AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಿ ನಟನೆಯ ಹೊಸ ಸಿನಿಮಾ ‘ಮಂಗಳಾಪುರಂ’; ಕುತೂಹಲ ಮೂಡಿಸಿದ ಫಸ್ಟ್ ಲುಕ್

ನಟ ರಿಷಿ ಅವರ ಹೊಸ ಸಿನಿಮಾ ಅನೌನ್ಸ್ ಆಗಿದೆ. ಈ ಸಿನಿಮಾಗೆ ‘ಮಂಗಳಾಪುರಂ’ ಎಂದು ಟೈಟಲ್ ಇಡಲಾಗಿದೆ. ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ವಿಶೇಷ ಏನೆಂದರೆ, ಈ ಸಿನಿಮಾದಲ್ಲಿ ರಿಷಿ ಜೊತೆ ಅಭಿಮನ್ಯು ಕಾಶಿನಾಥ್ ಕೂಡ ಅಭಿನಯಿಸುತ್ತಿದ್ದಾರೆ. ಜೂನ್​ನಲ್ಲಿ ಈ ಚಿತ್ರಕ್ಕೆ ಶೂಟಿಂಗ್ ಶುರುವಾಗಲಿದೆ.

ರಿಷಿ ನಟನೆಯ ಹೊಸ ಸಿನಿಮಾ ‘ಮಂಗಳಾಪುರಂ’; ಕುತೂಹಲ ಮೂಡಿಸಿದ ಫಸ್ಟ್ ಲುಕ್
Rishi
ಮದನ್​ ಕುಮಾರ್​
|

Updated on: Apr 21, 2025 | 4:14 PM

Share

‘ಆಪರೇಷನ್ ಅಲಮೇಲಮ್ಮ’, ‘ಕವಲುದಾರಿ’ ಮುಂತಾದ ಸಿನಿಮಾಗಳ ಮೂಲಕ ಹೆಸರು ಮಾಡಿದ ನಟ ರಿಷಿ (Rishi) ಅವರು ಪ್ರತಿ ಸಿನಿಮಾದಲ್ಲಿ ಬೇರೆ ಬೇರೆ ರೀತಿಯ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆ ಮೂಲಕ ಅವರು ಅಭಿಮಾನಿಗಳಿಗೆ ಮನರಂಜನೆ ನೀಡುತ್ತಾರೆ. ಸದ್ಯ ಅವರು ಒಂದಷ್ಟು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಕನ್ನಡ (Kannada Cinema) ಮಾತ್ರವಲ್ಲದೇ ಪರಭಾಷೆಯಲ್ಲಿ ಕೂಡ ರಿಷಿ ಅವರಿಗೆ ಬೇಡಿಕೆ ಇದೆ. ಈ ನಡುವೆ ಅವರು ಕನ್ನಡದಲ್ಲಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ಮಂಗಳಾಪುರಂ’ (Mangalapuram) ಎಂಬುದು ಈ ಸಿನಿಮಾದ ಶೀರ್ಷಿಕೆ. ಈಗ ಈ ಚಿತ್ರದ ಫಸ್ಟ್​ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

‘ಮಂಗಳಾಪುರಂ’ ಪೋಸ್ಟರ್ ನೋಡಿದ ಸಿನಿಪ್ರಿಯರಿಗೆ ಕುತೂಹಲ ಹೆಚ್ಚಾಗಿದೆ. ಈ ಸಿನಿಮಾಗಾಗಿ ರಿಷಿ ಅವರು ಮಂಗಳೂರು ಮೂಲದ ಹೊಸ ಟೀಮ್ ಜೊತೆ ಕೈ ಜೋಡಿಸಿದ್ದಾರೆ. ಈ ಮೊದಲು ತುಳು ಭಾಷೆಯಲ್ಲಿ ‘ಉಮಿಲ್’ ಮತ್ತು ‘ದೊಂಬರಾಟ’ ಸಿನಿಮಾಗಳಿಗೆ ಆ್ಯಕ್ಷನ್-ಕಟ್ ಹೇಳಿ ಯಶಸ್ಸು ಕಂಡಿರುವ ರಂಜಿತ್ ರಾವ್ ಸುವರ್ಣ ಅವರು ಈಗ ‘ಮಂಗಳಾಪುರಂ’ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ.

ಟೈಟಲ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ‘ಮಂಗಳಾಪುರಂ’ ಸಿನಿಮಾ ಹೈಪ್ ಸೃಷ್ಟಿ ಮಾಡಿದೆ. ಅಂದಹಾಗೆ, ಈ ಸಿನಿಮಾದಲ್ಲಿ ರಿಷಿ ಜೊತೆಗೆ ಕಾಶಿನಾಥ್ ಪುತ್ರ ಅಭಿಮನ್ಯು ಕಾಶಿನಾಥ್ ಕೂಡ ನಟಿಸುತ್ತಾರೆ ಎಂಬುದು ವಿಶೇಷ. ಇದೇ ಮೊದಲ ಬಾರಿಗೆ ಈ ನಟರಿಬ್ಬರು ಒಂದಾಗಿ ಸಿನಿಮಾ ಮಾಡುತ್ತಿದ್ದಾರೆ. ಆ ಕಾರಣದಿಂದಲೂ ಸಿನಿಪ್ರಿಯರಲ್ಲಿ ನಿರೀಕ್ಷೆ ಮೂಡಿದೆ.

ಇದನ್ನೂ ಓದಿ
Image
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
Image
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
Image
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
Image
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಈ ಸಿನಿಮಾದಲ್ಲಿ ಮರ್ಡರ್ ಮಿಸ್ಟರಿ ಕಹಾನಿ ಇರಲಿದೆ. ಅಷ್ಟೇ ಅಲ್ಲದೇ ನಂಬಿಕೆ-ಮೂಢನಂಬಿಕೆ, ಕೈವಾಡ-ಪವಾಡ ಮುಂತಾದ ವಿಷಯಗಳ ಕುರಿತು ಸಿನಿಮಾದಲ್ಲಿ ತೋರಿಸಲಾಗುತ್ತದೆ ಎಂದು ಚಿತ್ರತಂಡ ಹೇಳಿದೆ. ವಿದ್ವಾನ್ ಪ್ರಸನ್ನ ತಂತ್ರಿ ಮೂಡುಬಿದ್ರೆ ಮತ್ತು ರಾಮ್ ಪ್ರಸಾದ್ ಅವರು ‘ಮಂಗಳಾಪುರಂ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣದಲ್ಲಿ ಇದು ಅವರ ಚೊಚ್ಚಲ ಪ್ರಯತ್ನ.

ಇದನ್ನೂ ಓದಿ: ‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ ಬಳಿಕ ಯಶ್ ಮಾತು

ಫಸ್ಟ್ ಲುಕ್ ಮೂಲಕ ಗಮನ ಸೆಳೆದಿರುವ ‘ಮಂಗಳಪುರಂ’ ಸಿನಿಮಾಗೆ ಜೂನ್ ತಿಂಗಳಲ್ಲಿ ಶೂಟಿಂಗ್ ಆರಂಭ ಆಗಲಿದೆ. ತೀರ್ಥಹಳ್ಳಿ‌, ಕಾರ್ಕಳ, ಮಡಿಕೇರಿ, ಬೆಂಗಳೂರು ಮುಂತಾದ ಕಡೆಗಳಲ್ಲಿ ಚಿತ್ರೀಕರಣ ನಡೆಯಲಿದೆ. ಈ ಸಿನಿಮಾಗೆ ಅನೂಪ್ ಸಿಳೀನ್ ಅವರು ಸಂಗೀತ ನೀಡಲಿದ್ದಾರೆ. ಅಭಿಷೇಕ್ ಕಾಸರಗೋಡು ಅವರು ಛಾಯಾಗ್ರಹಣ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ