Roberrt Kannada Movie Review: ದರ್ಶನ್​ ನಟನೆಯ ರಾಬರ್ಟ್​ ಸಿನಿಮಾದ ಫಸ್ಟ್​ ಹಾಫ್​ನಲ್ಲಿ ಏನೆಲ್ಲ ಇದೆ?

Roberrt Movie Review: ಟ್ರೈಲರ್​ನಲ್ಲಿ ದರ್ಶನ್​ ಸಾಕಷ್ಟು ಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ, ಪ್ರೇಕ್ಷಕರು ಸಾಕಷ್ಟು ಕುತೂಹಲಗಳೊಂದಿಗೆ ಚಿತ್ರಮಂದಿರಕ್ಕೆ ಕಾಲಿಟ್ಟಿದ್ದಾರೆ. ಹಾಗಾದರೆ, ರಾಬರ್ಟ್​ ಸಿನಿಮಾದ ಮೊದಲಾರ್ಧ ಹೇಗಿದೆ ಎನ್ನುವ ವಿಚಾರ ಈಗ ಗೊತ್ತಾಗಿದೆ.

Roberrt Kannada Movie Review: ದರ್ಶನ್​ ನಟನೆಯ ರಾಬರ್ಟ್​ ಸಿನಿಮಾದ ಫಸ್ಟ್​ ಹಾಫ್​ನಲ್ಲಿ ಏನೆಲ್ಲ ಇದೆ?
ನಟ ದರ್ಶನ್
Follow us
ರಾಜೇಶ್ ದುಗ್ಗುಮನೆ
|

Updated on:Mar 11, 2021 | 10:12 AM

ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡು ತೆರೆಗೆ ಬಂದಿರುವ ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಧೂಳೆಬ್ಬಿಸುತ್ತಿದೆ. ಮೊದಲ ದಿನ ರಾಜ್ಯಾದ್ಯಂತ ಬಹುತೇಕ ಎಲ್ಲಾ ಚಿತ್ರಮಂದಿರಗಳು ಹೌಸ್​​ಫುಲ್​ ಪ್ರದರ್ಶನ ಕಾಣುತ್ತಿದೆ. ಟ್ರೈಲರ್​ನಲ್ಲಿ ದರ್ಶನ್​ ಸಾಕಷ್ಟು ಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ, ಪ್ರೇಕ್ಷಕರು ಸಾಕಷ್ಟು ಕುತೂಹಲಗಳೊಂದಿಗೆ ಚಿತ್ರಮಂದಿರಕ್ಕೆ ಕಾಲಿಟ್ಟಿದ್ದಾರೆ. ಹಾಗಾದರೆ, ರಾಬರ್ಟ್​ ಸಿನಿಮಾದ ಮೊದಲಾರ್ಧ ಹೇಗಿದೆ ಎನ್ನುವ ವಿಚಾರ ಈಗ ಗೊತ್ತಾಗಿದೆ.

ಭಿನ್ನ ಪಾತ್ರದ ಮೂಲಕ ಎಂಟ್ರಿ ದರ್ಶನ್​ ಸಿನಿಮಾದಲ್ಲಿ ಎಂಟ್ರಿ ನೋಡೋಕೆ ಪ್ರೇಕ್ಷಕರು ತುದಿಗಾಲಿನಲ್ಲಿ ನಿಂತಿರುತ್ತಾರೆ. ಆ್ಯಕ್ಷನ್​ ದೃಶ್ಯಗಳೊಂದಿಗೆ ಅವರಿಗೆ ಎಂಟ್ರಿ ಕೊಡಿಸೋಕೆ ನಿರ್ದೇಶಕರು ಕಾಯುತ್ತಿರುತ್ತಾರೆ. ಆದರೆ, ಈ ಬಾರಿ ನಿರ್ದೇಶಕ ತರುಣ್​ ಸುಧೀರ್​ ದರ್ಶನ್​ಗೆ ಬೇರೆ ರೀತಿಯಲ್ಲಿ ಎಂಟ್ರಿ ಕೊಡಿಸಿದ್ದಾರೆ. ಹನುಮನ ಪಾತ್ರದ ಮೂಲಕ ದರ್ಶನ್​ ಎಂಟ್ರಿ ಕೊಡುತ್ತಾರೆ.

ಎಲ್ಲಕ್ಕಿಂತಲೂ ಭಿನ್ನವಾಗಿದೆ ಪಾತ್ರ ದರ್ಶನ್​ ಈ ಮೊದಲು ಸಾಕಷ್ಟು ಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಆದರೆ, ಈ ಸಿನಿಮಾದ ಪಾತ್ರ ಇವೆಲ್ಲವುಗಳಿಗಿಂತಲೂ ವಿಶಿಷ್ಟವಾಗಿದೆ. ಹಿಂದೆಂದೂ ಕಾಣಿಸಿಕೊಳ್ಳದ ರೀತಿಯಲ್ಲಿ ದರ್ಶನ್​ ಮಿಂಚಿದ್ದಾರೆ. ಇದು ಪ್ರೇಕ್ಷಕರಿಗೆ ತುಂಬಾನೇ ಇಷ್ಟವಾಗಿದೆ.

ನಾಯಕಿಗೆ ಮಾಸ್​ ಎಂಟ್ರಿ ಸಾಮಾನ್ಯವಾಗಿ ಸ್ಟಾರ್ ಹೀರೋಗಳ ಚಿತ್ರಗಳಲ್ಲಿ ನಾಯಕಿಯ ಪಾತ್ರ ಅಷ್ಟಾಗಿ ಹೈಲೈಟ್​ ಆಗುವುದಿಲ್ಲ. ಅಷ್ಟೇ ಅಲ್ಲ ಅವರ ಎಂಟ್ರಿ ಕೂಡ ತುಂಬಾನೇ ರೊಮ್ಯಾಂಟಿಕ್​ ಆಗಿರುತ್ತದೆ. ಆದರೆ, ರಾಬರ್ಟ್​ ಸಿನಿಮಾ ನಾಯಕಿ ಆಶಾ ಭಟ್​ಗೆ ಮಾಸ್ ಎಂಟ್ರಿ ಸಿಕ್ಕಿದೆ.

ಕಾಮಿಡಿ ಪಾತ್ರಗಳು ಕ್ಲಿಕ್​ ಸಿನಿಮಾ ಅಂದ ಮೇಲೆ ಅಲ್ಲಿ ಹಾಸ್ಯ ಅನ್ನೋದು ತುಂಬಾನೇ ಪ್ರಾಮುಖ್ಯತೆ ಪಡೆದುಕೊಳ್ಳುತ್ತದೆ. ಅದೇ ರೀತಿ, ರಾಬರ್ಟ್​ ಸಿನಿಮಾದ ಮೊದಲಾರ್ಧದಲ್ಲಿ ಕಾಮಿಡಿ ಪಾತ್ರಗಳು ಸಾಕಷ್ಟು ಕ್ಲಿಕ್​ ಆಗಿದೆ. ಶಿವರಾಜ್​ ಕೆಆರ್ ಪೇಟೆ, ಚಿಕ್ಕಣ್ಣ, ಧರ್ಮಣ್ಣ ಪಾತ್ರಗಳು ಸಾಕಷ್ಟು ಹೈಲೈಟ್​ ಆಗಿದೆ.

ಫಸ್ಟ್​ ಹಾಫ್​ನಲ್ಲಿ ಎರಡು ಆ್ಯಕ್ಷನ್​ ದೃಶ್ಯ ದರ್ಶನ್​ ಸಿನಿಮಾ ಎಂದಾಗ ನೆನಪಾಗೋದು ಆ್ಯಕ್ಷನ್​ ದೃಶ್ಯಗಳು. ರಾಬರ್ಟ್​ ಸಿನಿಮಾದಲ್ಲೂ ಸಾಕಷ್ಟು ಆ್ಯಕ್ಷನ್​ ಇದೆ ಎಂದು ಹೇಳಲಾಗಿತ್ತು. ಮೊದಲಾರ್ಧದಲ್ಲಿ ಕೇವಲ ಎರಡು ಆ್ಯಕ್ಷನ್​ ದೃಶ್ಯ ಮಾತ್ರ ಇಡಲಾಗಿದೆ. ಹೀಗಾಗಿ, ಪ್ರೇಕ್ಷಕರು ಎರಡನೇ ಆ್ಯಕ್ಷನ್​ ದೃಶ್ಯಕ್ಕಾಗಿ ಕಾದು ಕೂರಬೇಕಾಗಿದೆ.

ಮೊದಲಾರ್ಧದಲ್ಲಿ ಕಣ್ಣು ಹೊಡ್ಯಾಕ ಸಾಂಗ್​! ಕಣ್ಣು ಹೊಡ್ಯಾಕ ಹಾಡನ್ನು ಚಿತ್ರತಂಡ ಯೂಟ್ಯೂಬ್​ನಲ್ಲಿ ರಿಲೀಸ್​ ಮಾಡಿತ್ತು. ಈ ಹಾಡನ್ನು ನೋಡಿ ಅಭಿಮಾನಿಗಳು ಹುಚ್ಚೆದ್ದು ಕುಣಿದಿದ್ದರು. ಈ ಹಾಡು ಪ್ರೇಕ್ಷಕರಿಗೆ ಮೊದಲಾರ್ಧದಲ್ಲೇ ಎದುರುಗೊಳ್ಳಲಿದೆ. ಇದು ಅಭಿಮಾನಿಗಳನ್ನು ರಂಜಿಸುವ ಕೆಲಸ ಮಾಡುತ್ತಿದೆ.

ಕಥೆ ಬಿಟ್ಟುಕೊಟ್ಟಿಲ್ಲ… ಸಿನಿಮಾದ ಇಂಟರ್​ವಲ್​ ಬಂದರೂ ಕಥೆ ಏನು ಎಂಬುದನ್ನು ರಾಬರ್ಟ್​ ಗುಟ್ಟಾಗಿಯೇ ಇಟ್ಟಿದ್ದಾನೆ. ಇದು ಪ್ರೇಕ್ಷಕರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ಇದನ್ನೂ ಓದಿ: Roberrt Release: ಶುರುವಾಯ್ತು ‘ಬಾಕ್ಸಾಫೀಸ್‌’ ಮೇಲೆ ‘ರಾಬರ್ಟ್‌’ ರೇಡ್.. ಥಿಯೇಟರ್‌ಗೆ ಫ್ಯಾನ್ಸ್ ದಾಂಗುಡಿ

Published On - 9:24 am, Thu, 11 March 21

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್