‘ನನ್ನ ಹೇಳಿಕೆ ತಿರುಚಲಾಗಿದೆ’; ಬಾಲಿವುಡ್ ಟೀಕೆ ಬಗ್ಗೆ ರಿಷಬ್ ಶೆಟ್ಟಿ ಸ್ಪಷ್ಟನೆ
ಬಾಲಿವುಡ್ನವರು ಸಿನಿಮಾ ಮಾಡುವುದಕ್ಕೂ ದಕ್ಷಿಣ ಭಾರತದವರು ಸಿನಿಮಾ ಮಾಡುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಇದನ್ನು ಎಲ್ಲರೂ ಒಪ್ಪಿಕೊಳ್ಳುತ್ತಾರೆ. ರಿಷಬ್ ಶೆಟ್ಟಿ ಅವರು ಈ ಬಗ್ಗೆ ಮಾತನಾಡಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈಗ ಇದಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ.
ನಟ ರಿಷಬ್ ಶೆಟ್ಟಿ ಅವರು ಇತ್ತೀಚೆಗೆ ನೀಡಿದ್ದ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ‘ಬಾಲಿವುಡ್ ಸಿನಿಮಾಗಳು ಅಂತಾರಾಷ್ಟ್ರೀಯ ಸಿನಿಮೋತ್ಸವಗಳಿಗೆ ಆಯ್ಕೆ ಆಗುತ್ತವೆ. ಆದರೆ, ಅಲ್ಲಿ ಭಾರತದವನ್ನು ಕೆಟ್ಟದಾಗಿ ತೋರಿಸಿವೆ’ ಎಂದು ಹೇಳಿದ್ದರು. ಈ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ಬಗ್ಗೆ ರಿಷಬ್ ಶೆಟ್ಟಿ ಅವರು ಈಗ ಸ್ಪಷ್ಟನೆ ಒಂದನ್ನು ನೀಡಿದ್ದಾರೆ.
ರಿಷಬ್ ಶೆಟ್ಟಿ ಹೇಳಿದ್ದು ಏನು?
ಮೆಟ್ರೋ ಸಾಗಾ ಯೂಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ರಿಷಬ್ ಶೆಟ್ಟಿ ಅವರು, ‘ಭಾರತೀಯ ಸಿನಿಮಾಗಳು ಅದರಲ್ಲೂ ವಿಶೇಷವಾಗಿ ಬಾಲಿವುಡ್ ಸಿನಿಮಾಗಳಲ್ಲಿ ಭಾರತವನ್ನು ಕೆಟ್ಟದಾಗಿ ತೋರಿಸಲಾಗಿದೆ. ಇದೇ ಸಿನಿಮಾ ಆರ್ಟ್ಸ್ ಎಂದುಕೊಂಡು ಹೊರದೇಶಗಳಿಗೆ ಹೋಗಿ ಅವಾರ್ಡ್ಗಳನ್ನು ಗೆದ್ದು ಬಂದಿದ್ದನ್ನು ನೋಡಿದ್ದೇನೆ. ನಮ್ಮ ದೇಶ ನಮ್ಮ ಹೆಮ್ಮೆ, ನನ್ನ ರಾಜ್ಯ ನನ್ನ ಹೆಮ್ಮೆ, ನನ್ನ ಭಾಷೆ ನನ್ನ ಹೆಮ್ಮೆ. ನಮ್ಮಲ್ಲಿರೋದನ್ನು ಪಾಸಿಟಿವ್ ನೋಟ್ನಲ್ಲಿ ತೋರಿಸಬಹುದಲ್ಲ’ ಎಂದಿದ್ದರು ರಿಷಬ್.
ಈಗ ಹೇಳಿದ್ದು ಏನು?
ಐಐಎಫ್ಎ 2024 ಕಾರ್ಯಕ್ರಮದಲ್ಲಿ ಭಾಗಿ ಆದ ರಿಷಬ್ಗೆ ಈ ಬಗ್ಗೆ ಕೇಳಲಾಗಿದೆ. ಅವರು ಇದಕ್ಕೆ ಉತ್ತರ ನೀಡಿದ್ದಾರೆ. ‘ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಶೀಘ್ರವೇ ನಾನು ಈ ಬಗ್ಗೆ ಸ್ಪಷ್ಟನೆ ಅಥವಾ ವಿವರಣೆ ನೀಡುವೆ’ ಎಂದಿದ್ದಾರೆ.
‘ಐಐಎಫ್ಎ ಅವಾರ್ಡ್ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿಗೆ ‘ಔಟ್ಸ್ಟ್ಯಾಂಡಿಂಗ್ ಎಕ್ಸಲೆನ್ಸ್ ಇನ್ ಕನ್ನಡ ಸಿನಿಮಾ’ ಅವಾರ್ಡ್ ನೀಡಿ ಗೌರವಿಸಲಾಗಿದೆ. ಅವರಿಗೆ ಇತ್ತೀಚೆಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ‘ಕಾಂತಾರ’ ಸಿನಿಮಾದ ನಟನೆಗ ಈ ಅವಾರ್ಡ್ ಕೊಟ್ಟು ಗೌರವಿಸಲಾಗಿದೆ.
ಇದನ್ನೂ ಓದಿ: ರಿಷಬ್ನ ತಮ್ಮ ಎಂದು ಕರೆದ ಸುದೀಪ್; ಕಿಚ್ಚನ ಮಾತಿಗೊಂದು ಅರ್ಥವಿದೆ..
ರಿಷಬ್ ಶೆಟ್ಟಿ ಅವರು ‘ಕಾಂತಾರ’ ಬಳಿಕ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಅವರು ಕದಂಬರ ಕಾಲದ ಕಥೆ ಹೇಳುತ್ತಿದ್ದಾರೆ. ಅವರು ಪಂಜುರ್ಲಿ ದೈವದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಮೊದಲ ಭಾಗ ಹಾಡುಗಳು ಸೂಪರ್ ಹಿಟ್ ಆಗಿವೆ. ಎರಡನೇ ಭಾಗದಲ್ಲೂ ಹಾಗೆಯೇ ಇರುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.