ರಿಷಿಯ ‘ರಾಮನ ಅವತಾರ’ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ

Rishi: ‘ಕವಲುದಾರಿ’ ರಿಷಿ ನಟನೆಯ ಕಾಮಿಡಿ ಥ್ರಿಲ್ಲರ್ ಜಾನರ್ ಸಿನಿಮಾ ‘ರಾಮನ ಅವತಾರ’ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಚುನಾವಣೆ ಫಲಿತಾಂಶಕ್ಕೆ ಮುನ್ನ ಸಿನಿಮಾ ಫಲಿತಾಂಶ ಗೊತ್ತಾಗಲಿದೆ.

ರಿಷಿಯ ‘ರಾಮನ ಅವತಾರ’ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ

Updated on: Mar 30, 2024 | 9:34 PM

ಕಾಮಿಡಿ ಸೇರಿದಂತೆ ಭಿನ್ನ-ಭಿನ್ನ ಜಾನರ್​ಗಳಿಗೆ ತಮ್ಮನ್ನು ತಾವು ಒಡ್ಡಿಕೊಂಡಿರುವ ನಟ ರಿಷಿ (Rishi) ಇದೀಗ ಮತ್ತೊಂದು ಕಾಮಿಡಿ ಥ್ರಿಲ್ಲರ್ ಜಾನರ್ ಸಿನಿಮಾ ಮೂಲಕ ಪ್ರೇಕ್ಷಕರೆದುರು ಬರಲು ಸಜ್ಜಾಗಿದ್ದಾರೆ. ‘ಕವಲುದಾರಿ’ಯಂತಹ ಗಂಭೀರ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿರುವ ರಿಷಿ ಇದೀಗ ‘ರಾಮನ ಅವತಾರ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದು ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ. ಜೊತೆಗೆ ಪ್ರಚಾರವನ್ನು ಸಹ ಪ್ರಾರಂಭ ಮಾಡಿದ್ದಾರೆ.

ಮೇ ತಿಂಗಳ 10ನೇ ತಾರೀಖು ‘ರಾಮನ ಅವತಾರ’ ಸಿನಿಮಾ ರಾಜ್ಯದಾದ್ಯಂತ ತೆರೆಗೆ ಬರಲಿದೆ. ಏಪ್ರಿಲ್ ತಿಂಗಳಲ್ಲಿ ಸಿನಿಮಾವನ್ನು ಬೆಳ್ಳಿಭೂಮಿ ಅಖಾಡಕ್ಕೆ ಇಳಿಸೋದಿಕ್ಕೆ ಚಿತ್ರತಂಡ ಪ್ಲಾನ್ ಹಾಕಿಕೊಂಡಿತ್ತು. ಆದ್ರೆ ಲೋಕಸಭಾ ಚುನಾವಣೆ ಹಿನ್ನೆಲೆ ಚಿತ್ರ ಬಿಡುಗಡೆ ತಡವಾಗಿದೆ. ಎಲೆಕ್ಷನ್ ಮುಗಿದ ತಕ್ಷಣ ‘ಮೇಬಿ ಅಲ್ಲ ಪಕ್ಕ ಮೇಗೆ ಬರ್ತಿವಿ’ ಎಂದು ನಟ ರಿಷಿ ಘೋಷಿಸಿದ್ದಾರೆ.

ರಿಷಿ ಸ್ಪೆಷಲ್ ವಿಡಿಯೋ ಮೂಲಕ ರಾಮನ ಅವತಾರ ಸಿನಿಮಾ ಬಿಡುಗಡೆ ದಿನಾಂಕವನ್ನು ರಿವೀಲ್ ಮಾಡಿದ್ದಾರೆ. ‘ಮೇಬಿ ಅಲ್ಲ ಪಕ್ಕ ಮೇ 10ಕ್ಕೆ ಬರ್ತೀವಿ’. ಎಲೆಕ್ಷನ್ ರಿಸಲ್ಟ್ ಗೂ ಮೊದ್ಲೇ ನಮ್ಮ ಸಿನಿಮಾ ರಿಸಲ್ಟ್ ಬರಲಿದೆ ಎಂದಿದ್ದಾರೆ. ಪ್ರಮೋಷನ್ ಅಖಾಡಕ್ಕೆ ಇಳಿಯೋದಿಕ್ಕೆ ಇಡೀ ತಂಡ ಸಿದ್ಧವಾಗಿದ್ದು, ರಾಮರಾಜ್ಯ ಕಟ್ಟೋದಿಕ್ಕೆ ರಾಮನ ಅವತಾರ ಬಳಗ ಸಜ್ಜಾಗಿ ನಿಂತಿದೆ.

ಇದನ್ನೂ ಓದಿ:ಕನ್ನಡ ಚಿತ್ರರಂಗದಲ್ಲಿ ಲೇಡಿ ಡೈರೆಕ್ಟರ್ಸ್ ಕಡಿಮೆ ಏಕೆ? ಉತ್ತರಿಸಿದ ನಿರ್ದೇಶಕಿ ರಿಷಿಕಾ ಶರ್ಮಾ

‘ರಾಮನ ಅವತಾರ’ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದು, ಅರುಣ್ ಸಾಗರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ವಿಕಾಸ್ ಪಂಪಾಪತಿ ‘ರಾಮನ ಅವತಾರ’ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಚಿತ್ರದ ಮೂಲಕ ವಿಕಾಸ್ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಟೀಸರ್ ಹಾಗೂ ಹಾಡುಗಳ ಮೂಲಕ ರಾಮನ ಅವತಾರ ಸಿನಿಮಾ ನಿರೀಕ್ಷೆ ಹೆಚ್ಚಿಸಿದೆ.

ಸ್ಟಾರ್ ಫ್ಯಾಬ್ ಪ್ರೊಡಕ್ಷನ್ನಡಿ ‘ಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಲಕನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us