AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roberrt Movie: ನಾಲ್ಕು ದಿನ ಮೊದಲೇ ಸೋಲ್ಡ್​ ಔಟ್​ ಆದ ‘ರಾಬರ್ಟ್’​ ಟಿಕೆಟ್​; ಇದು ದರ್ಶನ್​ ಹವಾ!

Roberrt Online Ticket Booking: ಬೆಂಗಳೂರಿನ ವಿದ್ಯಾಪೀಠದಲ್ಲಿರುವ ಚಂದ್ರೋದಯ ಸೇರಿ ಸಾಕಷ್ಟು ಚಿತ್ರಮಂದಿರಗಳಲ್ಲಿ ಮುಂಜಾನೆ 6 ಗಂಟೆಗೆ ರಾಬರ್ಟ್​ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಇವುಗಳಲ್ಲಿ ಕೆಲವು ಈಗಾಗಲೇ ಸೋಲ್ಡ್​ಔಟ್​ ಆಗಿದ್ದು, ಇನ್ನೂ ಕೆಲವೇ ಗಂಟೆಗಳಲ್ಲಿ ಹೌಸ್​ಫುಲ್​ ಆಗುವ ಸಾಧ್ಯತೆ ಇದೆ.

Roberrt Movie: ನಾಲ್ಕು ದಿನ ಮೊದಲೇ ಸೋಲ್ಡ್​ ಔಟ್​ ಆದ 'ರಾಬರ್ಟ್'​ ಟಿಕೆಟ್​; ಇದು ದರ್ಶನ್​ ಹವಾ!
ರಾಬರ್ಟ್​ ಸಿನಿಮಾದಲ್ಲಿ ದರ್ಶನ್​
ರಾಜೇಶ್ ದುಗ್ಗುಮನೆ
|

Updated on: Mar 08, 2021 | 7:22 PM

Share

ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ರಿಲೀಸ್​ಗೆ ಸಿದ್ಧವಾಗಿದೆ. ಇದೇ ಗುರುವಾರದಿಂದ (ಮಾ.11) ರಾಜ್ಯಾದ್ಯಂತ ದರ್ಶನ್​ ಹವಾ ಆರಂಭವಾಗಲಿದೆ. ಟಾಲಿವುಡ್​ನಲ್ಲೂ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಬಾಕ್ಸ್​ ಆಫೀಸ್​ ಕಲೆಕ್ಷನ್​ ಹೆಚ್ಚುವ ನಿರೀಕ್ಷೆ ಇದೆ. ಇನ್ನು, ಸಾಮಾಜಿಕ ಜಾಲತಾಣಗಳಲ್ಲೂ ಸಿನಿಮಾ ಹವಾ ಜೋರಾಗಿದೆ. ಈಗ ಟಿಕೆಟ್​ ಬುಕ್ಕಿಂಗ್​ನಲ್ಲೂ ‘ರಾಬರ್ಟ್’​ ತನ್ನ ಅಬ್ಬರವನ್ನು ತೋರಿದ್ದಾನೆ. ಸಿನಿಮಾ ರಿಲೀಸ್​ಗೆ ಕೆಲವು ದಿನ ಬಾಕಿ ಇರುವಾಗಲೇ ಅನೇಕ ಚಿತ್ರಮಂದಿರಗಳಲ್ಲಿ ಶೋಗಳು ಸೋಲ್ಡ್​ ಔಟ್​ ಆಗಿವೆ. ಸಿನಿಮಾ ರಿಲೀಸ್​ಗೂ ಕೆಲ ದಿನ ಮೊದಲು ಆನ್​ಲೈನ್​ ಟಿಕೆಟ್​ ಬುಕ್ಕಿಂಗ್​ಗೆ ಅವಕಾಶ ನೀಡೋದು ವಾಡಿಕೆ. ಈಗ ‘ರಾಬರ್ಟ್’​ ಸಿನಿಮಾ ತಂಡ ಕೂಡ ನಾಲ್ಕು ದಿನ ಮೊದಲೇ ಆನ್​ಲೈನ್​ ಟಿಕೆಟ್​ ಬುಕ್ಕಿಂಗ್​ಗೆ ಅವಕಾಶ ನೀಡಿದೆ. ಇಂದು ಬೆಂಗಳೂರು ಸೇರಿ ಕೆಲ ಪ್ರಮುಖ ನಗರಗಳಲ್ಲಿರುವ ಚಿತ್ರ ಮಂದಿರದ ಆನ್​ಲೈನ್​ ಟಿಕೆಟ್​ ಬುಕ್ಕಿಂಗ್​ ಪ್ರಾರಂಭವಾಗಿದೆ. ಅಭಿಮಾನಿಗಳು ಮುಗಿಬಿದ್ದು ಟಿಕೆಟ್​ ಬುಕ್​ ಮಾಡುತ್ತಿದ್ದಾರೆ.

ದರ್ಶನ್​ ನಟನೆಯ ಬಹುತೇಕ ಸಿನಿಮಾಗಳು ರಿಲೀಸ್​ ಆದ ಮೊದಲ ದಿನ ಹೌಸ್​ಫುಲ್​ ಆಗಿವೆ. ಬಾಕ್ಸ್​ ಆಫೀಸ್​ನಲ್ಲೂ ದೊಡ್ಡ ಮಟ್ಟದ ಗಳಿಕೆ ಮಾಡಿ,  ಸಾಕಷ್ಟು ದಾಖಲೆಗಳನ್ನು ಕೂಡ ಸೃಷ್ಟಿಸಿದೆ. ಈಗ ರಿಲೀಸ್​​ ಆಗುತ್ತಿರುವ ‘ರಾಬರ್ಟ್’​ ಸಿನಿಮಾ ಮೊದಲ ದಿನದ ಗಳಿಕೆಯಲ್ಲಿ ಈ ದಾಖಲೆಗಳನ್ನು ಧೂಳಿಪಟ ಮಾಡುವ ಎಲ್ಲಾ ಲಕ್ಷಣ ಕಾಣುತ್ತಿದೆ. ಗುರುವಾರ ಶಿವರಾತ್ರಿ ಪ್ರಯುಕ್ತ ರಜೆ ಇದೆ. ಹೀಗಾಗಿ ದೊಡ್ಡ ಸಂಖ್ಯೆಯಲ್ಲೇ ಪ್ರೇಕ್ಷಕರು ಚಿತ್ರಮಂದಿರದತ್ತ ಹೆಜ್ಜೆ ಹಾಕುತ್ತಾರೆ. ಶುಕ್ರವಾರ ಚಿತ್ರರಂಗದ ಪಾಲಿಗೆ ವಿಶೇಷ ದಿನ. ಹೀಗಾಗಿ, ಅಂದು ಕೂಡ ಪ್ರೇಕ್ಷಕರು ಥಿಯೇಟರ್​ಗೆ ಬರುತ್ತಾರೆ. ಇನ್ನು, ಶನಿವಾರ-ಭಾನುವಾರ ವೀಕೆಂಡ್​ ಆದ್ದರಿಂದ ಅಂದು ಕೂಡ ದರ್ಶನ್​ ಸಿನಿಮಾ ಬಾಕ್ಸ್​ ಆಫೀಸ್​ ಧೂಳೆಬ್ಬಿಸುವ ಲಕ್ಷಣ ಇದೆ.

ಬೆಂಗಳೂರಿನ ವಿದ್ಯಾಪೀಠದಲ್ಲಿರುವ ಚಂದ್ರೋದಯ, ಜೆಪಿ ನಗರದ ಸಿದ್ಧೇಶ್ವರ ಸೇರಿ ಸಾಕಷ್ಟು ಚಿತ್ರಮಂದರಿಗಳಲ್ಲಿ ಮುಂಜಾನೆ 6 ಗಂಟೆಗೆ ರಾಬರ್ಟ್​ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಇವುಗಳಲ್ಲಿ ಕೆಲವು ಈಗಾಗಲೇ ಸೋಲ್ಡ್​ಔಟ್​ ಆಗಿದ್ದು, ಇನ್ನು ಕೆಲವೇ ಗಂಟೆಗಳಲ್ಲಿ ಹೌಸ್​ಫುಲ್​ ಆಗುವ ಸಾಧ್ಯತೆ ಇದೆ. ಇದು ದರ್ಶನ್​ ಸಿನಿಮಾದ ಹೈಪ್​ಗೆ ಎಷ್ಟಿದೆ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ.

ಈ ಹಿಂದೆ ತರುಣ್​ ಸುಧೀರ್​ ನಿರ್ದೇಶನ ಮಾಡಿದ್ದ ‘ಚೌಕ’ ಸಿನಿಮಾದಲ್ಲಿ ದರ್ಶನ್​ ಅವರು ರಾಬರ್ಟ್​ ಎಂಬ ಅತಿಥಿ ಪಾತ್ರವನ್ನು ಮಾಡಿದ್ದರು. ಈಗ ಅದೇ ಪಾತ್ರವನ್ನು ಮುಖ್ಯವಾಗಿ ಇಟ್ಟುಕೊಂಡು ತರುಣ್​ ಅವರು ಹೊಸ ಕಥೆ ಬರೆದು ‘ರಾಬರ್ಟ್​’ ಸಿನಿಮಾ ಮಾಡಿದ್ದಾರೆ. ಆಶಾ ಭಟ್​ ಸಿನಿಮಾದ ನಾಯಕಿ. ತೆಲುಗಿನ ಖಳ ಜಗಪತಿ ಬಾಬು ಈ ಸಿನಿಮಾದಲ್ಲಿ ಪ್ರಮುಖ ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ವಿನೋದ್​​ ಪ್ರಭಾಕರ್​, ರವಿಶಂಕರ್​, ಸೋನಲ್​ ಮಂಥೆರೋ, ಚಿಕ್ಕಣ್ಣ, ಅವಿನಾಶ್​, ದೇವರಾಜ್​, ಶಿವರಾಜ್​ ಕೆ.ಆರ್​. ಪೇಟೆ, ಐಶ್ವರ್ಯಾ ಪ್ರಸಾದ್​ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Roberrt: ಪ್ರೇಕ್ಷಕರು ‘ರಾಬರ್ಟ್​’ ಸಿನಿಮಾ ಯಾಕೆ ನೋಡಬೇಕು? ಇಲ್ಲಿದೆ 5 ಪ್ರಮುಖ ಕಾರಣಗಳು!

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ