ಮಂತ್ರಾಲಯದ ಗೋಶಾಲೆಯಲ್ಲಿ ಕಾಲ ಕಳೆದ ಡಿ ಬಾಸ್​ ದರ್ಶನ್​! ವಿಡಿಯೋ ವೈರಲ್​

ರಾಬರ್ಟ್​ ಸಿನಿಮಾದ ಯಶಸ್ಸಿನ ಖುಷಿಯಲ್ಲಿ ಇರುವ ದರ್ಶನ್​ ಅವರು ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿನ ಗೋಶಾಲೆಗೂ ತೆರಳಿ ಕಾಲ ಕಳೆದಿದ್ದಾರೆ.

ಮಂತ್ರಾಲಯದ ಗೋಶಾಲೆಯಲ್ಲಿ ಕಾಲ ಕಳೆದ ಡಿ ಬಾಸ್​ ದರ್ಶನ್​! ವಿಡಿಯೋ ವೈರಲ್​
ಮಂತ್ರಾಲಯದ ಗೋಶಾಲೆಯಲ್ಲಿ ದರ್ಶನ್​
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Mar 18, 2021 | 4:28 PM

‘ಚಾಲೆಂಜಿಂಗ್ ಸ್ಟಾರ್​’ ದರ್ಶನ್​ಗೆ ರಾಬರ್ಟ್​ ಸಿನಿಮಾದಿಂದ ಬಹುದೊಡ್ಡ ಗೆಲುವು ಸಿಕ್ಕಿದೆ. ಬಾಕ್ಸ್​ ಆಫೀಸ್​ನಲ್ಲಿ 60 ಕೋಟಿ ರೂ.ಗಿಂತಲೂ ಹೆಚ್ಚು ಕಲೆಕ್ಷನ್​ ಮಾಡಿ ಈ ಸಿನಿಮಾ ಮನ್ನುಗ್ಗುತ್ತಿದೆ. ಈ ಖುಷಿಯಲ್ಲಿ ದರ್ಶನ್ ಅವರು ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ರಾಯರ ದರ್ಶನ ಪಡೆದು ಧನ್ಯರಾಗಿದ್ದಾರೆ. ಈ ವೇಳೆ ಅವರು ಪ್ರಾಣಿಪ್ರೀತಿಯನ್ನು ಮರೆತಿಲ್ಲ.

ಹೌದು, ದರ್ಶನ್​ ಅವರಿಗೆ ಪ್ರಾಣಿಗಳನ್ನು ಕಂಡರೆ ವಿಶೇಷ ಪ್ರೀತಿ. ಎಲ್ಲಿಯೇ ಹೋದರೂ ಪ್ರಾಣಿಗಳ ಬಗ್ಗೆ ವಿಶೇಷ ಆಸಕ್ತಿ ತೋರಿಸುತ್ತಾರೆ. ಅದೇ ಕಾರಣದಿಂದ ಅವರು ಮಂತ್ರಾಲಯದ ಗೋಶಾಲೆಗೆ ಭೇಟಿ ನೀಡಿದ್ದಾರೆ. ಅಲ್ಲಿನ ಹಸುಗಳನ್ನು ಮುದ್ದಿಸಿದ್ದಾರೆ. ಮುಗ್ಧ ಪ್ರಾಣಿಗಳ ಮೈದಡವಿ ಸಂಭ್ರಮಿಸಿದ್ದಾರೆ. ಅಲ್ಲಿರುವ ಎಲ್ಲ ತಳಿಗಳ ಹಸುಗಳ ಬಗ್ಗೆ ಮಾಹಿತಿ ಕೇಳಿ ತಿಳಿದುಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ಈಗ ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ.

ಮಂತ್ರಾಲಯದಲ್ಲಿ ಗುರು ಭಕ್ತಿ ಉತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಮಂತ್ರಾಲಯದ ರಾಯರ ಮಠಕ್ಕೆ ನಟ​ ದರ್ಶನ್​ ಭೇಟಿ ನೀಡಿದ್ದು ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶಾಲು ಹೊದಿಸಿ ಸನ್ಮಾನ ಮಾಡಿದ್ರು. ಬಳಿಕ ದರ್ಶನ್ ಪೀಠಾಧಿಪತಿಯ ಕಾಲನ್ನು ಮುಟ್ಟಿ ನಮಸ್ಕರಿಸಿದ್ರು. ಇನ್ನು ಇದೇ ವೇಳೆ ನಟ ದರ್ಶನ್ ಕಾಮಿಡಿ ಕಿಂಗ್ ಪ್ರಾಣೇಶ್ ಅವರ ಮಾತುಗಳಿಗೆ ಮನ ಬಿಚ್ಚಿ ನಕ್ಕರು.

ಕಳೆದ ಗುರುವಾರ (ಮಾ.11) ರಾಬರ್ಟ್​ ಸಿನಿಮಾ ತೆರೆಕಂಡಿತ್ತು. ತರುಣ್​ ಸುಧೀರ್​ ನಿರ್ದೇಶನದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಮೊದಲ ದಿನವೇ 17.24 ಕೋಟಿ ರೂ. ಬಾಚಿಕೊಂಡಿತು. ಎರಡನೇ ದಿನ 12.78 ಕೋಟಿ, ಮೂರನೇ ದಿನ 14.10 ಕೋಟಿ ಹಾಗೂ ನಾಲ್ಕನೇ ದಿನ ಬರೋಬ್ಬರಿ 15.68 ಕೋಟಿ ರೂ. ಹರಿದುಬಂತು. ಒಂದು ವಾರದ ಬಳಿಕವೂ ರಾಬರ್ಟ್​ ನಾಗಾಲೋಟ ಮುಂದುವರಿದಿದೆ. ಫ್ಯಾಮಿಲಿ ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರಮಂದಿರಕ್ಕೆ ಬರುತ್ತಿರುವುದು ರಾಬರ್ಟ್​ ತಂಡಕ್ಕೆ ಪ್ಲಸ್​ ಪಾಯಿಂಟ್ ಆಗಿದೆ.

ಇದನ್ನೂ ಓದಿ: Darshan: ಪೈರಸಿ ತಡೆಯೋಕೆ ದರ್ಶನ್​ ಹೊಸ ತಂತ್ರ!; ಇದು ಜಾರಿಗೆ ಬಂದ್ರೆ ಕಳ್ಳರು ಸಿಕ್ಕಿ ಬೀಳೋದು ಪಕ್ಕಾ

ರಾಬರ್ಟ್​ ಸಕ್ಸಸ್​ ಮೀಟ್​ ವೇದಿಕೆಯಲ್ಲೇ ನಿರ್ದೇಶಕ ತರುಣ್​ ಸುಧೀರ್​ ಮದುವೆ ಮಾತುಕತೆ!

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು