
ರಾಬರ್ಟ್ ಸಿನಿಮಾ ಇಂದು (ಮಾ.11) ರಿಲೀಸ್ ಆಗಿದೆ. ಮೊದಲ ದಿನವೇ 650ಕ್ಕೂ ಹೆಚ್ಚು ಚಿತ್ರಮಂದಿರದಲ್ಲಿ ರಾಬರ್ಟ್ ಸಿನಿಮಾ ಬಿಡುಗಡೆ ಆಗಿದ್ದು, ಅಂದಾಜು 2750 ಶೋ ನಡೆಯಲಿದೆ. ಜತೆಗೆ 100ಕ್ಕೂ ಹೆಚ್ಚು ಮಲ್ಟಿಪ್ಲೆಕ್ಸ್ಗಳಲ್ಲಿ ರಾಬರ್ಟ್ ಅಬ್ಬರಿಸಲಿದ್ದಾನೆ. ಮಲ್ಟಿಪ್ಲೆಕ್ಸ್ ಮತ್ತು ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳನ್ನೂ ಸೇರಿಸಿದರೆ 3889 ಶೋಗಳಲ್ಲಿ ರಾಬರ್ಟ್ ಸಿನಿಮಾ ಸೌಂಡು ಮಾಡಲಿದೆ. ರಾಬರ್ಟ್ ಸಿನಿಮಾ ನೋಡಿದ ಅಭಿಮಾನಿಗಳು ಟ್ವಿಟ್ಟರ್ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ರಾಬರ್ಟ್ ಸಿನಿಮಾ ನೋಡಿ ಅನೇಕರು ಮೆಚ್ಚಿಕೊಂಡಿದ್ದಾರೆ. ದರ್ಶನ್ ಅಭಿನಯ, ಸಿನಿಮಾದ ಕಥೆ ನೋಡಿ ಅನೇಕರು ಮೆಚ್ಚಿಕೊಂಡಿದ್ದಾರೆ. ಈ ಹಿಂದೆ ತರುಣ್ ಸುಧೀರ್ ನಿರ್ದೇಶನ ಮಾಡಿದ್ದ ‘ಚೌಕ’ ಸಿನಿಮಾದಲ್ಲಿ ದರ್ಶನ್ ಅವರು ರಾಬರ್ಟ್ ಎಂಬ ಅತಿಥಿ ಪಾತ್ರವನ್ನು ಮಾಡಿದ್ದರು. ಈಗ ಅದೇ ಪಾತ್ರವನ್ನು ಮುಖ್ಯವಾಗಿ ಇಟ್ಟುಕೊಂಡು ತರುಣ್ ಅವರು ಹೊಸ ಕಥೆ ಬರೆದು ‘ರಾಬರ್ಟ್’ ಸಿನಿಮಾ ಮಾಡಿದ್ದಾರೆ. ಆಶಾ ಭಟ್ ಸಿನಿಮಾದ ನಾಯಕಿ. ತೆಲುಗಿನ ಖಳ ಜಗಪತಿ ಬಾಬು ಈ ಸಿನಿಮಾದಲ್ಲಿ ಪ್ರಮುಖ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ವಿನೋದ್ ಪ್ರಭಾಕರ್, ರವಿಶಂಕರ್, ಸೋನಲ್ ಮಂಥೆರೋ, ಚಿಕ್ಕಣ್ಣ, ಅವಿನಾಶ್, ದೇವರಾಜ್, ಶಿವರಾಜ್ ಕೆ.ಆರ್. ಪೇಟೆ, ಐಶ್ವರ್ಯಾ ಪ್ರಸಾದ್ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.
ಇನ್ನೂ ಕೆಲವರು ಸಿನಿಮಾ ನೋಡಿದ ನಂತರ ಅನೇಕರು ಸಿನಿಮಾ ಅಷ್ಟೊಂದು ಉತ್ತಮವಾಗಿಲ್ಲ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: Roberrt Kannada Movie Review: ದರ್ಶನ್ ನಟನೆಯ ರಾಬರ್ಟ್ ಸಿನಿಮಾದ ಫಸ್ಟ್ ಹಾಫ್ನಲ್ಲಿ ಏನೆಲ್ಲ ಇದೆ?