Ramana Avatara: ಮೇ 10ಕ್ಕೆ ಬರಲಿದೆ ‘ರಾಮನ ಅವತಾರ’; ರಿಷಿ ಹೊಸ ಗೆಟಪ್

|

Updated on: Apr 22, 2024 | 10:53 AM

‘ರಾಮನ ಅವತಾರ’ ಸಿನಿಮಾಗೆ ವಿಕಾಸ್ ಪಂಪಾಪತಿ ನಿರ್ದೇಶನ ಮಾಡಿದ್ದಾರೆ. ನಿರ್ದೇಶನದಲ್ಲಿ ಇದು ಅವರ ಮೊದಲ ಅನುಭವ. ಅಂದುಕೊಂಡಂತೆ ಈ ಸಿನಿಮಾ ಮೇ 10ರಂದೇ ರಿಲೀಸ್ ಆಗಲಿದೆ. ಈ ವಿಚಾರ ಕೇಳಿ ಸಿನಿಪ್ರಿಯರು ಖುಷಿಪಟ್ಟಿದ್ದಾರೆ. ಪಕ್ಕಾ ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಈ ಸಿನಿಮಾದಲ್ಲಿ ಸಾಕಷ್ಟು ಹಾಸ್ಯ ಇದೆ.

Ramana Avatara: ಮೇ 10ಕ್ಕೆ ಬರಲಿದೆ ‘ರಾಮನ ಅವತಾರ’; ರಿಷಿ ಹೊಸ ಗೆಟಪ್
ರಿಷಿ
Follow us on

ಲೋಕಸಭೆ ಚುನಾವಣೆಯ ಕಾವು ಜೋರಾಗಿದೆ. ರಾಷ್ಟ್ರಾದ್ಯಂತ ಹಂತ ಹಂತವಾಗಿ ಮತದಾನ ನಡೆಯುತ್ತಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7ರಂದು ಮತದಾನ ನಡೆಯಲಿದೆ. ಈ ಕಾರಣಕ್ಕೆ ಅನೇಕ ಸಿನಿಮಾಗಳ ರಿಲೀಸ್ ದಿನಾಂಕ ಮುಂದಕ್ಕೆ ಹೊಗಿದೆ. ಆದರೆ, ರಿಷಿ ನಟನೆಯ ‘ರಾಮನ ಅವತಾರ’ ಸಿನಿಮಾ (Ramana Avatara Movie) ಮೇ 10ರಂದು ಬಿಡುಗಡೆ ಆಗಲಿದೆ. ರಿಷಿ ಜೊತೆ ಪ್ರಣೀತಾ ಸುಭಾಷ್, ಶುಭ್ರ ಅಯ್ಯಪ್ಪ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.

‘ರಾಮನ ಅವತಾರ’ ಸಿನಿಮಾಗೆ ವಿಕಾಸ್ ಪಂಪಾಪತಿ ನಿರ್ದೇಶನ ಮಾಡಿದ್ದಾರೆ. ನಿರ್ದೇಶನದಲ್ಲಿ ಇದು ಅವರ ಮೊದಲ ಅನುಭವ. ಅಂದುಕೊಂಡಂತೆ ಈ ಸಿನಿಮಾ ಮೇ 10ರಂದೇ ರಿಲೀಸ್ ಆಗಲಿದೆ. ಈ ವಿಚಾರ ಕೇಳಿ ಸಿನಿಪ್ರಿಯರು ಖುಷಿಪಟ್ಟಿದ್ದಾರೆ. ಪಕ್ಕಾ ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ‘ರಾಮನ ಅವತಾರ’ ಚಿತ್ರದಲ್ಲಿ ಅರುಣ್ ಸಾಗರ್ ಪ್ರಮುಖ ಪಾತ್ರ ಮಾಡಿದ್ದಾರೆ.

ಟೀಸರ್ ಹಾಗೂ ಹಾಡುಗಳ ಮೂಲಕ ರಾಮನ ಅವತಾರ ಸಿನಿಮಾ ಸಿನಿಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ. ‘ಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಅವರು ‘ಸ್ಟಾರ್ ಫ್ಯಾಬ್ ಪ್ರೊಡಕ್ಷನ್’​ ಅಡಿಯಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್‌ ಅಡಿಯಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ.

ಇದನ್ನೂ ಓದಿ: ರಿಷಿಯ ‘ರಾಮನ ಅವತಾರ’ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ

ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶಪಾಂಡೇ ಛಾಯಾಗ್ರಾಹಣ ಮಾಡಿದ್ದಾರೆ. ಜೂಡಾ ಸ್ಯಾಂಡಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಅಮರನಾಥ್ ಸಂಕಲನ ಚಿತ್ರಕ್ಕಿದೆ. ರಾಮನ ಅವತಾರ ಚಿತ್ರದ ಶೂಟಿಂಗ್​ನ ಉಡುಪಿ, ಬೆಂಗಳೂರು ಸುತ್ತಮುತ್ತ ಮಾಡಲಾಗಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ರಿಷಿ ಅವರು ಭಿನ್ನ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ಅವರು ವೆಬ್​ ಸೀರಿಸ್ ಕೂಡ ಮಾಡಿದ್ದಾರೆ. ಈಗ ‘ರಾಮನ ಅವತಾರ’ ಸಿನಿಮಾ ಮೂಲಕ ಗಮನ ಸೆಳೆಯಲು ಅವರು ರೆಡಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.