Roberrt Movie: ದರ್ಶನ್​ ಕಟೌಟ್​ಗೆ ಹಾಲಿನ ಅಭಿಷೇಕ; ಶುರುವಾಯ್ತು ರಾಬರ್ಟ್​ ಸಿನಿಮಾ ಜ್ವರ

ಸಾಮಾನ್ಯವಾಗಿ ಸಿನಿಮಾ ರಿಲೀಸ್​ ಆದ ದಿನ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿ, ಪಟಾಕಿ ಸಿಡಿಸೋದು ವಾಡಿಕೆ. ಆದರೆ, ಈಗ ಸಿನಿಮಾ ರಿಲೀಸ್​ಗೆ ಅನೇಕ ದಿನಗಳು ಬಾಕಿ ಇರುವಾಗಲೇ ಹಾಲಿನ ಅಭಿಷೇಕ ಮಾಡಲಾಗುತ್ತಿದೆ.

Roberrt Movie: ದರ್ಶನ್​ ಕಟೌಟ್​ಗೆ ಹಾಲಿನ ಅಭಿಷೇಕ; ಶುರುವಾಯ್ತು ರಾಬರ್ಟ್​ ಸಿನಿಮಾ ಜ್ವರ
ಮಂಡ್ಯದಲ್ಲಿ ಹಾಲಿನ ಅಭಿಷೇಕ ಮಾಡುತ್ತಿರುವ ಅಭಿಮಾನಿಗಳು
Follow us
ರಾಜೇಶ್ ದುಗ್ಗುಮನೆ
|

Updated on: Mar 08, 2021 | 8:10 PM

ದರ್ಶನ್​ ನಟೆಯ ರಾಬರ್ಟ್​ ಸಿನಿಮಾ ತೆರೆಕಾಣೋಕೆ ಇನ್ನೂ ನಾಲ್ಕು ದಿನ ಬಾಕಿ ಉಳಿದಿವೆ. ಹೀಗಿರುವಾಗಲೇ ಸಿನಿಮಾದ ಅಬ್ಬರ ಜೋರಾಗಿದೆ. ಆನ್​ಲೈನ್​ ಟಿಕೆಟ್​ ಬುಕಿಂಗ್​ನಲ್ಲಿ ರಾಬರ್ಟ್ ಅಬ್ಬರ ತೋರುತ್ತಿದ್ದು, ಗುರುವಾರದ ಅನೇಕ ಶೋಗಳು ಈಗಾಗಲೇ ಸೋಲ್ಡ್​ ಔಟ್​ ಆಗಿದೆ. ಇನ್ನು, ಸಿನಿಮಾ ರಿಲೀಸ್​ಗೆ ಕೆಲ ದಿನ ಬಾಕಿ ಇರುವಾಗಲೇ ಅಭಿಮಾನಿಗಳು ಸಂಭ್ರಮಾಚರಣೆ ಆರಂಭಿಸಿದ್ದಾರೆ.

ಅಭಿಮಾನಿಗಳು ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಅವರನ್ನು ಬೆಳ್ಳಿಪರದೆ ಮೇಲೆ ನೋಡಿ ತುಂಬ ದಿನಗಳಾಗಿವೆ. 2019ರ ಡಿಸೆಂಬರ್​ನಲ್ಲಿ ‘ಒಡೆಯ’ ಚಿತ್ರ ತೆರೆಕಂಡಿತ್ತು. ನಂತರ ಲಾಕ್​ಡೌನ್​ ಆರಂಭ ಆಗಿದ್ದರಿಂದ ‘ರಾಬರ್ಟ್​’ ಆಗಮನ ತಡವಾಯಿತು. ಒಂದು ವರ್ಷಕ್ಕಿಂತಲೂ ದೀರ್ಘವಾದ ಗ್ಯಾಪ್​ ಬಳಿಕ ದರ್ಶನ್​ ಅವರು ಅಭಿಮಾನಿಗಳನ್ನು ರಂಜಿಸಲು ಬರುತ್ತಿರುವುದರಿಂದ ತಮ್ಮ ನೆಚ್ಚಿನ ನಟನನ್ನು ದೊಡ್ಡ ಪರದೆಯಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ. ಹೀಗಾಗಿ ರಾಬರ್ಟ್​ ನೋಡೋಕೆ ಅಭಿಮಾನಿಗಳು ತುದಿಕಾಲಿನಲ್ಲಿ ನಿಂತಿದ್ದಾರೆ.

ಸಾಮಾನ್ಯವಾಗಿ ಸಿನಿಮಾ ರಿಲೀಸ್​ ಆದ ದಿನ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿ, ಪಟಾಕಿ ಸಿಡಿಸೋದು ವಾಡಿಕೆ. ಆದರೆ, ರಾಬರ್ಟ್​ ಸಿನಿಮಾ ರಿಲೀಸ್​ ಆಗೋಕೆ ಇನ್ನೂ ಕೆಲ ದಿನ ಬಾಕಿ ಇರುವಾಗಲೇ ದರ್ಶನ್​ ಫೋಟೋಗೆ ಹಾಲಿನ ಅಭಿಷೇಕ ಮಾಡುತ್ತಿದ್ದಾರೆ ಅಭಿಮಾನಿಗಳು.

ಮಂಡ್ಯದಲ್ಲಿ ರಾಬರ್ಟ್​ ಹವಾ ಜೋರಾಗಿದೆ. ಇಲ್ಲಿನ ದರ್ಶನ್​ ಅಭಿಮಾನಿಗಳು ದರ್ಶನ್​ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿದ್ದಾರೆ. ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಅಷ್ಟೇ ಅಲ್ಲ, ದರ್ಶನ್​ ಸಿನಿಮಾ ಹವಾ ನೋಡಿ ಸಾಕಷ್ಟು ಮಂದಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ತರುಣ್​ ಸುಧೀರ್​ ನಿರ್ದೇಶನ ಮಾಡಿದ್ದ ‘ಚೌಕ’ ಸಿನಿಮಾದಲ್ಲಿ ದರ್ಶನ್​ ಅವರು ರಾಬರ್ಟ್​ ಎಂಬ ಅತಿಥಿ ಪಾತ್ರವನ್ನು ಮಾಡಿದ್ದರು. ಈಗ ಅದೇ ಪಾತ್ರವನ್ನು ಮುಖ್ಯವಾಗಿ ಇಟ್ಟುಕೊಂಡು ತರುಣ್​ ಅವರು ಹೊಸ ಕಥೆ ಬರೆದು ‘ರಾಬರ್ಟ್​’ ಸಿನಿಮಾ ಮಾಡಿದ್ದಾರೆ. ಆಶಾ ಭಟ್​ ಸಿನಿಮಾದ ನಾಯಕಿ. ತೆಲುಗಿನ ಖಳ ಜಗಪತಿ ಬಾಬು ಈ ಸಿನಿಮಾದಲ್ಲಿ ಪ್ರಮುಖ ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ವಿನೋದ್​​ ಪ್ರಭಾಕರ್​, ರವಿಶಂಕರ್​, ಸೋನಲ್​ ಮಂಥೆರೋ, ಚಿಕ್ಕಣ್ಣ, ಅವಿನಾಶ್​, ದೇವರಾಜ್​, ಶಿವರಾಜ್​ ಕೆ.ಆರ್​. ಪೇಟೆ, ಐಶ್ವರ್ಯಾ ಪ್ರಸಾದ್​ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Roberrt Movie: ನಾಲ್ಕು ದಿನ ಮೊದಲೇ ಸೋಲ್ಡ್​ ಔಟ್​ ಆದ ರಾಬರ್ಟ್​ ಟಿಕೆಟ್​; ಇದು ದರ್ಶನ್​ ಹವಾ!

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್