Darshan: ‘ರಾಬರ್ಟ್​’ ಬಿಡುಗಡೆಗೂ ಮುನ್ನ ಮತ್ತೊಂದು ಮುಖ್ಯ ವಿಚಾರದ ಬಗ್ಗೆ ‘ಚಾಲೆಂಜಿಂಗ್​ ಸ್ಟಾರ್’​ ದರ್ಶನ್​ ಪ್ರಸ್ತಾಪ!

ನಟ ದರ್ಶನ್​ ಅವರ ಗಮನವೆಲ್ಲ ಈಗ 'ರಾಬರ್ಟ್​' ಸಿನಿಮಾ ಬಿಡುಗಡೆಯ ಕಡೆಗೆ ಇದೆ. ಅದರ ನಡುವೆಯೂ ಅವರು ಪರಿಸರ ಕಾಳಜಿ ವ್ಯಕ್ತಪಡಿಸಿದ್ದಾರೆ. ಅದನ್ನು ಕಂಡು ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಿದ್ದಾರೆ.

Darshan: 'ರಾಬರ್ಟ್​' ಬಿಡುಗಡೆಗೂ ಮುನ್ನ ಮತ್ತೊಂದು ಮುಖ್ಯ ವಿಚಾರದ ಬಗ್ಗೆ 'ಚಾಲೆಂಜಿಂಗ್​ ಸ್ಟಾರ್'​ ದರ್ಶನ್​ ಪ್ರಸ್ತಾಪ!
ರಾಬರ್ಟ್​ ಸಿನಿಮಾದಲ್ಲಿ ದರ್ಶನ್​
Follow us
|

Updated on: Mar 03, 2021 | 4:55 PM

‘ಡಿ ಬಾಸ್​’ ದರ್ಶನ್​ಗೆ ಸಿನಿಮಾ ಮಾತ್ರವಲ್ಲದೆ ಇತರೆ ಕ್ಷೇತ್ರಗಳಲ್ಲೂ ಆಸಕ್ತಿ ಹೆಚ್ಚು. ಕೃಷಿ, ಹೈನುಗಾರಿಕೆ, ಫೋಟೋಗ್ರಫಿ, ಕಾರುಗಳ ಕ್ರೇಜ್​ ಜೊತೆಗೆ ವನ್ಯಜೀವಿ ಸಂರಕ್ಷಣೆ ಬಗ್ಗೆಯೂ ಅವರಿಗೆ ಅಪಾರ ಆಸಕ್ತಿ ಇದೆ. ಈ ಬಗ್ಗೆ ಅನೇಕ ಬಾರಿ ಅವರು ಮಾತನಾಡಿದ್ದುಂಟು. ಈಗ ಮತ್ತೊಮ್ಮೆ ಕಾಡುಪ್ರಾಣಿಗಳ ರಕ್ಷಣೆ ಕುರಿತು ದರ್ಶನ್​ ಅವರು ತಮ್ಮ ಸೋಶಿಯಲ್​ ಮೀಡಿಯಾ ಮೂಲಕ ಮುಖ್ಯವಾದ ಸಂದೇಶ ರವಾನಿಸಿದ್ದಾರೆ.

‘ಎಲ್ಲರೂ ವನ್ಯಜೀವಿಗಳನ್ನು ಉಳಿಸೋಣ. ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ. ನಿಮಗೆ ಕಾಳಜಿಯನ್ನು ತೋರಿಸುತ್ತದೆ, ಅಪರಿಚಿತರಾಗಬೇಡಿ! ಪ್ರಾಣಿಗಳನ್ನು ಉಳಿಸಿ ಏಕೆಂದರೆ ಅವು ಈ ಪ್ರಪಂಚದ ಒಂದು ಭಾಗವಾಗಿದೆ! ವನ್ಯಜೀವಿಗಳಿಗಾಗಿ ನಿಲ್ಲುವ ಸಮಯ. ನಿಮ್ಮ ದಾಸ ದರ್ಶನ್’ ಎಂದು ಅವರು ಟ್ವೀಟ್​ ಮಾಡಿದ್ದಾರೆ. ಜೊತೆಗೆ ಹುಲಿ, ಚಿರತೆ, ಆನೆಯ ಆಕರ್ಷಕ ಫೋಟೋಗಳನ್ನು ಕೂಡ ಅವರು ಶೇರ್​ ಮಾಡಿಕೊಂಡಿದ್ದಾರೆ.

ದರ್ಶನ್​ ಅವರು ಈ ವಿಚಾರದ ಬಗ್ಗೆ ಈಗ ಪ್ರಸ್ತಾಪ ಮಾಡಲು ಕಾರಣ ಇದೆ. ಮಾ.3ರಂದು ‘ವಿಶ್ವ ವನ್ಯಜೀವಿ ದಿನ’. ಆ ಪ್ರಯುಕ್ತ ವಿಶ್ವಾದ್ಯಂತ ವನ್ಯಜೀವಿಗಳ ಸಂರಕ್ಷಣೆ ಕುರಿತಂತೆ ಜಾಗೃತಿ ಮೂಡಿಸುವ ಕೆಲಸ ಆಗುತ್ತಿದೆ. ಅದರಲ್ಲಿ ದರ್ಶನ್​ ಕೂಡ ಕೈ ಜೋಡಿಸಿದ್ದು, ವನ್ಯಜೀವಿಗಳ ರಕ್ಷಣೆಯ ಮಹತ್ವವನ್ನು ಎಲ್ಲರಿಗೂ ತಿಳಿಸಿಹೇಳುವ ಪ್ರಯತ್ನವನ್ನು ಅವರು ಮಾಡಿದ್ದಾರೆ. ತಮ್ಮ ಈ ಪರಿಸರ ಕಾಳಜಿಯ ಸಲುವಾಗಿಯೇ ಅವರು ಈಗಾಗಲೇ ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆಯ ರಾಯಭಾರಿಯಾಗಿಯೂ ಕೆಲಸ ಮಾಡುತ್ತಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ, ಶಿವರಾತ್ರಿ ಹಬ್ಬದ ಪ್ರಯುಕ್ತ ಮಾ.11ರಂದು ‘ರಾಬರ್ಟ್​’ ಚಿತ್ರ ಅದ್ದೂರಿಯಾಗಿ ತೆರೆ ಕಾಣಲು ಸಜ್ಜಾಗಿದೆ. ಕನ್ನಡದ ಜೊತೆಗೆ ತೆಲುಗಿನಲ್ಲಿಯೂ ಈ ಚಿತ್ರ ಬಿಡುಗಡೆ ಆಗಲಿದೆ. ದರ್ಶನ್​ಗೆ ಜೋಡಿಯಾಗಿ ಹೊಸ ನಟಿ ಆಶಾ ಭಟ್​ ಅಭಿನಯಿಸಿದ್ದಾರೆ. ತರುಣ್​ ಸುಧೀರ್​ ನಿರ್ದೇಶನ ಮಾಡಿದ್ದಾರೆ. ಈ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ರವಿಶಂಕರ್​, ಜಗಪತಿ ಬಾಬು, ರವಿಕಿಶನ್​, ದೇವರಾಜ್​ ಮುಂತಾದ ಘಟಾನುಘಟಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: D Boss Darshan: ಜಮೀರ್​ ಅಹ್ಮದ್​ ಖಾನ್​ ಭವ್ಯ ಬಂಗಲೆಗೆ ಭೇಟಿ ನೀಡಿದ ಡಿ ಬಾಸ್​​ ದರ್ಶನ್​

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ