AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿತನ್ಯ ವಿಜಯ್ ಹುಟ್ಟುಹಬ್ಬಕ್ಕೆ ಬಿಡುಗಡೆ ಆಯ್ತು ‘ಲ್ಯಾಂಡ್ ಲಾರ್ಡ್’ ಪೋಸ್ಟರ್

Duniya Vijay daughter: ದುನಿಯಾ ವಿಜಯ್ ಪುತ್ರಿ ರಿತನ್ಯ ವಿಜಯ್ ಹುಟ್ಟುಹಬ್ಬ ಇಂದು (ಆಗಸ್ಟ್ 30). ಅಪ್ಪನ ಹಾದಿಯಲ್ಲೇ ಸಾಗುತ್ತಿರುವ ರಿತನ್ಯ ಚಿತ್ರರಂಗಕ್ಕೆ ನಟಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಇಂದು ಅವರ ಹುಟ್ಟುಹಬ್ಬದ ಪ್ರಯುಕ್ತ, ತಂದೆ ದುನಿಯಾ ವಿಜಯ್ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಪೋಸ್ಟರ್​​ನಲ್ಲಿ ರಿತನ್ಯ ಭಿನ್ನ ಲುಕ್​​ನಲ್ಲಿ ಕಾಣಿಸಿಕೊಂಡಿದ್ದಾರೆ.

ರಿತನ್ಯ ವಿಜಯ್ ಹುಟ್ಟುಹಬ್ಬಕ್ಕೆ ಬಿಡುಗಡೆ ಆಯ್ತು ‘ಲ್ಯಾಂಡ್ ಲಾರ್ಡ್’ ಪೋಸ್ಟರ್
Rithya Vijay
ಮಂಜುನಾಥ ಸಿ.
|

Updated on: Aug 30, 2025 | 9:09 PM

Share

ದುನಿಯಾ ವಿಜಯ್ (Duniya Vijay) ಪುತ್ರಿ ರಿತನ್ಯ ವಿಜಯ್ ಹುಟ್ಟುಹಬ್ಬ ಇಂದು (ಆಗಸ್ಟ್ 30). ಅಪ್ಪನ ಹಾದಿಯಲ್ಲೇ ಸಾಗುತ್ತಿರುವ ರಿತನ್ಯ ಚಿತ್ರರಂಗಕ್ಕೆ ನಟಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಇಂದು ಅವರ ಹುಟ್ಟುಹಬ್ಬದ ಪ್ರಯುಕ್ತ, ತಂದೆ ದುನಿಯಾ ವಿಜಯ್ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಪೋಸ್ಟರ್​​ನಲ್ಲಿ ರಿತನ್ಯ ಭಿನ್ನ ಲುಕ್​​ನಲ್ಲಿ ಕಾಣಿಸಿಕೊಂಡಿದ್ದಾರೆ. . ದರ್ಶನ್, ನಾಯಕರಾಗಿ ನಟಿಸಿದ್ದ ಸೂಪರ್ ಹಿಟ್ “ಸಾರಥಿ” ಸಿನಿಮಾ ನಿರ್ಮಾಣ ಮಾಡಿದ್ದ ಕೆ‌.ವಿ.ಸತ್ಯಪ್ರಕಾಶ್ ಹಾಗೂ ಹೇಮಂತ್ ಗೌಡ.ಕೆ.ಎಸ್ ಅವರು “ಸಾರಥಿ ಫಿಲಂಸ್” ಮೂಲಕ ‘ಲ್ಯಾಂಡ್ ಲಾರ್ಡ್’ ಸಿನಿಮಾದ ನಿರ್ಮಾಣ ಮಾಡಿದ್ದಾರೆ. ಈ ಹಿಂದೆ ‘ಗುರುಶಿಷ್ಯರು’ ಸಿನಿಮಾ ನಿರ್ದೇಶಿಸಿರುವ ನಿರ್ದೇಶಕ ಕತೆಗಾರ ಜಡೇಶ ಅವರು ‘ಲ್ಯಾಂಡ್ ಲಾರ್ಡ್’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ದರ್ಶನ್ ನಟನೆಯ ಸೂಪರ್ ಹಿಟ್ ಸಿನಿಮಾ ‘ಕಾಟೇರ’ಕ್ಕೆ ಜಡೇಶ ಅವರೇ ಕತೆ ಬರೆದಿದ್ದರು. ಇದೀಗ ಹಳ್ಳಿಯಲ್ಲಿ ನಡೆಯುವ ಕತೆಯೊಂದನ್ನು ಇಟ್ಟುಕೊಂಡು ‘ಲ್ಯಾಂಡ್ ಲಾರ್ಡ್’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ.

ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ಈ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ‘ಲ್ಯಾಂಡ್ ಲಾರ್ಡ್’ ಚಿತ್ರದಲ್ಲಿ ದುನಿಯಾ ವಿಜಯ್ ಪುತ್ರಿ ರಿತನ್ಯಾ ವಿಜಯ್ ಸಹ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ. “ಲ್ಯಾಂಡ್ ಲಾರ್ಡ್” ಸಿನಿಮಾದಲ್ಲಿನ ರಿತನ್ಯಾ ಅವರ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ರಿತನ್ಯಾ ವಿಜಯ್ ಅವರು ಭಾಗ್ಯ ಎನ್ನುವ ಪಾತ್ರದಲ್ಲಿ ನಟಿಸಿದ್ದಾರೆ. ‘ಲ್ಯಾಂಡ್ ಲಾರ್ಡ್’ ಚಿತ್ರದ ರಿತನ್ಯ ವಿಜಯ್ ಅವರ ಫಸ್ಟ್ ಲುಕ್ ಪೋಸ್ಟರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ ಹಾಗೂ ಕುತೂಹಲ ಮೂಡಿಸಿದೆ‌.

ಇದನ್ನೂ ಓದಿ:ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು

ರಿತನ್ಯ ಪೊಲೀಸ್ ಕಾನ್​ಸ್ಟೇಬಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪೊಲೀಸ್ ಸಮವಸ್ತ್ರ ಧರಿಸಿರುವ ರಿತನ್ಯ ಕೈತುಂಬ ಬಳೆ ಮತ್ತು ಹಣೆ ಮೇಲೆ ಢಾಳಾಗಿ ಕುಂಕುಮ ಇಟ್ಟಿರುವ ಪೋಸ್ಟರ್ ಇದೀಗ ಬಿಡುಗಡೆ ಆಗಿದೆ. ಈ ಸಿನಿಮಾಕ್ಕೆ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಸ್ವಾಮಿ ಜೆ ಗೌಡ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನವಿರುವ “ಲ್ಯಾಂಡ್ ಲಾರ್ಡ್” ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ವರ್ಷದ ಕೊನೆಗೆ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್