‘ರುದ್ರ ಗರುಡ ಪುರಾಣ’: ಖಡಕ್ ಪೊಲೀಸ್ ಅಧಿಕಾರಿಯಾದ ರಿಷಿ, ಶುಭಕೋರಿದ ನೀನಾಸಂ ಸತೀಶ್

Rishi: ನಟ ರಿಷಿ ನಟಿಸುತ್ತಿರುವ ರುದ್ರ ಗರುಡ ಪುರಾಣ ಹೆಸರಿನ ಸಿನಿಮಾ ಮುಹೂರ್ತ ನೆರವೇರಿದ್ದು ಸಿನಿಮಾದಲ್ಲಿ ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ರಿಷಿ ಕಾಣಿಸಿಕೊಳ್ಳುತ್ತಿದ್ದಾರೆ.

'ರುದ್ರ ಗರುಡ ಪುರಾಣ': ಖಡಕ್ ಪೊಲೀಸ್ ಅಧಿಕಾರಿಯಾದ ರಿಷಿ, ಶುಭಕೋರಿದ ನೀನಾಸಂ ಸತೀಶ್
ರಿಷಿ ಹೊಸ ಸಿನಿಮಾ
Follow us
ಮಂಜುನಾಥ ಸಿ.
|

Updated on: Jun 04, 2023 | 7:43 AM

“ಆಪರೇಶನ್ ಅಲಮೇಲ್ಲಮ್ಮ” (Opperation Alamelamma), “ಕವಲುದಾರಿ” (Kavaludari) ಮುಂತಾದ ಚಿತ್ರಗಳ ಮೂಲಕ ಗಮನ ಸೆಳೆದಿರುವ ನಟ ರಿಷಿ (Rishi) ಇದೀಗ ಖಡಕ್ ಪೊಲೀಸ್ ಅಧಿಕಾರಿಯಾಗಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಅವರ ನಟನೆಯ ಹೊಸ ಸಿನಿಮಾದ ಮುಹೂರ್ತ ಹಾಗೂ ಶೀರ್ಷಿಕೆ ಅನಾವರಣ ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ನಟ ನೀನಾಸಂ ಸತೀಶ್, ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು ಹಾಗೂ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. “ರುದ್ರ ಗರುಡ ಪುರಾಣ” ಎಂದು ಚಿತ್ರಕ್ಕೆ ಹೆಸರಿಡಲಾಗಿದ್ದು ಕೆ.ಎಸ್ ನಂದೀಶ್ ನಿರ್ದೇಶನ ಮಾಡಿದ್ದಾರೆ.

“ಚಂಬಲ್”, ” ಡಿಯರ್ ವಿಕ್ರಮ್” ಚಿತ್ರಗಳು ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಸ್ ನಂದೀಶ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಕಥೆ ಹಾಗೂ ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಸಂಭಾಷಣೆ ರಘು ನಿಡುವಳ್ಳಿ ಅವರದು. ಉದ್ಯಮಿ ಲೋಹಿತ್ ನಿರ್ಮಾಣ ಮಾಡುತ್ತಿದ್ದಾರೆ. ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕ ಕುಮಾರ್ ಅಭಿನಯಿಸುತ್ತಿದ್ದಾರೆ.

“ರುದ್ರ ಗರುಡ ಪುರಾಣ” ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಇಂದಿನಿಂದ ಚಿತ್ರೀಕರಣ ಆರಂಭವಾಗಲಿದೆ. ಸಿನಿಮಾ ಜನರ ಮೇಲೆ ಉತ್ತಮ ಪ್ರಭಾವ ಬೀರಬೇಕು. ಅಂತಹ ಸಿನಿಮಾವನ್ನು ಜನರಿಗೆ ಕೊಡುವ ಆಸೆ ನನಗೆ. 2022 UPSC ಪರೀಕ್ಷೆಯಲ್ಲಿ 265ನೇ ರ‍್ಯಾಂಕ್‌ ಪಡೆದಿರುವ ಮೈಸೂರು ಮೂಲದ ಕೆ‌.ಸೌರಭ್ ಅವರು ಸಂದರ್ಶನವೊಂದರಲ್ಲಿ ನನಗೆ ಪುನೀತ್ ರಾಜಕುಮಾರ್ ಅಭಿನಯದ “ಪೃಥ್ವಿ” ಚಿತ್ರ ಪ್ರೇರಣೆ ಎಂದಿದ್ದಾರೆ. “ಪೃಥ್ವಿ” ಚಿತ್ರ ಸೌರಭ್ ಅವರಿಗಷ್ಟೆ ಅಲ್ಲ. ಸಾಕಷ್ಟು ಜನರಿಗೆ ಸ್ಪೂರ್ತಿಯಾಗಿದೆ‌. ನಾನು ಆ ಚಿತ್ರದ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೆ.‌ ನಾವು ಮಾಡುವ ಚಿತ್ರ, ಈ ರೀತಿ ಜನರಿಗೆ ತಲುಪಿದಾಗ ಮುಂದೆ ಇಂತಹ ಹೆಚ್ಚುಹೆಚ್ಚು ಚಿತ್ರಗಳನ್ನು ಮಾಡುವ ಹುಮ್ಮಸ್ಸು ನಿರ್ದೇಶಕನಿಗೆ ಹೆಚ್ಚಾಗುತ್ತದೆ ಎಂದು ನಿರ್ದೇಶಕ ಕೆ.ಎಸ್ ನಂದೀಶ್ ತಿಳಿಸಿದರು.

ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಹಿಂದೆ “ಕವಲುದಾರಿ” ಚಿತ್ರದಲ್ಲೂ ಪೊಲೀಸ್ ಅಧಿಕಾರಿಯ ಪಾತ್ರ ಮಾಡಿದ್ದೆ. ಹಾಗಾಗಿ, ಅದೇ ಜಾನರ್ ನ ಇನ್ನೊಂದು ಚಿತ್ರ ಮಾಡುವುದಕ್ಕೆ ಇಷ್ಟವಿರಲಿಲ್ಲ. ಆದರೆ ನಂದೀಶ್ ಅವರು ಈ ಚಿತ್ರದ ಕಥೆ ಕೇಳಿದಾಗ ಬಹಳ ಇಷ್ಟವಾಯಿತು. ಎರಡೂ ಚಿತ್ರಗಳ ಮಧ್ಯೆ ಯಾವುದೇ ಹೋಲಿಕೆ ಇಲ್ಲ. ಇದರಲ್ಲಿ ನಾನು ಪೊಲೀಸ್ ಅಧಿಕಾರಿಯಾದರೂ ಬಹಳ ವಿಭಿನ್ನವಾಗಿದೆ. ಜೊತೆಗೆ ಕರ್ಮ, ಪಾಪ, ಪುಣ್ಯಕ್ಕೆ ಸಂಬಂಧಿಸಿದ ಗರುಡ ಪುರಾಣದ ಸಾಕಷ್ಟು ಅಂಶಗಳು ಈ ಚಿತ್ರದಲ್ಲಿದೆ. ಈ ಚಿತ್ರಕ್ಕೆ “ಗರುಡ ಪುರಾಣ” ಎಂದು ಹೆಸರಿಡಲು ನಿರ್ಧರಿಸಿದ್ದೆವು. ಚಿತ್ರದಲ್ಲಿ ನನ್ನ ಪಾತ್ರದ ಹೆಸರು ರುದ್ರ. ಹಾಗಾಗಿ “ರುದ್ರ ಗರುಡ ಪುರಾಣ” ಅಂತ ಶೀರ್ಷಿಕೆ ಇಡಲಾಗಿದೆ. ಚಿತ್ರಕ್ಕೆ ಚಾಲನೆ ನೀಡಿದ ನೀನಾಸಂ ಸತೀಶ್ ಅವರಿಗೆ ಧನ್ಯವಾದ ಎಂದರು ನಾಯಕ ರಿಷಿ. ನಾಯಕಿ ಪ್ರಿಯಾಂಕ ಕುಮಾರ್, ನಟರಾದ ಶಿವರಾಜ್ ಕೆ ಆರ್ ಪೇಟೆ, ಪವನ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ