Vikrant Rona: ಕಿಚ್ಚನ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್​ ಸ್ಟಾರ್​ ನಟ ರಿತೇಶ್​ ದೇಶಮುಖ್​

Ra Ra Rakkamma | Riteish Deshmukh: ಕಿಚ್ಚ ಸುದೀಪ್​ ಮತ್ತು ರಿತೇಶ್​ ದೇಶಮುಖ್​ ಅವರ ಗೆಳೆತನ ಹಲವು ವರ್ಷಗಳದ್ದು. ಆ ಕಾರಣದಿಂದ ತಮ್ಮ ಗೆಳೆಯನ ಸಿನಿಮಾಗೆ ರಿತೇಶ್​ ಅವರು ಸಪೋರ್ಟ್​ ಮಾಡಿದ್ದಾರೆ.

Vikrant Rona: ಕಿಚ್ಚನ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್​ ಸ್ಟಾರ್​ ನಟ ರಿತೇಶ್​ ದೇಶಮುಖ್​
ರಿತೇಶ್ ದೇಶಮುಖ್, ಕಿಚ್ಚ ಸುದೀಪ್
Follow us
TV9 Web
| Updated By: shivaprasad.hs

Updated on:Jun 08, 2022 | 10:11 AM

ಕನ್ನಡದ ಸಿನಿಮಾಗಳು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿವೆ. ಸ್ಯಾಂಡಲ್​ವುಡ್​ನಿಂದ ಬ್ಯಾಕ್​ ಟು ಬ್ಯಾಕ್​ ಒಳ್ಳೊಳ್ಳೆಯ ಚಿತ್ರಗಳು ರಿಲೀಸ್​ ಆಗುತ್ತಿವೆ. ಕಿಚ್ಚ ಸುದೀಪ್ (Kichcha Sudeep)​ ನಟನೆಯ ‘ವಿಕ್ರಾಂತ್​ ರೋಣ’ ಬಗ್ಗೆ ಈಗಾಗಲೇ ದೊಡ್ಡ ಮಟ್ಟದ ಹೈಪ್​ ಸೃಷ್ಟಿ ಆಗಿದೆ. ಆ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸುವ ರೀತಿಯಲ್ಲಿ ‘ರಾ ರಾ ರಕ್ಕಮ್ಮ’ ಹಾಡು ಮೂಡಿಬಂದಿದೆ. ಈ ಹಾಡಿಗೆ ಅನೇಕ ಸೆಲೆಬ್ರಿಟಿಗಳು ರೀಲ್ಸ್​ ಮಾಡಿದ್ದಾರೆ. ಆ ಕಾರಣದಿಂದಲೂ ಈ ಗೀತೆ ತುಂಬ ಫೇಮಸ್​ ಆಗಿದೆ. ಈಗ ಬಾಲಿವುಡ್​ನ ಖ್ಯಾತ ನಟ ರಿತೇಶ್​ ದೇಶಮುಖ್​ (Riteish Deshmukh) ಅವರು ಕೂಡ ‘ರಾ ರಾ ರಕ್ಕಮ್ಮ’ ಹಾಡಿಗೆ ಮರುಳಾಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಈ ಸಾಂಗ್​ಗೆ ಅವರು ರೀಲ್ಸ್​ ಮಾಡುವ ಮೂಲಕ ‘ವಿಕ್ರಾಂತ್​ ರೋಣ’ (Vikrant Rona) ಚಿತ್ರಕ್ಕೆ ತಮ್ಮ ಬೆಂಬಲ ನೀಡಿದ್ದಾರೆ. ರಿತೇಶ್​ ದೇಶಮುಖ್​ ಅವರ ಬೆಂಬಲ ನೋಡಿ ಕನ್ನಡಿಗರು ಫಿದಾ ಆಗಿದ್ದಾರೆ. ಸದ್ಯ ಈ ವಿಡಿಯೋ ವೈರಲ್​ ಆಗಿದೆ. 10 ಲಕ್ಷಕ್ಕೂ ಅಧಿಕ ಬಾರಿ ಇದು ವೀಕ್ಷಣೆ ಕಂಡಿದೆ.

ಕಿಚ್ಚ ಸುದೀಪ್​ ಅವರು ಕನ್ನಡದಲ್ಲಿ ಮಾತ್ರವಲ್ಲದೇ ಬೇರೆ ಬೇರೆ ಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಹಾಗಾಗಿ ಅವರಿಗೆ ಎಲ್ಲ ಚಿತ್ರರಂಗದಲ್ಲೂ ಸ್ನೇಹಿತರಿದ್ದಾರೆ. ಇನ್ನು, ಸಿಸಿಎಲ್​ ಕ್ರಿಕೆಟ್​ ಟೂರ್ನಿಯ ಮೂಲಕವೂ ಅವರು ಪರಭಾಷೆ ಸೆಲೆಬ್ರಿಟಿಗಳ ಸ್ನೇಹ ಸಂಪಾದಿಸಿದ್ದಾರೆ. ಸುದೀಪ್​ ಮತ್ತು ರಿತೇಶ್​ ದೇಶಮುಖ್​ ಅವರ ಗೆಳೆತನ ಹಲವು ವರ್ಷಗಳದ್ದು. ಆ ಕಾರಣದಿಂದ ತಮ್ಮ ಗೆಳೆಯನ ಸಿನಿಮಾಗೆ ರಿತೇಶ್​ ಅವರು ಸಪೋರ್ಟ್​ ಮಾಡಿದ್ದಾರೆ.

ರಿತೇಶ್ ದೇಶಮುಖ್ ‘ರಕ್ಕಮ್ಮ’ ಹಾಡಿಗೆ ನೃತ್ಯ ಮಾಡಿರುವ ವಿಡಿಯೋ ಇಲ್ಲಿದೆ:

ಇದನ್ನೂ ಓದಿ
Image
ಕಿಚ್ಚನಿಗೆ ಸಲ್ಲು ಸಾಥ್​; ಹಿಂದಿಯಲ್ಲಿ ‘ವಿಕ್ರಾಂತ್​ ರೋಣ’ ರಿಲೀಸ್ ಮಾಡುವ ಜವಾಬ್ದಾರಿ ಹೊತ್ತ ಸಲ್ಮಾನ್ ಖಾನ್
Image
Vikrant Rona: ಬಿಡುಗಡೆಗೂ ಮುನ್ನ ವಿದೇಶದಲ್ಲಿ 10 ಕೋಟಿ ರೂ. ಬಿಸ್ನೆಸ್​ ಮಾಡಿದ ‘ವಿಕ್ರಾಂತ್​ ರೋಣ’: ಸುದೀಪ್​ ಫ್ಯಾನ್ಸ್​ ಖುಷ್​
Image
ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಸಾಥ್​​ ನೀಡಿದ ಪರಭಾಷೆಯ ಸ್ಟಾರ್​ ನಟರು
Image
Kichcha Sudeep: ‘ವಿಕ್ರಾಂತ್​ ರೋಣ’ ನೃತ್ಯ ನಿರ್ದೇಶಕನಿ​ಗೆ ಥಾರ್​ ಗಿಫ್ಟ್ ನೀಡಿದ ‘ಕಿಚ್ಚ’ ಸುದೀಪ್​

ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ನಟನೆಯ ಹಾಡು:

ಹಿಂದಿ ಪ್ರೇಕ್ಷಕರನ್ನು ‘ವಿಕ್ರಾಂತ್​ ರೋಣ’ ಸಿನಿಮಾ ವಿಶೇಷವಾಗಿ ಆಕರ್ಷಿಸಲಿದೆ. ಯಾಕೆಂದರೆ ಈ ಸಿನಿಮಾದಲ್ಲಿ ಖ್ಯಾತ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅಭಿನಯಿಸಿದ್ದಾರೆ. ರಕ್ಕಮ್ಮ ಎಂಬ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ‘ರಾ ರಾ ರಕ್ಕಮ್ಮ..’ ಹಾಡಿನಲ್ಲಿ ಅವರು ಸುದೀಪ್ ಜೊತೆ ಹೆಜ್ಜೆ ಹಾಕಿದ್ದಾರೆ.

ಇದನ್ನೂ ಓದಿ: ‘ಮತ್ತೊಂದು ದೊಡ್ಡ ಚಿತ್ರ ಬರ್ತಿದೆ’: ‘ವಿಕ್ರಾಂತ್​ ರೋಣ’ ಬಗ್ಗೆ ಪರಭಾಷೆ ಮಂದಿಗೆ ಮೊದಲೇ ಎಚ್ಚರಿಕೆ ನೀಡಿದ ಆರ್​ಜಿವಿ

ಜು.28ಕ್ಕೆ ‘ವಿಕ್ರಾಂತ್​ ರೋಣ’ ರಿಲೀಸ್​:

ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಇಂಗ್ಲಿಷ್​ ಅವತರಣಿಕೆಯಲ್ಲಿ ‘ವಿಕ್ರಾಂತ್​ ರೋಣ’ ಮೂಡಿಬಂದಿದೆ. ಜು.28ರಂದು 3ಡಿ ವರ್ಷನ್​ನಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಈಗಾಗಲೇ ಚಿತ್ರಕ್ಕೆ ಭರ್ಜರಿ ಡಿಮ್ಯಾಂಡ್​ ಸೃಷ್ಟಿ ಆಗಿದ್ದು, ವಿದೇಶದಲ್ಲಿ 10 ಕೋಟಿ ರೂಪಾಯಿಗೆ ವಿತರಣೆ ಹಕ್ಕುಗಳು ಮಾರಾಟ ಆಗಿವೆ ಎಂಬುದು ವಿಶೇಷ. ಅನೂಪ್​ ಭಂಡಾರಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:47 am, Wed, 8 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ