ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದ್ದು ಕನ್ನಡದಲ್ಲಿಯೇ ಸಿನಿಮಾ ಪ್ರದರ್ಶನಗೊಳ್ಳಲಿದೆ. ಇಂಗ್ಲೀಷ್ ಸಬ್​ಟೈಟಲ್​ಗಳನ್ನು ಸಿನಿಮಾ ಒಳಗೊಂಡಿರಲಿದೆ. ರಿಷಬ್ ಶೆಟ್ಟಿ ಹಾಜರಿಯಲ್ಲಿ ಸಿನಿಮಾದ ಪ್ರದರ್ಶನ ನಡೆಯಲಿದ್ದು, ಸಿನಿಮಾ ಪ್ರದರ್ಶನಕ್ಕೆ ಮುನ್ನ ಕಾರ್ಯಕ್ರಮವನ್ನು ಸಹ ಆಯೋಜನೆ ಮಾಡಲಾಗಿದೆ.

ಈ ವಿಶೇಷ ಪ್ರದರ್ಶನಕ್ಕೆ ಆನ್​ಲೈನ್ ಮೂಲಕ ರಿಜಿಸ್ಟರ್ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದ್ದು, ವಿಶ್ವಸಂಸ್ಥೆಯ ಕೆಲವು ಅಧಿಕಾರಿಗಳನ್ನು ಪರ್ಮನೆಂಟ್ ಮಿಷನ್ ಆಫ್ ಇಂಡಿಯಾ ಟು ದಿ ಯುಎನ್ ಹಾಗೂ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ದವರು ಆಹ್ವಾನಿಸಿರುವ ಸಾಧ್ಯತೆ ಇದೆ. ಭಾರತೀಯ ಕಾಲಮಾನ 17 ಮಾರ್ಚ್ 10:30ಗೆ ಸ್ವಿಟ್ಜರ್​ಲೆಂಡ್​ನಲ್ಲಿ ಕಾಂತಾರ ಸಿನಿಮಾ ಪ್ರದರ್ಶನಗೊಳ್ಳಲಿದೆ.

ಕಾಂತಾರ ಸಿನಿಮಾದ ವಿಶೇಷ ಪ್ರದರ್ಶನವು ಜಿನೆವಾನಲ್ಲಿ ಆಯೋಜನೆಗೊಂಡಿರುವ ಬಗ್ಗೆ ರಿಷಬ್ ಶೆಟ್ಟಿ ತಮ್ಮ ಟ್ವೀಟ್​ನಲ್ಲಿ ಹಂಚಿಕೊಂಡಿದ್ದು ”ಜಿನೆವಾದಲ್ಲಿ ನಮ್ಮ ಕಾಂತಾರ ಸಿನಿಮಾದ ವಿಶೇಷ ಪ್ರದರ್ಶನ” ಎಂದು ಬರೆದುಕೊಂಡಿದ್ದಾರೆ ಜೊತೆಗೆ ಸಿನಿಮಾದ ವಿಶೇಷ ಪ್ರದರ್ಶನದ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ.

ನಿನ್ನೆ (ಮಾರ್ಚ್ 16) ರಂದು ರಿಷಬ್ ಶೆಟ್ಟಿಯವರು ಜಿನೆವಾನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ವಾರ್ಷಿಕ ಸಭೆಯ ಯಲ್ಲಿ ಭಾಗವಹಿಸಿದ್ದರು. ಭಾರತ ಇಕೋಫಾರ್ಮ್ ಪ್ರತಿನಿಧಿಯಾಗಿ ಸಭೆಯಲ್ಲಿ ಭಾಗವಹಿಸಿದ್ದ ರಿಷಬ್ ಶೆಟ್ಟಿ ಕನ್ನಡದಲ್ಲಿ ಭಾಷಣ ಮಾಡಿದ್ದು ವಿಶೇಷವಾಗಿತ್ತು. ಭಾರತದ ಇಕೋಫಾರ್ಮ್ ಪ್ರತಿನಿಧಿಯಾಗಿ ಸಭೆಯಲ್ಲಿ ಭಾಗವಹಿಸಿದ್ದ ರಿಷಬ್, ”ನಮಸ್ಕಾರ ನಾನು ರಿಷಬ್ ಶೆಟ್ಟಿ. ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತಲೂ ಹೆಚ್ಚು ಕಾಲದಿಂದ ತಳಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತದ ಇಕೋಫಾರ್ಮ್ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ಪರಿಸರ ಸ್ವಚ್ಛತೆ ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ, ನಿರ್ದೇಶಕನಾಗಿ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದು ನನ್ನ ಉದ್ದೇಶ” ಎಂದಿದ್ದರು. ರಿಷಬ್ ಶೆಟ್ಟಿ ವಿಶ್ವಸಂಸ್ಥೆಯ ಸಭೆಯಲ್ಲಿ ಭಾಗವಹಿಸಿದ ಬಗ್ಗೆ ನೆಟ್ಟಿಗರಿಂದ ಪ್ರಶಂಸೆ ವ್ಯಕ್ತವಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು